ವಿಧಾನಸಭೆ ಫಲಿತಾಂಶ: ಅರುಣಾಚಲ ಪ್ರದೇಶದಲ್ಲಿ ಬಿಜೆಪಿ, ಸಿಕ್ಕಿಂನಲ್ಲಿ ಎಸ್ಕೆಎಂಗೆ ಗೆಲುವು

Date:

ಅರುಣಾಚಲ ಪ್ರದೇಶ ಹಾಗೂ ಸಿಕ್ಕಿಂ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು,ಅರುಣಾಚಲ ಪ್ರದೇಶದಲ್ಲಿ ಬಿಜೆಪಿ ಮೂರನೇ ಬಾರಿ ಅಧಿಕಾರ ಹಿಡಿದರೆ, ಸಿಕ್ಕಿಂನಲ್ಲಿ ಆಡಳಿತರೂಢ ಪ್ರಾದೇಶಿಕ ಪಕ್ಷವಾದ ಸಿಕ್ಕಿಂ ಕ್ರಾಂತಿಕಾರಿ ಪಕ್ಷ(ಎಸ್‌ಕೆಎಂ) ಎರಡನೇ ಬಾರಿ ಗೆಲುವು ಸಾಧಿಸಿದೆ.

ಒಟ್ಟು 60 ಕ್ಷೇತ್ರಗಳ ಅರುಣಾಚಲ ಪ್ರದೇಶ ವಿಧಾನಸಭೆಯಲ್ಲಿ ಬಿಜೆಪಿ 46 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. 8 ಪಕ್ಷೇತರರು ಗೆಲುವು ಸಾಧಿಸಿದ್ದರೆ, ಕಾಂಗ್ರೆಸ್ ಒಂದು ಕ್ಷೇತ್ರದಲ್ಲಿ ಜಯಗಳಿಸಿದೆ.

ಅರುಣಾಚಲದ ಪಕ್ಷೇತರರ ಪೈಕಿ ಎನ್‌ಪಿಇಪಿ 5 , ಪಿಪಿಎ ಪಕ್ಷ ಎರಡು ಕ್ಷೇತ್ರಗಳಲ್ಲಿ ಹಾಗೂ ರಾಷ್ಟ್ರೀಯ ಪಕ್ಷ ಎನ್‌ಸಿಪಿ 4 ಕ್ಷೇತ್ರಗಳಲ್ಲಿ ಜಯ ಸಾಧಿಸಿದೆ. ಪಕ್ಷೇತರರು ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಕ್ಕಿಂನ ಒಟ್ಟು 32 ಸ್ಥಾನಗಳ ಪೈಕಿ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ(ಎಸ್‌ಕೆಎಂ) ಪಕ್ಷ 31 ಸ್ಥಾನಗಳಲ್ಲಿ ಗೆಲುವು ಸಾಧಿಸಿ ಭಾರಿ ವಿಜಯದೊಂದಿಗೆ ಎರಡನೇ ಬಾರಿ ಅಧಿಕಾರ ಹಿಡಿಯಲಿದೆ. ಉಳಿದ ಮತ್ತೊಂದು ಸ್ಥಾನದಲ್ಲಿ ಸಿಕ್ಕಿಂ ಡೆಮಾಕ್ರಾಟಿಕ್‌ ಪ್ರಂಟ್‌ (ಎಸ್‌ಡಿಎಫ್‌) ಜಯಗಳಿಸಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಧಿಕಾರ ಸ್ಥಾನಗಳಿಂದ ಮಹಿಳೆಯರನ್ನು ಹೊರಗಿಟ್ಟು ಸಮಾನತೆ ಬಗ್ಗೆ ಮಾತನಾಡುವುದಕ್ಕೆ ಅರ್ಥವಿದೆಯೇ?

