ಉತ್ತರ ಪ್ರದೇಶ | ದಲಿತ ಎಂಜಿನಿಯರ್‌ಗೆ ಶೂನಿಂದ ಹೊಡೆದ ಬಿಜೆಪಿ ಮುಖಂಡನ ಬಂಧನ

Date:

ಉತ್ತರ ಪ್ರದೇಶದ ಬಲ್ಲಿಯಾದಲ್ಲಿ ದಲಿತ ಎಂಜಿನಿಯರ್‌ ಮೇಲೆ ಕಚೇರಿಯೊಳಗೆ ಶೂನಿಂದ ಹಲ್ಲೆ ನಡೆಸಿದ ಆರೋಪದ ಮೇಲೆ ಬಿಜೆಪಿ ಮುಖಂಡನನ್ನು ಬಂಧಿಸಲಾಗಿದೆ. ವಿದ್ಯುತ್ ಇಲಾಖೆಯ ಸೂಪರಿಂಟೆಂಡಿಂಗ್ ಎಂಜಿನಿಯರ್ ಲಾಲ್ ಸಿಂಗ್ ಅವರನ್ನು ಥಳಿಸುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ಪೊಲೀಸರ ಪ್ರಕಾರ ಶನಿವಾರ ಈ ಘಟನೆ ನಡೆದಿದೆ. “ಮುನ್ನಾ ಬಹದ್ದೂರ್ ಎಂಬ ವ್ಯಕ್ತಿ ಕೆಲವು ಅಪರಿಚಿತ ವ್ಯಕ್ತಿಗಳೊಂದಿಗೆ ಅನುಮತಿಯಿಲ್ಲದೆ ತನ್ನ ಕಚೇರಿಗೆ ಪ್ರವೇಶಿಸಿದ್ದಾನೆ. ಬಳಿಕ ಜಾತಿ ನಿಂದನೆ ಮಾಡಿ, ನಿಂದನೀಯ ಭಾಷೆಯನ್ನು ಬಳಸಿ ಒದೆ, ಶೂನಿಂದ ಹಲ್ಲೆ ನಡೆಸಿದ್ದಾನೆ” ಎಂದು ಲಾಲ್‌ ಸಿಂಗ್ ದೂರಿನಲ್ಲಿ ತಿಳಿಸಿರುವುದಾಗಿ ಪೊಲೀಸ್ ವರಿಷ್ಠಾಧಿಕಾರಿ ಓಂವೀರ್ ಸಿಂಗ್ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಬಹಳ ಜನ ದಲಿತರು ನನಗೆ ಬಿಜೆಪಿ ಸೇರಬೇಡಿ ಎಂದಿದ್ದರು: ಸಂಸದ ರಮೇಶ ಜಿಗಜಿಣಗಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ದಾಳಿಕೋರರು ಕೆಲವು ಪ್ರಮುಖ ಫೈಲ್‌ಗಳನ್ನು ಹರಿದು ಹಾಕಿದ್ದಾರೆ. ಪೊಲೀಸರಿಗೆ ದೂರು ನೀಡಿದರೆ ಲಾಲ್ ಸಿಂಗ್ ಮತ್ತು ಅವರ ಕುಟುಂಬಸ್ಥರ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.

ಸಮಾಜವಾದಿ ಪಕ್ಷದ ಅಧ್ಯಕ್ಷ ಮತ್ತು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ವಿಡಿಯೋವನ್ನು ಹಂಚಿಕೊಂಡಿದ್ದು, “ಅಧಿಕಾರದ ಅರ್ಥ ಹಿಂಸೆ ನೀಡುವುದಲ್ಲ” ಎಂದು ಹೇಳಿದ್ದಾರೆ.

“ಮುನ್ನಾ ಬಹದ್ದೂರ್ ಮತ್ತು ಅವರ ಜೊತೆಗಿನ ಇತರರ ವಿರುದ್ಧ ಬಿಎನ್‌ಎಸ್ ಮತ್ತು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಮುನ್ನಾ ಬಹದ್ದೂರ್ ಅವರನ್ನು ಬಂಧಿಸಿದ್ದೇವೆ ಮತ್ತು ತನಿಖೆ ನಡೆಯುತ್ತಿದೆ. ಭಾಗಿಯಾಗಿರುವ ಇತರರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...