VIRAL VIDEO | ಕಾಂಗ್ರೆಸ್ ವಿರುದ್ಧ ಪ್ರತಿಭಟನೆ: ಪತ್ರಕರ್ತನ ಪ್ರಶ್ನೆಗೆ ಉತ್ತರಿಸಲು ತಿಣುಕಾಡಿದ ಬಿಜೆಪಿ ಬೆಂಬಲಿಗರು!

Date:

ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಜನರ ನಡುವೆ ಸಂಪತ್ತಿನ ಹಂಚಿಕೆಯನ್ನು ಖಚಿತಪಡಿಸಿಕೊಳ್ಳಲು ದೇಶಾದ್ಯಂತ ಆರ್ಥಿಕ ಹಾಗೂ ಸಾಂಸ್ಥಿಕ ಸಮೀಕ್ಷೆಯನ್ನು ಹಮ್ಮಿಕೊಳ್ಳುವುದಾಗಿ ಕಾಂಗ್ರೆಸ್ ಹೇಳಿರುವುದನ್ನು ಬಿಜೆಪಿಯು ತಮಗೆ ಬೇಕಾದಂತೆ ತಿರುಚಿ ಹೇಳುತ್ತಿದೆ.

ಅಲ್ಲದೇ, ಇತ್ತೀಚೆಗೆ ರಾಜಸ್ಥಾನದಲ್ಲಿ ನಡೆದಿದ್ದ ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿಯವರು, “ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಈ ದೇಶದ ಸಂಪತ್ತನ್ನು ಹೆಚ್ಚು ಮಕ್ಕಳನ್ನು ಹೆರುವ ಮುಸಲ್ಮಾನರಿಗೆ ಹಂಚಲಿದೆ” ಎಂದು ದ್ವೇಷ ಭಾಷಣಗೈದಿದ್ದರು.

ಈ ಎಲ್ಲ ಬೆಳವಣಿಗೆಗಳ ನಡುವೆ ‘ವಿಕ್‌ಸಿತ್ ಭಾರತ್’ ಹೆಸರಿನಲ್ಲಿ ಕೆಲ ಬಿಜೆಪಿ ಬೆಂಬಲಿತ ಯುವಕರ ಗುಂಪು ಇಂದು ದೆಹಲಿಯಲ್ಲಿರುವ ಕಾಂಗ್ರೆಸ್ ಪಕ್ಷದ ಮುಂಭಾಗ ಪ್ರತಿಭಟನೆ ಹಮ್ಮಿಕೊಂಡಿತ್ತು. ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಹಲವು ಮಂದಿಗೆ ತಾವು ಬಂದಿದ್ದ ಉದ್ದೇಶವೇ ತಿಳಿದಿರಲಿಲ್ಲ ಎಂಬುದು ಪತ್ರಕರ್ತನೋರ್ವನು ಮಾತನಾಡಿಸಿದಾಗ ಕಂಡು ಬಂತು. ಈಗ ಇದರ ವಿಡಿಯೋ ಸದ್ಯ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಜ್‌ತಕ್‌ನ ಪ್ರತಿನಿಧಿ ಅಶುತೋಶ್ ಮಿಶ್ರಾ ಅವರು ಹಲವು ಬಿಜೆಪಿ ಬೆಂಬಲಿಗ ಯುವಕರ ಮುಂದೆ ಮೈಕ್ ಹಿಡಿದು ಪ್ರಶ್ನೆ ಕೇಳಿದಾಗ, ವಿಚಿತ್ರ ಉತ್ತರ ನೀಡಿದ್ದಾರೆ. ಹಲವು ಮಂದಿಗೆ ತಾವು ಬಂದಿದ್ದ ಉದ್ದೇಶವೇ ತಿಳಿದಿರಲಿಲ್ಲ. ಸದ್ಯ ಈ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದ್ದು, ಬಿಜೆಪಿಯವರನ್ನು ನೆಟ್ಟಿಗರು ಟ್ರೋಲ್ ಮಾಡುತ್ತಿದ್ದಾರೆ.

ಸಂಪತ್ತು ಹಂಚಿಕೆ ಬಗ್ಗೆ ನಿಮಗೆ ಏನು ಗೊತ್ತು ಎಂದು ಮೊದಲಿಗೆ ಒಬ್ಬ ಯುವಕನಲ್ಲಿ ಪತ್ರಕರ್ತ ಪ್ರಶ್ನಿಸಿದಾಗ, ‘ಸಂಪತ್ತು ಹಂಚಿಕೆ……ಅಂತ ಪ್ರಾರಂಭಿಸಿ, ಬಳಿಕ ನನಗೆ ಗೊತ್ತಿಲ್ಲ. ಬೇರೆಯವರನ್ನು ಕೇಳಿ’ ಎಂದು ಮುಂದೆ ಕಳುಹಿಸಿದ್ದಾನೆ.

