ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 4,000ಕ್ಕಿಂತ ಹೆಚ್ಚು ಸ್ಥಾನ: ಟ್ರೋಲ್ ಆದ ಬಿಹಾರ ಸಿಎಂ ನಿತೀಶ್ ಕುಮಾರ್

Date:

ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಲೋಕಸಭಾ ಚುನಾವಣೆಯಲ್ಲಿ 4,000ಕ್ಕಿಂತ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದು ಹೇಳಿಕೆ ನೀಡುವ ಮೂಲಕ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಟ್ರೋಲ್‌ಗೊಳಗಾಗಿದ್ದಾರೆ.

ಜೆಡಿಯು ಮುಖ್ಯಸ್ಥರಾದ ನಿತೀಶ್ ಮೂರು ತಿಂಗಳ ಹಿಂದೆಯಷ್ಟೇ ಇಂಡಿಯಾ ಮೈತ್ರಿಕೂಟ ತೊರೆದು ಎನ್‌ಡಿಎಗೆ ಮರಳಿದ್ದರು. ನವಾಡ ಜಿಲ್ಲೆಯಲ್ಲಿ ಪ್ರಧಾನಿ ಮೋದಿಯವರು ಭಾಗವಹಿಸಿದ್ದ ಸಾರ್ವಜನಿಕ ಸಮಾವೇಶದಲ್ಲೇ ಈ ಹೇಳಿಕೆ ನೀಡುವ ಮೂಲಕ, ಬಿಹಾರ ಸಿಎಂ ಮುಜುಗರಕ್ಕೀಡಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತನ್ನ ಭಾಷಣದ ವೇಳೆ ತೊದಲುತ್ತಾ ಮಾತನಾಡಿದ ನಿತೀಶ್ ಕುಮಾರ್, ‘ಚಾರ್ ಲಾಕ್” (ನಾಲ್ಕು ಲಕ್ಷ) ಎಂದು ಹೇಳಿ ನಂತರ ತಮ್ಮನ್ನು ತಾವೇ ಸರಿಪಡಿಸಿಕೊಂಡು, ಪ್ರಧಾನಿ ನರೇಂದ್ರ ಮೋದಿ ಅವರ ಕಡೆ ನೋಡುತ್ತಾ, ‘ಚಾರ್ ಹಝಾರ್ ಸೇ ಭಿ ಝ್ಯಾದಾ’ (ನಾಲ್ಕು ಸಾವಿರಕ್ಕೂ ಹೆಚ್ಚು) ಎಂದು ಹೇಳಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟವು 400ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಮೋದಿ ಹೇಳುತ್ತಾ ಬಂದಿದ್ದಾರೆ. ಇದನ್ನೇ ಉಚ್ಛರಿಸಲು ಹೋಗಿ ನಿತೀಶ್ ಕುಮಾರ್ ಈ ಎಡವಟ್ಟು ಮಾಡಿಕೊಂಡಿದ್ದಾರೆ.

ಬಿಹಾರದ ದೀರ್ಘಕಾಲದ ಮುಖ್ಯಮಂತ್ರಿ ಎನಿಸಿಕೊಂಡಿರುವ ನಿತೀಶ್ ಕುಮಾರ್, ಆಡಿರುವ ಈ ಮಾತು ಸೋಷಿಯಲ್ ಮೀಡಿಯಾಗಳಲ್ಲಿ ವ್ಯಾಪಕವಾಗಿ ಟ್ರೋಲ್ ಆಗಿದೆ.

ಮೋದಿಯ ಕಾಲು ಮುಟ್ಟಿ ನಮಸ್ಕರಿಸಿದ ನಿತೀಶ್ ಕುಮಾರ್!

ನಿತೀಶ್ ಕುಮಾರ್ ಅವರು 25 ನಿಮಿಷಗಳ ಭಾಷಣ ಮಾಡಿದ್ದರು. ಅವರು ಮಾತು ಮುಗಿಸುತ್ತಿದ್ದಂತೆ ಮೋದಿ ಅವರ ಬಳಿ ಕುಳಿತು. ಈ ವೇಳೆ ಪರಸ್ಪರ ಮಾತನಾಡಿಕೊಂಡ ನಂತರ ನಿತೀಶ್ ಕುಮಾರ್, ಪ್ರಧಾನಿ ನರೇಂದ್ರ ಮೋದಿ ಅವರ ಕಾಲು ಮುಟ್ಟಿ ನಮಸ್ಕರಿಸಿದರು. ಸದ್ಯ ಈ ವಿಡಿಯೋ ಕೂಡ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ನಿತೀಶ್ ಕುಮಾರ್ ಅವರ ಈ ನಡೆಯನ್ನು ಖಂಡಿಸಿರುವ ಬಿಹಾರದ ಮಾಜಿ ಉಪಮುಖ್ಯಮಂತ್ರಿ ಮತ್ತು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್, “ಇಂದು ನಾನು ನಿತೀಶ್ ಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿಯವರ ಪಾದಗಳನ್ನು ಮುಟ್ಟಿದ ಚಿತ್ರವನ್ನು ನೋಡಿದೆ. ನಮಗೆ ತುಂಬಾ ನೋವಾಯಿತು. ನಿತೀಶ್ ಕುಮಾರ್ ಅವರಷ್ಟು ಅನುಭವಿ ಮುಖ್ಯಮಂತ್ರಿ ಮತ್ತೊಬ್ಬರಿಲ್ಲ ಮತ್ತು ಅವರು ಪ್ರಧಾನಿ ಮೋದಿಯವರ ಪಾದಗಳನ್ನು ಮುಟ್ಟುತ್ತಿದ್ದಾರೆ” ಎಂದು ತಿಳಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...