ಮಧ್ಯಪ್ರದೇಶ | ಅಂಧ ಮಹಿಳೆ ಮೇಲೆ ಬಿಜೆಪಿ ನಾಯಕಿ ಹಲ್ಲೆ

Date:

ಮಧ್ಯಪ್ರದೇಶದ ಜಬಲ್ಪುರದಲ್ಲಿ ಬಿಜೆಪಿ ನಾಯಕಿಯೊಬ್ಬರು ಅಂಧ ಮಹಿಳೆಯೊಬ್ಬರಿಗೆ ಕಿರುಕುಳ ನೀಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಜನಾಕ್ರೋಶಕ್ಕೆ ಕಾರಣವಾಗಿದೆ.

ಅಂಧ ಮಹಿಳೆಯ ಅಂಗವೈಕಲ್ಯವನ್ನು ಕುರಿತು ಬಿಜೆಪಿ ನಾಯಕಿ ಅವಹೇಳನಕಾರಿ ಹೇಳಿಕೆ ನೀಡಿರುವುದು ವಿಡಿಯೊದಲ್ಲಿ ದಾಖಲಾಗಿದೆ. “ನೀನು ಈ ಜನ್ಮದಲ್ಲೂ ಕುರುಡಿಯಾಗಿದ್ದೀಯ, ಮುಂದಿನ ಜನ್ಮದಲ್ಲೂ ಕುರುಡಿಯಾಗಿಯೇ ಇರುತ್ತೀಯ” ಎಂದು ನಾಯಕಿ ನಿಂದಿಸಿರುವುದು ಕಂಡುಬಂದಿದೆ.

ಬಿಜೆಪಿ ನಾಯಕಿ ಸಂತ್ರಸ್ತ ಮಹಿಳೆಯ ಕೈಹಿಡಿದು ಎಳೆದಾಡುವುದು ಮತ್ತು ತಳ್ಳಾಟ ನಡೆಸಿರುವುದನ್ನು ದೃಶ್ಯಾವಳಿಗಳು ಪುಷ್ಟೀಕರಿಸಿವೆ. ಸ್ಥಳದಲ್ಲಿದ್ದ ಪೊಲೀಸ್ ಸಿಬ್ಬಂದಿ ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಲು ಯತ್ನಿಸುತ್ತಿರುವುದು ವಿಡಿಯೊದಲ್ಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಿಸೆಂಬರ್ 20ರಂದು ಜಬಲ್ಪುರದ ಗೋರಖ್‌ಪುರ ಪ್ರದೇಶದ ಚರ್ಚ್ ಒಂದರಲ್ಲಿ ಬಲವಂತದ ಮತಾಂತರ ನಡೆಯುತ್ತಿದೆ ಎಂದು ಆರೋಪಿಸಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದ್ದರು. ಮತಾಂತರಕ್ಕಾಗಿ ಅಂಧ ವಿದ್ಯಾರ್ಥಿಗಳನ್ನು ಚರ್ಚ್‌ಗೆ ಕರೆತರಲಾಗಿತ್ತು ಎಂದು ಪ್ರತಿಭಟನಾಕಾರರು ಆರೋಪಿಸಿದ್ದರು. ಇದು ಉಭಯ ಬಣಗಳ ನಡುವೆ ತೀವ್ರ ವಾಗ್ವಾದಕ್ಕೆ ಕಾರಣವಾಗಿತ್ತು. ಈ ಸಂದರ್ಭದಲ್ಲೇ ಪ್ರಸ್ತುತ ಘಟನೆ ನಡೆದಿದೆ ಎನ್ನಲಾಗಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕೇರಳಕ್ಕೂ ಕಾಲಿಟ್ಟಿತು, ಕೋಮುದ್ವೇಷಿ ಗುಂಪುಹತ್ಯೆಯ ಪಿಡುಗು!

ಮೂಲಗಳ ಪ್ರಕಾರ, ಬಿಜೆಪಿ ಜಿಲ್ಲಾ ಪದಾಧಿಕಾರಿ ಅಂಜು ಭಾರ್ಗವ ಅವರು ಹಿಂದೂ ಸಂಘಟನೆಗಳ ಸದಸ್ಯರೊಂದಿಗೆ ಸ್ಥಳದಲ್ಲಿದ್ದರು. ಚರ್ಚ್ ಆವರಣದಲ್ಲಿ ಕುಳಿತಿದ್ದ ಮಕ್ಕಳು ಮತ್ತು ದಿವ್ಯಾಂಗ ಮಹಿಳೆಯ ಬಳಿ ತೆರಳಿ ವಾಗ್ವಾದ ನಡೆಸಿದ ನಂತರ ಪರಿಸ್ಥಿತಿ ವಿಕೋಪಕ್ಕೆ ಹೋಗಿದೆ ಎಂದು ಹೇಳಲಾಗಿದೆ.

ಕಾಂಗ್ರೆಸ್ ವಾಗ್ದಾಳಿ

ಸೋಮವಾರ ಈ ವಿಡಿಯೊ ವೈರಲ್ ಆಗುತ್ತಿದ್ದಂತೆಯೇ ಕಾಂಗ್ರೆಸ್, ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಅಂಧ ಮಹಿಳೆಯ ಮೇಲೆ ಹಲ್ಲೆ ನಡೆಸುತ್ತಿರುವವರು ಬಿಜೆಪಿಯ ಜಬಲ್ಪುರ ಜಿಲ್ಲಾ ಉಪಾಧ್ಯಕ್ಷೆ ಅಂಜು ಭಾರ್ಗವ ಎಂದು ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನೇತ್ ಸಾಮಾಜಿಕ ಜಾಲತಾಣದಲ್ಲಿ ಆರೋಪಿಸಿದ್ದಾರೆ.

ಇದೊಂದು ಕ್ರೂರ ಕೃತ್ಯ ಎಂದು ಟೀಕಿಸಿರುವ ಸುಪ್ರಿಯಾ, ಬಿಜೆಪಿಯ ಮಾತು ಮತ್ತು ಕೃತಿಗಳ ನಡುವಿನ ದ್ವಂದ್ವ ನೀತಿಯನ್ನು ಪ್ರಶ್ನಿಸಿದ್ದಾರೆ. ಪ್ರಸ್ತುತ ವೈರಲ್ ವಿಡಿಯೊ ಅಥವಾ ಘಟನೆಯ ಕುರಿತು ಬಿಜೆಪಿ ಈವರೆಗೂ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...