ಬೇಸ್ತು ಬಿದ್ದ ಬಿಜೆಪಿ ಶಾಸಕ ‘ಡಿಜಿಟಲ್ ಅರೆಸ್ಟ್‌’: ಜನಸಾಮಾನ್ಯರ ಗತಿಯೇನು?

Date:

ಬಿಜೆಪಿ ಎಂಎಲ್‌ಸಿ ಶೈಲೇಂದ್ರ ಸಿಂಗ್ ಅವರನ್ನು ಸುಮಾರು ಒಂದೂವರೆ ಗಂಟೆಗಳ ಕಾಲ ‘ಡಿಜಿಟಲ್ ಅರೆಸ್ಟ್‌’ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಈ ವಿಚಾರದಲ್ಲಿ ಪೊಲೀಸರು ಸದ್ಯ ಪ್ರಕರಣ ದಾಖಲಿಸಿದ್ದಾರೆ.

ಮಾರ್ಚ್ 2 ರಂದು ಅಪರಿಚಿತ ಸಂಖ್ಯೆಯಿಂದ ಶೈಲೇಂದ್ರ ಸಿಂಗ್ ಅವರಿಗೆ ಕರೆ ಬಂದಿದ್ದು, ಕರೆ ಮಾಡಿದವರು ಮುಂಬೈ ಭಯೋತ್ಪಾದನಾ ನಿಗ್ರಹ ದಳದ (ಎಟಿಎಸ್) ಅಧಿಕಾರಿ ಎಂದು ಹೇಳಿಕೊಂಡಿದ್ದರು. ಹಾಗೆಯೇ ಸಿಂಗ್ ಬ್ಯಾಂಕ್ ಖಾತೆಯನ್ನು ಹಣ ವರ್ಗಾವಣೆ ಮತ್ತು ಇತರ ಅನುಮಾನಾಸ್ಪದ ಚಟುವಟಿಕೆಗಳಿಗೆ ಬಳಸಲಾಗುತ್ತಿದೆ ಎಂದು ಆರೋಪಿಸಿದ್ದರು. ಕೆನರಾ ಬ್ಯಾಂಕ್‌ನಲ್ಲಿ ಸಿಂಗ್ ಹೆಸರಲ್ಲಿ ಖಾತೆಯಿದೆ ಎಂದು ಹೇಳಿದ್ದರು ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ? ಬೆಂಗಳೂರಿಗೂ ಸದ್ದಿಲ್ಲದೆ ಬಂತು ಡಿಜಿಟಲ್ ಅರೆಸ್ಟ್ ಕಂಪನಿ: ಭಯ ಬಿಡಿ ಜಾಗೃತೆ ವಹಿಸಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಲಕ್ನೋ ಮತ್ತು ಸುಲ್ತಾನಪುರದ ಹೊರಗೆ ನನಗೆ ಯಾವುದೇ ಬ್ಯಾಂಕ್ ಖಾತೆ ಇಲ್ಲ ಎಂದು ನಾನು ಅವರಿಗೆ ಹೇಳಿದೆ. ಅವರು ನನ್ನನ್ನು ಸುಮಾರು ಒಂದೂವರೆ ಗಂಟೆಗಳ ಕಾಲ ವೀಡಿಯೊ ಕರೆಯಲ್ಲಿಯೇ ಇರುವಂತೆ ಮಾಡಿದರು. ಕೋಣೆಯೊಳಗೆಯೇ ಇರುವಂತೆ, ಯಾರೊಂದಿಗೂ ಮಾತನಾಡದಂತೆ ತಿಳಿಸಿದ್ದರು” ಎಂದು ಸಿಂಗ್ ಮಾಹಿತಿ ನೀಡಿದ್ದಾರೆ.

ಕರೆ ಮಾಡಿದವರು ತಮ್ಮ ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಖಾತೆಗಳಿಗೆ ಸಂಬಂಧಿಸಿದ ವಿವರಗಳನ್ನು ಪದೇ ಪದೇ ಕೇಳಿದ್ದರು. ಇದರಿಂದಾಗಿ ಸಿಂಗ್‌ನ ಕೆಲವು ಪರಿಚಯಸ್ಥರು ಅನುಮಾನಗೊಂಡು ಫೋನ್ ಸಂಖ್ಯೆಯನ್ನು ಪರಿಶೀಲಿಸಿದಾಗ ಅದು ಮುಂಬೈ ಎಟಿಎಸ್‌ ಅಲ್ಲ, ಬದಲಾಗಿ ಮಧ್ಯಪ್ರದೇಶದ ಸತ್ನಾದ ಮಹಿಳೆಯ ಹೆಸರಿನಲ್ಲಿ ನೋಂದಾಯಿಸಲಾಗಿರುವ ಸಂಖ್ಯೆ ಎಂದು ತಿಳಿದುಬಂದಿದೆ.

