ದ್ವೇಷಕ್ಕೆ ಬಿಜೆಪಿಯಿಂದ ಬಹುಮಾನ: ಬಿಧೂರಿಯನ್ನು ಚುನಾವಣಾ ಉಸ್ತುವಾರಿ ಮಾಡಿದ್ದಕ್ಕೆ ಸಿಬಲ್‌ ಟೀಕೆ

Date:

ಬಿಎಸ್‌ಪಿ ಸಂಸದ ಡ್ಯಾನಿಶ್ ಅಲಿ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿದ ಬಿಜೆಪಿ ಸಂಸದ ರಮೇಶ್ ಬಿಧೂರಿ ಅವರನ್ನು ಮುಂಬರುವ ವಿಧಾನಸಭಾ ಚುನಾವಣೆಗೆ ರಾಜಸ್ಥಾನದ ಟೋಂಕ್‌ ಜಿಲ್ಲೆಗೆ ಉಸ್ತುವಾರಿಯನ್ನಾಗಿ ನೇಮಿಸಿರುವ ಬಿಜೆಪಿ ನಿರ್ಧಾರದ ಬಗ್ಗೆ ರಾಜ್ಯಸಭಾ ಸದಸ್ಯ ಕಪಿಲ್‌ ಸಿಬಲ್‌ ಟೀಕಿಸಿದ್ದಾರೆ.

ಈ ಬಗ್ಗೆ ಟ್ವಿಟರ್‌ನಲ್ಲಿ ಬರೆದುಕೊಂಡಿರುವ ಕಪಿಲ್‌ ಸಿಬಲ್‌ ಅವರು, ಕೇಸರಿ ಪಕ್ಷವು “ದ್ವೇಷಕ್ಕೆ ಪ್ರತಿಫಲ ನೀಡುತ್ತದೆ”. ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಬಿಎಸ್‌ಪಿ ಸಂಸದ ಡ್ಯಾನಿಶ್ ಅಲಿ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿದ ಬಿಧೂರಿ ಅವರಿಗೆ ಬಹುಮಾನ ನೀಡಲಾಗಿದೆ. ಇವರನ್ನು ರಾಜಸ್ಥಾನದ ಟೋಂಕ್ ಜಿಲ್ಲೆಯ ಬಿಜೆಪಿ ಉಸ್ತುವಾರಿಯನ್ನಾಗಿ ಘೋಷಿಸಲಾಗಿದೆ. ಟೋಂಕ್‌ನಲ್ಲಿ ಮುಸ್ಲಿಂ ಸಮುದಾಯ ಶೇ.29.25 ಯಿದ್ದು, ರಾಜಕೀಯ ಲಾಭಾಂಶಕ್ಕಾಗಿ ದ್ವೇಷವನ್ನು ಸಂಕೇತಿಸಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಅವರ ಪ್ರಬಲ ಭದ್ರಕೋಟೆಯಾಗಿರುವ ರಾಜಸ್ಥಾನದ ಟೋಂಕ್ ಜಿಲ್ಲೆಯ ಉಸ್ತುವಾರಿಯಾಗಿ ಬಿಧೂರಿ ಅವರನ್ನು ಬಿಜೆಪಿ ಘೋಷಿಸಿದ ಒಂದು ದಿನದ ನಂತರ ಸಿಬಲ್ ಟ್ವೀಟ್‌ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಮತ್ತು ಇತರ ಹಲವು ವಿರೋಧ ಪಕ್ಷದ ಸಂಸದರು ಬಿಧೂರಿಯನ್ನು ಸಂಸತ್ತಿನಿಂದ ಅಮಾನತುಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಪೋಸ್ಟರ್‌ ವಿವಾದದ ನಂತರ ಸಸ್ಯಾಹಾರಿಗಳಿಗೆ ಪ್ರತ್ಯೇಕ ಸ್ಥಳ ಮೀಸಲಿಟ್ಟ ಬಾಂಬೆ ಐಐಟಿ: ಮತ್ತೊಂದು ವಿವಾದ

ಅವರು ಬಳಸುವ ಭಾಷೆಯನ್ನು ಸಂಸತ್ತಿನ ಒಳಗೆ ಅಥವಾ ಹೊರಗೆ ಬಳಸಬಾರದು. ಸದನದಲ್ಲಿ ಬಿಧೂರಿ ಮಾಡಿದ ಆಕ್ಷೇಪಾರ್ಹ ಮಾತುಗಳನ್ನು ಸ್ಪೀಕರ್ ಬಿರ್ಲಾ ಅವರು “ಗಂಭೀರವಾಗಿ ಗಮನಿಸಿದರು” ಮತ್ತು ಭವಿಷ್ಯದಲ್ಲಿ ಅಂತಹ ನಡವಳಿಕೆಯನ್ನು ಪುನರಾವರ್ತಿಸಿದರೆ “ಕಠಿಣ ಕ್ರಮ” ನೀಡುವುದಾಗಿ ಎಚ್ಚರಿಕೆ ನೀಡಿದರು.

ಅಲಿ ಅವರು ತಮ್ಮ ಪ್ರಕರಣವನ್ನು ವಿಶೇಷಾಧಿಕಾರ ಸಮಿತಿಗೆ ಶಿಫಾರಸ್ಸು ಮಾಡಲು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದು ಈ ವಿಷಯದ ಬಗ್ಗೆ ತನಿಖೆಗೆ ಆದೇಶಿಸುವಂತೆ ಒತ್ತಾಯಿಸಿದರು. ಲೋಕಸಭೆಯಲ್ಲಿ ಬಿಎಸ್‌ಪಿ ಸಂಸದರ ವಿರುದ್ಧ ಅಸಂಸದೀಯ ಪದಗಳನ್ನು ಬಳಸಿದ್ದಕ್ಕಾಗಿ ಬಿಜೆಪಿ ಸಂಸದ ಬಿಧೂರಿ ಅವರಿಗೆ ಶೋಕಾಸ್ ನೋಟಿಸ್ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...