ಬೈಚುಂಗ್‌ ಭುಟಿಯಾ ಸೋಲು

ಎಸ್‌ಡಿಎಫ್‌ ಪಕ್ಷದ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಪವನ್‌ ಕುಮಾರ್ ಚಾಮ್ಲಿಂಗ್‌ ತಾವು ಸ್ಪರ್ಧಿಸಿದ್ದ ಎರಡೂ ಕ್ಷೇತ್ರಗಳಲ್ಲೂ ಸೋಲು ಅನುಭವಿಸಿದ್ದಾರೆ.

ಅರುಣಾಚಲ ಪ್ರದೇಶದಲ್ಲಿ ಹಾಲಿ ಮುಖ್ಯಮಂತ್ರಿ ಬಿಜೆಪಿ ನಾಯಕ ಪೆಮಾ ಖಂಡು ಮೂರನೇ ಬಾರಿಗೆ ಅಧಿಕಾರಕ್ಕೆ ಬರುವ ಸಾಧ್ಯತೆಯಿದೆ. ಹಾಗೆಯೇ ಸಿಕ್ಕಿಂನಲ್ಲಿ ಹಾಲಿ ಮುಖ್ಯಮಂತ್ರಿ ಪ್ರೇಮ್‌ ಸಿಂಗ್‌ ತಮಾಂಗ್‌ ಎರಡನೇ ಬಾರಿ ಮುಖ್ಯಮಂತ್ರಿಯಾಗಲಿದ್ದಾರೆ. ಪ್ರೇಮ್‌ ಸಿಂಗ್‌ ತಮಾಂಗ್‌ ತಾವು ಕಣಕ್ಕಿಳಿದಿದ್ದ ಎರಡೂ ಕ್ಷೇತ್ರಗಳಲ್ಲಿಯೂ ಗೆಲುವು ಸಾಧಿಸಿದ್ದಾರೆ.

ಭಾರತೀಯ ಫುಟ್‌ಬಾಲ್‌ ಮಾಜಿ ಆಟಗಾರ ಬೈಚುಂಗ್‌ ಭುಟಿಯಾ ತಾವು ಸ್ಪರ್ಧಿಸಿದ್ದ ಭರ್ಪುಂಗ್‌ ಕ್ಷೇತ್ರದಲ್ಲಿ ಸೋಲು ಅನುಭವಿಸಿದ್ದಾರೆ. ಎಸ್‌ಕೆಎಂ ಅಭ್ಯರ್ಥಿ ರಿಕ್‌ಸಲ್‌ ದೋರ್ಜೆ ಭುಟಿಯಾ ವಿರುದ್ಧ ಪರಾಭವಗೊಂಡಿದ್ದಾರೆ. ಬೈಚುಂಗ್‌ ಭುಟಿಯಾ ಫುಟ್‌ಬಾಲ್‌ನಲ್ಲಿ ಹೆಸರು ಗಳಿಸಿದರೂ ರಾಜಕೀಯ ಕ್ಷೇತ್ರ ಮಾತ್ರ ಅವರಿಗೆ ಒಲಿದಿಲ್ಲ. ಕಳೆದ 10 ವರ್ಷಗಳಲ್ಲಿ 6 ಬಾರಿ ಸೋತಿದ್ದಾರೆ.

ಅರುಣಾಚಲ ಪ್ರದೇಶ ಹಾಗೂ ಸಿಕ್ಕಿಂನಲ್ಲಿ ಏಪ್ರಿಲ್‌ 19 ರಂದು ಮತದಾನ ನಡೆದಿತ್ತು. ಸಿಕ್ಕಿಂನಲ್ಲಿ ಶೇ. 79.88 ಮತದಾನವಾಗಿದ್ದರೆ, ಅರುಣಾಚಲ ಪ್ರದೇಶದಲ್ಲಿ ಶೇ. 82.95 ಮಂದಿ ತಮ್ಮ ಹಕ್ಕು ಚಲಾಯಿಸಿದ್ದರು.

 

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...