ಕರೆ ಮಾಡಿದವರು ತಮ್ಮ ಗುರುತು ಬಹಿರಂಗಗೊಳ್ಳಬಹುದು ಎಂದು ಭಾವಿಸಿದಾಗ ಸಂಪರ್ಕ ಕಡಿತಗೊಳಿಸಿದ್ದಾರೆ. ನಂತರ ಸಿಂಗ್ ಸುಲ್ತಾನ್‌ಪುರದ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸದ್ಯ ಪೊಲೀಸರು ಕರೆ ಮಾಡಿದ ಫೋನ್ ಸಂಖ್ಯೆಗಳು ಮತ್ತು ಐಪಿ ವಿಳಾಸಗಳನ್ನು ಟ್ರ್ಯಾಕ್ ಮಾಡುತ್ತಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ದೇಶದಲ್ಲಿ ಹೆಚ್ಚುತ್ತಿರುವ ‘ಡಿಜಿಟಲ್ ಅರೆಸ್ಟ್’ ಪ್ರಕರಣಗಳು

ಅಪರಾಧಿಗಳು ಅಧಿಕಾರಿಗಳಂತೆ ನಟಿಸಿ ಜನರನ್ನು ಹೆದರಿಸಿ ಹಣವನ್ನು ಲೂಟಿ ಮಾಡುವ ಡಿಜಿಟಲ್ ಅರೆಸ್ಟ್ ಎಂಬ ಸೈಬರ್ ವಂಚನೆ ಅಧಿಕವಾಗುತ್ತಿದೆ. ಹೆಚ್ಚಾಗಿ ವಂಚಕರು ಪೊಲೀಸ್, ಸಿಬಿಐ, ಅಥವಾ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ಅಧಿಕಾರಿಗಳ ಹೆಸರಿನಲ್ಲಿ ಫೋನ್ ಕರೆ ಅಥವಾ ವಿಡಿಯೋ ಕರೆ ಮಾಡುತ್ತಿದ್ದಾರೆ. ನಿಮ್ಮ ಹೆಸರಿನಲ್ಲಿ ಬಂದಿರುವ ಪಾರ್ಸೆಲ್‌ನಲ್ಲಿ ಡ್ರಗ್ಸ್ ಅಥವಾ ಅಕ್ರಮ ವಸ್ತುಗಳಿವೆ ಎಂದು ಅಥವಾ ನೀವು ಮನಿ ಲಾಂಡರಿಂಗ್‌ನಲ್ಲಿ ಭಾಗಿಯಾಗಿದ್ದೀರಿ ಎಂದು ಸುಳ್ಳು ಆರೋಪ ಮಾಡಿ ಹಣ ದೋಚುತ್ತಿದ್ದಾರೆ.

ಇತ್ತೀಚೆಗೆ ಬೆಂಗಳೂರಿನ ಇಂದಿರಾನಗರದ 57 ವರ್ಷದ ಐಟಿ ಕಂಪನಿ ಎಕ್ಸಿಕ್ಯೂಟಿವ್ ಒಬ್ಬರು ಸುಮಾರು ₹31.83 ಕೋಟಿ ಹಣವನ್ನು ಕಳೆದುಕೊಂಡಿದ್ದಾರೆ. ವಂಚಕರು ತಮ್ಮನ್ನು ಸಿಬಿಐ ಮತ್ತು ಆರ್‌ಬಿಐ ಅಧಿಕಾರಿಗಳೆಂದು ಪರಿಚಯಿಸಿಕೊಂಡು, ಅವರ ಹೆಸರಿನ ಪಾರ್ಸೆಲ್‌ನಲ್ಲಿ ಮಾದಕ ವಸ್ತುಗಳಿವೆ ಎಂದು ಹೆದರಿಸಿ ಬರೋಬ್ಬರಿ ಆರು ತಿಂಗಳ ಕಾಲ “ಡಿಜಿಟಲ್ ಕಸ್ಟಡಿ”ಯಲ್ಲಿ ಇರಿಸಿದ್ದರು.

ಇನ್ನು ಮುಂಬೈ ಮೂಲದ ಉದ್ಯಮಿಯೊಬ್ಬರು ಜಾರಿ ನಿರ್ದೇಶನಾಲಯ (ED) ಮತ್ತು ಸಿಬಿಐ ಅಧಿಕಾರಿಗಳ ಸೋಗಿನಲ್ಲಿದ್ದ ವಂಚಕರಿಗೆ ಬರೋಬ್ಬರಿ ₹58.13 ಕೋಟಿ ಹಣವನ್ನು ವರ್ಗಾಯಿಸಿ ವಂಚನೆಗೆ ಒಳಗಾಗಿದ್ದರು. ಈ ಹಣವನ್ನು ವಿದೇಶಗಳಿಗೆ ಕ್ರಿಪ್ಟೋಕರೆನ್ಸಿ ಮೂಲಕ ವರ್ಗಾಯಿಸಲಾಗಿತ್ತು. ಇನ್ನು ಮೈಸೂರಿನ ಇಬ್ಬರು ಹಿರಿಯ ನಾಗರಿಕರು ಎನ್‌ಐಎ ಅಧಿಕಾರಿಗಳ ಹೆಸರಿನಲ್ಲಿ ಬಂದ ಕರೆಗೆ ಮರುಳಾಗಿ ₹1.92 ಕೋಟಿ ಹಣವನ್ನು ಕಳೆದುಕೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಮಧ್ಯಪ್ರಾಚ್ಯ ಸಂಘರ್ಷ | ಕದನ ವಿರಾಮ ಎಂದ ಟ್ರಂಪ್; ಮಾತುಕತೆ ನಡೆದಿಲ್ಲವೆಂದ ಇರಾನ್

ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷವನ್ನು ಕೊನೆಗಾಣಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ನಾನಾ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...