ಇನ್ನೊಬ್ಬಾತ, “ನಾವು ಗ್ರೇಟರ್ ನೊಯ್ಡಾದ ಗಲ್‌ಗೋಟಿ ವಿವಿಯಿಂದ ಬಂದವರು. ಕಾಂಗ್ರೆಸ್ ಪ್ರಣಾಳಿಕೆ ವಿರೋಧಿಸಲು ಬಂದಿದ್ದೇವೆ. ಅದರಲ್ಲಿ ಏನಿದೆ ಎಂಬುದು ಗೊತ್ತಿಲ್ಲ” ಎಂದು ಉತ್ತರಿಸಿದ್ದಾನೆ.

‘ಅರ್ಬನ್ ನಕ್ಸಲ್’ ಪದವನ್ನು ‘ಮ್ಯಾಕ್ಸ್‌ವೆಲ್’ ಎಂದು ಓದಿದ ಯುವಕ!

ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಯುವಕನೋರ್ವ, “NO PLACE FOR URBAN NAXALS IN VIKSIT BHARAT” ಎಂಬ ಪ್ಲೆಕಾರ್ಡ್‌ ಇಟ್ಟುಕೊಂಡಿದ್ದ. ಇದನ್ನು ಒಮ್ಮೆ ಓದಿ ಎಂದು ಪತ್ರಕರ್ತ ಹೇಳಿದಾಗ, ‘ಅರ್ಬನ್ ನಕ್ಸಲ್’ ಎಂಬ ಪದವನ್ನು ‘ಮ್ಯಾಕ್ಸ್‌ವೆಲ್’ ಎಂದು ಓದಿ, ಪೇಚಿಗೆ ಸಿಲುಕಿದ್ದಲ್ಲದೇ, ಇದರ ಅರ್ಥ ತನಗೆ ಗೊತ್ತಿಲ್ಲ ಎಂದೂ ಕೂಡ ಹೇಳಿದ್ದಾನೆ. ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಸುಮಾರು 6 ನಿಮಿಷದ ಈ ವಿಡಿಯೋ ವೈರಲಾಗಿದೆ.

ಈ ವಿಡಿಯೋವನ್ನು ಖ್ಯಾತ ಯೂಟ್ಯೂಬರ್‌ ಧ್ರುವ್ ರಾಠಿ, ಬಹುಭಾಷಾ ನಟ ಪ್ರಕಾಶ್ ರೈ, ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ, ಆಲ್ಟ್‌ನ್ಯೂಸ್‌ನ ಮುಹಮ್ಮದ್ ಝುಬೈರ್ ಸೇರಿದಂತೆ ಹಲವು ಮಂದಿ ಹಂಚಿಕೊಂಡಿದ್ದು, ‘ವಾಟ್ಸಾಪ್ ವಿಶ್ವವಿದ್ಯಾಲಯದ ಮೂಲಕ ವಿದ್ಯಾವಂತ ಯುವಕರನ್ನು ಬ್ರೈನ್‌ವಾಶ್ ಮಾಡಲಾಗಿದೆ. ಬಿಜೆಪಿಯವರಿಗೆ ಧನ್ಯವಾದಗಳು” ಎಂದು ವ್ಯಂಗ್ಯವಾಡಿದ್ದಾರೆ.

“ಬಿಜೆಪಿಯವರೇ, ನೀವು ಪ್ರತಿಭಟನೆಗೆ ಕರೆದುಕೊಂಡು ಬರುವ ಮಂದಿಗೆ ನೀವು ಯಾಕೆ? ಯಾವ ವಿಚಾರದಲ್ಲಿ ಎಲ್ಲಿಗೆ ಕರೆದುಕೊಂಡು ಹೋಗುತ್ತಿದ್ದೀರಾ ಎಂಬುದರ ಬಗ್ಗೆ ಸ್ವಲ್ಪನಾದರೂ ಮಾಹಿತಿ ಕೊಟ್ಟು ಕಳುಹಿಸಿ. ಸುಮ್ಮನೆ ಮಾಧ್ಯಮದವರು ಹೀಗೆ ಮೈಕ್ ಹಿಡಿದಾಗ ಉತ್ತರಿಸಲಾಗದೆ ಪೇಚಿಗೆ ಸಿಲುಕಿಸಬೇಡಿ. ಇವರೆಲ್ಲರೂ ವಾಟ್ಸಪ್ ಯುನಿವರ್ಸಿಟಿಯ ವಿದ್ಯಾರ್ಥಿಗಳೇ?” ಎಂದು ನೆಟ್ಟಿಗರು ಕಾಲೆಳೆದಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...