ಸುಪ್ರೀಂ ಕೋರ್ಟ್ ನ್ಯಾಯದೇವತೆ ಪ್ರತಿಮೆಯ ಕಣ್ಣಿಗಿದ್ದ ಕಪ್ಪು ಬಟ್ಟೆ ತೆರವು

Date:

ಸುಪ್ರೀಂಕೋರ್ಟ್‌ನಲ್ಲಿ ಅನಾವರಣ ಮಾಡಿರುವ ನೂತನ ಪ್ರತಿಮೆಯಲ್ಲಿ ನ್ಯಾಯದೇವತೆ ಕಣ್ಣಿಗೆ ಕಪ್ಪುಬಟ್ಟೆ ಧರಿಸಿರುವ ಮತ್ತು ಖಡ್ಗ ಹಿಡಿದಿರುವ ದೃಶ್ಯ ಮಾಯವಾಗಿದೆ. ಹೊಸ ಪ್ರತಿಮೆಯಲ್ಲಿ ನ್ಯಾಯದೇವತೆ ಕಣ್ಣು ತೆರೆದುಕೊಂಡಿದ್ದಾಳೆ ಹಾಗೂ ಎಡಗೈಯಲ್ಲಿ ಭಾರತದ ಸಂವಿಧಾನದ ಪ್ರತಿ ಹಿಡಿದುಕೊಂಡಿದ್ದಾಳೆ. ಆದರೆ ಬಲಗೈಯಲ್ಲಿರುವ ನ್ಯಾಯದ ತಕ್ಕಡಿಯಲ್ಲಿ ಯಾವುದೇ ಬದಲಾವಣೆ ಇಲ್ಲ.

ಬ್ರಿಟಿಷ್ ಪರಂಪರೆಯಿಂದ ಭಾರತ ಮುಂದಕ್ಕೆ ಚಲಿಸಬೇಕು ಎಂಬ ತತ್ವದಲ್ಲಿ ನಂಬಿಕೆ ಇಟ್ಟಿರುವ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರು ಈ ಬದಲಾವಣೆಗೆ ಸೂಚಿಸಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದ್ದು, ಅವರ ಪ್ರಕಾರ, ಕಾನೂನು ಎಂದೂ ಕುರುಡಾಗಿರಲು ಸಾಧ್ಯವಿಲ್ಲ. ಅದು ಎಲ್ಲರನ್ನೂ ಸಮಾನವಾಗಿ ನೋಡುತ್ತದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಹಾರಾಷ್ಟ್ರ, ಝಾರ್ಖಂಡ್ ಚುನಾವಣೆ- ಬಿಜೆಪಿ ಪಾಲಿಗೆ ವರವೇ ಅಥವಾ ಶಾಪವೇ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನ್ಯಾಯದೇವತೆ ಕೈಯಲ್ಲಿ ಖಡ್ಗದ ಬದಲು ಸಂವಿಧಾನವನ್ನು ಹಿಡಿದಿರಬೇಕು. ಈ ಮೂಲಕ ಸಂವಿಧಾನದ ಮೂಲಕವೇ ಆಕೆ ನ್ಯಾಯದಾನ ಮಾಡುತ್ತಾಳೆ ಎನ್ನುವ ಸಂದೇಶ ದೇಶಕ್ಕೆ ತಲುಪಬೇಕು ಎನ್ನುವುದು ಅವರ ಆಶಯ” ಎಂದು ಮೂಲಗಳು ಸ್ಪಷ್ಟಪಡಿಸಿವೆ. ಖಡ್ಗ ಹಿಂಸೆಯ ಪ್ರತೀಕವಾಗಿದ್ದು, ನ್ಯಾಯಾಲಯಗಳು ಸಂವಿಧಾನದ ಕಾನೂನುಗಳ ಅನ್ವಯ ನ್ಯಾಯದಾನ ಮಡುತ್ತವೆ ಎನ್ನುವುದು ಸಿಜೆಐಯವರ ಸಮರ್ಥನೆ.

