ಮಹಾರಾಷ್ಟ್ರ | ಸ್ಫೋಟಕ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ: ಕನಿಷ್ಠ 17 ಮಂದಿ ಸಾವು

Date:

ಸ್ಫೋಟಕ ತಯಾರಿಕಾ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ಸಂಭವಿಸಿ ಕನಿಷ್ಠ 17 ಮಂದಿ ಸಾವನ್ನಪ್ಪಿ, 18 ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರ ನಗರದಿಂದ ಸುಮಾರು 25 ಕಿ.ಮೀ ದೂರದಲ್ಲಿರುವ ಕಲ್ಮೇಶ್ವರ ತಹಸಿಲ್‌ನ ರೌಲ್ಗಾಂವ್ ಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ.

ನೋನಲ್ ಕ್ರಿಂಪಿಂಗ್ ಪ್ಲಾಂಟ್ ಪ್ರದೇಶದಲ್ಲಿ ಬೆಳಿಗ್ಗೆ 6.45ಕ್ಕೆ ಅಗ್ನಿ ಅವಘಡ ಸಂಭವಿಸಿ ಪ್ರಬಲ ಸ್ಫೋಟವಾಗಿದೆ. ಬೆಳಿಗ್ಗೆ 6 ಗಂಟೆಗೆಯೇ ಹಲವು ಕಾರ್ಮಿಕರು ಕಾರ್ಖಾನೆಗೆ ಬಂದು ನಿತ್ಯದಂತೆ ಕೆಲಸ ನಿರ್ವಹಿಸುತ್ತಿದ್ದರು. ಘಟನೆಯ ಸಮಯದಲ್ಲಿ ಇಬ್ಬರು ಮೇಲ್ವಿಚಾರಕರು ಮತ್ತು ಸುಮಾರು 35 ಕಾರ್ಮಿಕರಿದ್ದರು. ಮೃತರಲ್ಲಿ ಬಹುತೇಕರು ಮಹಿಳೆಯರು ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ? ಆಂಧ್ರ ಪ್ರದೇಶ | ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ; 20 ಮಂದಿ ಸಾವು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೈಗಾರಿಕಾ ಸ್ಫೋಟಕಗಳನ್ನು ತಯಾರಿಸುವ ಪ್ರಮುಖ ಕಾರ್ಖಾನೆ ಇದಾಗಿದ್ದು, ಗಣಿಗಾರಿಕೆ ಮತ್ತು ಮೂಲಸೌಕರ್ಯ ಯೋಜನೆಗಳಿಗೆ ಬಳಸುವ ಡಿಟೋನೇಟರ್‌ಗಳು ಮತ್ತು ಸ್ಫೋಟಕ ಕಾರ್ಟ್ರಿಡ್ಜ್‌ಗಳು ಮೊದಲಾದವುಗಳನ್ನು ಉತ್ಪಾದಿಸುತ್ತಿತ್ತು ಎಂದು ವರದಿಯಾಗಿದೆ.

ಅಗ್ನಿಶಾಮಕ ದಳದ ತಂಡಗಳು ತ್ವರಿತವಾಗಿ ಸ್ಥಳಕ್ಕೆ ಧಾವಿಸಿದ್ದು, ಇದಕ್ಕೂ ಮುನ್ನವೇ ಕಲ್ಮೇಶ್ವರ ಪೊಲೀಸರು ತಕ್ಷಣದ ರಕ್ಷಣಾ ಕಾರ್ಯಾಚರಣೆಗಳನ್ನು ಪ್ರಾರಂಭಿಸಿದ್ದರು. ಸ್ಥಳೀಯ ಆಂಬ್ಯುಲೆನ್ಸ್‌ಗಳು ಗಾಯಾಳುಗಳನ್ನು ತುರ್ತು ಚಿಕಿತ್ಸೆಗಾಗಿ ನಾಗ್ಪುರ ನಗರದ ಆಸ್ಪತ್ರೆಗಳಿಗೆ ಸಾಗಿಸಿದೆ.

ಸದ್ಯ 17 ಮಂದಿ ಸಾವನ್ನಪ್ಪಿರುವ ಬಗ್ಗೆ ಮಾಹಿತಿ ಲಭಿಸಿದ್ದು, ಪೊಲೀಸರು ನಿಖರ ಸಂಖ್ಯೆ ಇನ್ನೂ ದೃಢವಾಗಿಲ್ಲ ಎಂದಿದ್ದಾರೆ. ಸದ್ಯ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ತಜ್ಞರು ಸ್ಥಳಕ್ಕೆ ಧಾವಿಸಿದ್ದಾರೆ.

ಇನ್ನು ನಿನ್ನೆ ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯ ಸಮಲ್ಕೋಟ್​ ಮಂಡಲದ ವೆಟಂಪಲ್ಲೆಯಲ್ಲಿ ಪಟಾಕಿ ಉತ್ಪಾದನ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ಕನಿಷ್ಠ 12 ಮಂದಿ ಸಾವನ್ನಪ್ಪಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...