ಮಹಾರಾಷ್ಟ್ರ ವಿಧಾನಸಭೆ ಚುನಾವಣೆ: 99 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಬಿಜೆಪಿ

Date:

ನವೆಂಬರ್ 20ರಂದು ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ 99 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಘೋಷಿಸಲಾಗಿದೆ.

288 ಸ್ಥಾನಗಳಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಬಿಜೆಪಿ, ಶಿವಸೇನಾ (ಶಿಂದೆ ಬಣ) ಮತ್ತು ಎನ್​ಸಿಪಿ (ಅಜಿತ್ ಪವಾರ್) ಪಕ್ಷಗಳು ಮಹಾಯುತಿ ಮೈತ್ರಿಕೂಟವಾಗಿ ಕಣಕ್ಕಿಳಿದಿವೆ. ಈ 288 ಸ್ಥಾನಗಳ ಪೈಕಿ 260 ಸ್ಥಾನಗಳಿಗೆ ಈ ಮೈತ್ರಿಕೂಟ ಪಕ್ಷಗಳ ಮಧ್ಯೆ ಸೀಟು ಹಂಚಿಕೆ ಆಗಿದೆ. ಉಳಿದ 28 ಸ್ಥಾನಗಳಿಗೆ ಮಾತುಕತೆ ನಡೆಯುತ್ತಿದೆ.

ಮೂಲಗಳ ಪ್ರಕಾರ 260 ಸ್ಥಾನಗಳಲ್ಲಿ ಬಿಜೆಪಿಗೆ 142 ಕ್ಷೇತ್ರಗಳು, ಶಿವಸೇನಾ ಮತ್ತು ಎನ್​ಸಿಪಿ ಪಕ್ಷಗಳಿಗೆ ಕ್ರಮವಾಗಿ 66 ಮತ್ತು 52 ಕ್ಷೇತ್ರಗಳು ಸಿಕ್ಕಿವೆ ಎನ್ನಲಾಗಿದೆ. ಇನ್ನುಳಿದ 28 ಕ್ಷೇತ್ರಗಳನ್ನೂ ಶೀಘ್ರದಲ್ಲೇ ಹಂಚಿಕೆ ಮಾಡುವ ಸಾಧ್ಯತೆಯಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿ ಸದ್ಯ 99 ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಈ ಪೈಕಿ ಮಾಜಿ ಮುಖ್ಯಮಂತ್ರಿ ಮತ್ತು ಹಾಲಿ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ನಾಗಪುರ್ ನೈರುತ್ಯ ಕ್ಷೇತ್ರದ ಅಭ್ಯರ್ಥಿಯಾಗಿದ್ದಾರೆ. ಮಹಾರಾಷ್ಟ್ರ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಚಂದ್ರಶೇಖರ್ ಬವಾನ್​ಕುಲೆ ಅವರು ಕಾಮಠಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಗೋಪಾಲ್ ಜೋಶಿ ಪ್ರಕರಣ ಮತ್ತು ಮಾರಿಕೊಂಡ ಮಾಧ್ಯಮಗಳು

ಸಚಿವರಾದ ಗಿರೀಶ್ ಮಹಾಜನ್ ಅವರಿಗೆ ಜಾಮ್ನರ್, ಸುಧೀರ್ ಮುಂಗಾಂತಿವಾರ್ ಅವರಿಗೆ ಬಲ್ಲಾರ್​ಪುರ್, ಆಶೀಶ್ ಶೆಲಾರ್ ಅವರಿಗೆ ವಾಂದ್ರೆ ಪಶ್ಚಿಮ, ಮಂಗಲ್ ಪ್ರಭಾತ್ ಲೋಧಾ ಅವರಿಗೆ ಮಲಬಾರ್ ಹಿಲ್, ರಾಹುಲ್ ನರ್ವೇಕರ್ ಅವರಿಗೆ ಕೊಲಾಬ, ಛತ್ರಪತಿ ಶಿವೇಂದ್ರ ರಾಜೇ ಭೋಸಲೆ ಅವರಿಗೆ ಸತಾರ ಕ್ಷೇತ್ರದ ಟಿಕೆಟ್ ಸಿಕ್ಕಿದೆ.

ಮಹಾರಾಷ್ಟ್ರ ಮತ್ತು ಜಾರ್ಖಂಡ್ ರಾಜ್ಯಗಳಿಗೆ ಒಟ್ಟಿಗೆ ಈ ಬಾರಿ ವಿಧಾನಸಭಾ ಚುನಾವಣೆಗಳಾಗುತ್ತಿವೆ. ಮಹಾರಾಷ್ಟ್ರದಲ್ಲಿ ನವೆಂಬರ್ 20ರಂದು ಒಂದೇ ಹಂತದಲ್ಲಿ ಮತದಾನವಾಗಲಿದೆ. ಜಾರ್ಖಂಡ್​ನಲ್ಲಿ ನವೆಂಬರ್ 13 ಮತ್ತು 20, ಎರಡು ಹಂತದಲ್ಲಿ ಮತದಾನವಾಗುತ್ತಿದೆ. ನವೆಂಬರ್ 23ರಂದು ಎರಡೂ ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...