ಸಾಮ್ರಾಜ್ಯಶಾಹಿ ಆಡಳಿತದ ಅವಧಿಯ ಈ ಕಣ್ಣಿಗೆ ಬಟ್ಟೆ ಕಟ್ಟಿರುವ ನ್ಯಾಯದೇವತೆ, ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ತತ್ವವನ್ನು ಸಾರುತ್ತಿತ್ತು. ಕೈಯಲ್ಲಿ ಆಕೆ ಹಿಡಿದಿದ್ದ ಖಡ್ಗ, ಅನ್ಯಾಯವನ್ನು ತಡೆಯುವ ಆಕೆಯ ಅಧಿಕಾರ ಹಾಗೂ ಶಕ್ತಿಯ ಪ್ರತೀಕವಾಗಿತ್ತು.

ನಮ್ಮ ದೇಶದಲ್ಲಿ ಕಾಣುವ ನ್ಯಾಯದೇವತೆಯ ಮೂರ್ತಿ ಮೂಲತಃ ರೋಮ್ ಸಾಮ್ರಾಜ್ಯದ ಕಲ್ಪನೆ. ಇದು ಮೊದಲ ಬಾರಿ ಕಂಡು ಬಂದಿದ್ದು ರೋಮ್​ನ ಆಗಸ್ಟಸ್ ಸಾಮ್ರಾಜ್ಯದಲ್ಲಿ ನ್ಯಾಯದೇವತೆ ಅಂದರೆ ಲೇಡಿ ಆಫ್​ ಜಸ್ಟಿಸ್​ ರೋಮನ್ ಪುರಾಣಗಳಲ್ಲಿ ಬರುವ ಜಸ್ಟಿಟಿಯಾ ಎಂಬ ದೇವತೆ. ಆಕೆ ನ್ಯಾಯಕ್ಕೆ ಅಧಿಪತಿ 16ನೇ ಶತಮಾನದಲ್ಲಿ ಮೊದಲ ಬಾರಿ ಈ ನ್ಯಾಯದೇವತೆಯ ಕಣ್ಣಿಗೆ ಬಟ್ಟೆಯನ್ನು ಕಟ್ಟಲಾಯಿತು. ಯಾರಿಗೂ ಕೂಡ ಅನ್ಯಾಯವಾಗಬಾರದು ಎಂಬ ಉದ್ದೇಶದಿಂದ, ನ್ಯಾಯದೇವತೆಯೂ ಕೂಡ ಕಟಕಟೆಗೆ ಬಂದ ಆರೋಪಿಗಳಲ್ಲಿ ಬೇಧಭಾವ ಇಲ್ಲದಿರಲಿ ಎಂಬ ಉದ್ದೇಶದಿಂದ ನ್ಯಾಯದೇವತೆಯ ಕಣ್ಣಿಗೆ ಪಟ್ಟಿ ಕಟ್ಟಲಾಗಿತ್ತು.

16ನೇ ಶತಮಾನದಿಂದಲೂ ನ್ಯಾಯದೇವತೆ ಇದೇ ರೀತಿ ಕಣ್ಣಿಗೆ ಪಟ್ಟಿಕಟ್ಟಿಕೊಂಡು ಹಾಗೂ ಕೈಯಲ್ಲಿ ಖಡ್ಗವನ್ನು ಹಿಡಿದುಕೊಂಡ ರೂಪದಲ್ಲಿಯೇ ಇದ್ದಾಳೆ. ವಿಶ್ವದ ಅನೇಕ ರಾಷ್ಟ್ರಗಳ ಕೋರ್ಟ್​ಗಳಲ್ಲಿ ಇದೇ ನ್ಯಾಯದೇವತೆಯ ಪ್ರತಿಮೆಯನ್ನು ಇಡಲಾಗಿದೆ. ಮೊಟ್ಟ ಮೊದಲ ಬಾರಿ ಈ ನ್ಯಾಯದೇವತೆಯ ಎದುರು ಕೋರ್ಟ್ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಹನ್ಸ್ಗೈಂಗ್,1543ರಲ್ಲಿ ಬರ್ನ್​ನಲ್ಲಿ ಈ ನ್ಯಾಯದೇವತೆಯ ಎದುರು ಮೊದಲ ವಿಚಾರಣೆ ನಡೆಸಲಾಗಿತ್ತು. ಆಗ ಬರ್ನ್ ರೋಮನ್ ಸಾಮ್ರಾಜ್ಯದ ಒಂದು ಭಾಗವಾಗಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...