ಸಾರ್ವಜನಿಕ ಕಾರ್ಯಕ್ರಮದಲ್ಲಿ ಶಾಸಕಿಯ ಮೈಮುಟ್ಟಿ ಅಸಭ್ಯವಾಗಿ ವರ್ತಿಸಿದ ಬಿಜೆಪಿ ಸಂಸದ ಸತೀಶ್ ಗೌತಮ್

Date:

ಉತ್ತರ ಪ್ರದೇಶದ ಬಿಜೆಪಿ ಸಂಸದ ಸತೀಶ್ ಗೌತಮ್ ಸಾರ್ವಜನಿಕ ಕಾರ್ಯಕ್ರಮವೊಂದರ ವೇದಿಕೆಯಲ್ಲೇ ಶಾಸಕಿಯೋರ್ವರ ಮೈಮುಟ್ಟಿ ಅಸಭ್ಯವಾಗಿ ವರ್ತಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲಾಗಿದೆ.

ಉತ್ತರ ಪ್ರದೇಶದ ಅಲಿಘಢ್‌ನ ಕೋಲ್ ಪ್ರದೇಶದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಗೌತಮ್ ಅವರು ವೇದಿಕೆಯಲ್ಲಿದ್ದಾಗ ಶಾಸಕಿ ಮುಕ್ತಾ ರಾಜಾ ಅವರ ಭುಜದ ಮೇಲೆ ಕೈ ಹಾಕಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ. ಸದ್ಯ ಈ ವಿಡಿಯೋ ಸೋಷಿಯಲ್‌ ಮೀಡಿಯಾಗಳಲ್ಲಿ ವೈರಲ್ ಆಗಿದ್ದು, ಬಿಜೆಪಿ ಸಂಸದನ ನಡೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.

ಸಂಸದನ ಈ ನಡೆಯ ಬಳಿಕ ಶಾಸಕಿಗೆ ಇರುಸುಮುರುಸು ಉಂಟಾದ ಬಳಿಕ ತನ್ನ ಸ್ಥಾನವನ್ನು ಬದಲಾಯಿಸಿದರು ಎಂದು ವರದಿಯಾಗಿದೆ. ಸೆಪ್ಟೆಂಬರ್ 25 ರಂದು ನಡೆದ ಈ ಬೆಳವಣಿಗೆಯು, ವಿಡಿಯೋ ಸೋಷಿಯಲ್‌ ಮೀಡಿಯಾಗಳಲ್ಲಿ ವೈರಲ್ ಆದ ನಂತರ ಬೆಳಕಿಗೆ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವೇದಿಕೆಯಲ್ಲಿ ಉತ್ತರ ಪ್ರದೇಶದ ಸಾರಿಗೆ ಸಚಿವ ದಯಾಶಂಕರ್ ಸಿಂಗ್, ಉನ್ನತ ಶಿಕ್ಷಣ ಸಚಿವ ಯೋಗೇಂದ್ರ ಉಪಾಧ್ಯಾಯ, ಮಾಜಿ ಮೇಯರ್ ಶಕುಂತಲಾ ಭಾರತಿ, ಬಿಜೆಪಿ ಕಾರ್ಯಕಾರಿಣಿ ಸದಸ್ಯೆ ಪೂನಂ ಬಜಾಜ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ವಿಜಯ್ ಸಿಂಗ್ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದ ವೇದಿಕೆಯಲ್ಲೇ ಈ ಬೆಳವಣಿಗೆ ನಡೆದಿದೆ.

ಈ ಬೆಳವಣಿಗೆಯ ಸಂದರ್ಭದಲ್ಲಿ ಬಿಜೆಪಿ ಶಾಸಕ ಬರೌಲಿ ಠಾಕೂರ್ ಜೈವೀರ್ ಸಿಂಗ್ ಅವರು, ಶಾಸಕಿಯೊಂದಿಗೆ ಬಿಜೆಪಿ ಸಂಸದರ ನಡೆಯನ್ನು ಗಮನಿಸುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ವಿಡಿಯೋ ವೈರಲ್ ಆದ ಬಳಿಕ ಇದನ್ನು ಖಂಡಿಸಿರುವ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಮಾಧ್ಯಮ ವಕ್ತಾರ ಸುರೇಂದ್ರ ರಜಪೂತ್, “ಇದು ಸುಸಂಸ್ಕೃತ ಬಿಜೆಪಿಯ ವಾಸ್ತವ ಸಂಸ್ಕೃತಿ” ಎಂದು ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಉತ್ತರ ಪ್ರದೇಶ ಕಾಂಗ್ರೆಸ್, “ಕಾರ್ಯಕ್ರಮದ ಮಧ್ಯೆ ಶಾಸಕಿ ಮುಕ್ತಾ ರಾಜಾ ಅವರಿಗೆ ಬಹಿರಂಗವಾಗಿ ಕಿರುಕುಳ ನೀಡುತ್ತಿರುವ ಅಲಿಘರ್ ಸಂಸದ ಸತೀಶ್ ಗೌತಮ್ ಅವರಿಂದಲೇ ಈ ರೀತಿ ದೌರ್ಜನ್ಯ ಆಗುವುದಾದರೆ ಸಾಮಾನ್ಯ ಮಹಿಳೆಯರು ಮತ್ತು ಹುಡುಗಿಯರು ಸುರಕ್ಷಿತರಾಗುತ್ತಾರೆಯೇ?” ಎಂದು ಪ್ರಶ್ನಿಸಿದೆ‌.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...