ಮಣಿಪುರದ ನೂತನ ಮುಖ್ಯಮಂತ್ರಿಯಾಗಿ ಯುಮ್ನಮ್‌ ಖೇಮ್‌ಚಂದ್ ಸಿಂಗ್ ಪದಗ್ರಹಣ

Date:

ದೀರ್ಘಕಾಲದ ಅನಿಶ್ಚಿತತೆ ಮತ್ತು ರಾಷ್ಟ್ರಪತಿ ಆಡಳಿತದ ನಂತರ, ಮಣಿಪುರದಲ್ಲಿ ಪ್ರಜಾಪ್ರಭುತ್ವ ಪ್ರಕ್ರಿಯೆ ಮರುಚಾಲನೆಗೊಂಡಿದ್ದು, ಬಿಜೆಪಿಯ ಹಿರಿಯ ನಾಯಕ ಯುಮ್ನಮ್‌ ಖೇಮ್‌ಚಂದ್ ಸಿಂಗ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.

​ಇಂಫಾಲದ ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ, ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರು ನೂತನ ಮುಖ್ಯಮಂತ್ರಿಗಳಿಗೆ ಪದವಿ ಹಾಗೂ ರಹಸ್ಯ ಪ್ರಮಾಣ ವಚನ ಬೋಧಿಸಿದರು. ಈ ಮೂಲಕ ಮಣಿಪುರದಲ್ಲಿ ಹೊಸ ರಾಜಕೀಯ ಅಧ್ಯಾಯ ಆರಂಭಗೊಂಡಂತಾಗಿದೆ.

ಕಳೆದ ವರ್ಷ ಫೆಬ್ರವರಿಯಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಆಡಳಿತವನ್ನು ಹೇರಲಾಗಿತ್ತು. ಜನಾಂಗೀಯ ಸಂಘರ್ಷ ಮತ್ತು ಹಿಂಸಾಚಾರದಿಂದ ನಲುಗಿದ್ದ ಮಣಿಪುರದಲ್ಲಿ ಶಾಂತಿ ಸ್ಥಾಪನೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಈ ಕಠಿಣ ಕ್ರಮ ಕೈಗೊಂಡಿತ್ತು. ಇದೀಗ ಪರಿಸ್ಥಿತಿ ತಹಬದಿಗೆ ಬರುತ್ತಿರುವ ಹಿನ್ನೆಲೆಯಲ್ಲಿ, ರಾಷ್ಟ್ರಪತಿ ಆಡಳಿತವನ್ನು ತೆರವುಗೊಳಿಸಿ ಜನಪ್ರತಿನಿಧಿಗಳ ಸರ್ಕಾರಕ್ಕೆ ಅಧಿಕಾರ ಹಸ್ತಾಂತರಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಇಸ್ರೇಲ್ ಸಂಗದಲ್ಲಿ ‘ಶಿಕಾರಿ’- ಪ್ಯಾಲೆಸ್ತೀನ್ ಜೊತೆ ‘ಪರಾರಿ’; ಕಪಟ ನಾಟಕವಲ್ಲವೇ ಮೋದೀಜಿ?

ಹಿಂದೆ ಮಣಿಪುರ ವಿಧಾನಸಭೆಯ ಸ್ಪೀಕರ್ ಆಗಿಯೂ ಕಾರ್ಯನಿರ್ವಹಿಸಿರುವ ಅನುಭವಿ ರಾಜಕಾರಣಿ ಖೇಮ್‌ಚಂದ್ ಸಿಂಗ್ ಅವರ ಹೆಗಲಿಗೆ ಈಗ ರಾಜ್ಯದಲ್ಲಿ ಸಂಪೂರ್ಣ ಶಾಂತಿ ನೆಲೆಸುವಂತೆ ಮಾಡುವ ಮತ್ತು ವಿಭಿನ್ನ ಸಮುದಾಯಗಳ ನಡುವೆ ವಿಶ್ವಾಸ ಮೂಡಿಸುವ ದೊಡ್ಡ ಜವಾಬ್ದಾರಿ ಬಿದ್ದಿದೆ.

ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಬಿಜೆಪಿಯ ಹಿರಿಯ ಶಾಸಕರು, ಪಕ್ಷದ ಪ್ರಮುಖ ಪದಾಧಿಕಾರಿಗಳು ಹಾಗೂ ಎನ್‌ಡಿಎ ಮೈತ್ರಿಕೂಟದ ಉನ್ನತ ನಾಯಕರು ಉಪಸ್ಥಿತರಿದ್ದು, ನೂತನ ಮುಖ್ಯಮಂತ್ರಿಗಳಿಗೆ ಶುಭ ಕೋರಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...