ಎಸ್‌ಐಆರ್ ಪ್ರಕ್ರಿಯೆಯೆಂದು ಕರೆಸಿಕೊಂಡು ಪ್ರೇಯಸಿಯ ಗಂಡನನ್ನು ಕೊಂದ ಬಿಎಲ್‌ಒ

Date:

ಮತದಾರಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನೆಪವೊಡ್ಡಿ ವ್ಯಕ್ತಿಯೊಬ್ಬನನ್ನು ಕರೆಸಿಕೊಂಡು, ಆತನನ್ನು ಬಿಎಲ್‌ಒ ಹತ್ಯೆಗೈದಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಆರೋಪಿ ಬಿಎಲ್‌ಒ ಮತ್ತು ಮೃತನ ಪತ್ನಿ ಪ್ರೇಮಿಗಳಾಗಿದ್ದು, ವಿವಾಹೇತರ ಸಂಬಂಧ ಹೊಂದಿದ್ದರು. ಆಕೆಗಾಗಿ ಆಕೆಯ ಪತಿಯನ್ನು ಬಿಎಲ್‌ಒ ಹತ್ಯೆಗೈದಿದ್ದಾನೆ ಎಂದು ಆರೋಪಿಸಲಾಗಿದೆ.

ಮೃತನನ್ನು ನಾಸಿರ್ ಅಲಿ ಎಂದು ಗುರುತಿಸಲಾಗಿದೆ. ಅವರ ಮೃತದೇಹ ಬದುರಿಯಾದ ಕಾಲುವೆಯಲ್ಲಿ ಛಿದ್ರಗೊಂಡ ರೀತಿಯಲ್ಲಿ ಪತ್ತೆಯಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಬಿಎಲ್‌ಒ ರಿಜ್ವಾನ್ ಹಸನ್ ಮೊಂಡಲ್ ಮತ್ತು ಅವರ ಸಹಚರ ಸಾಗರ್ ಗೈನ್ ಎಂಬಾತನನ್ನು ಬಂಧಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ಅಲಿ ಅವರ ಪತ್ನಿಯೊಂದಿಗೆ ಮೊಂಡಲ್ ವಿವಾಹೇತರ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಅಲ್ಲದೆ ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ ಸಂಬಂಧಿಸಿದ ಕೆಲವು ವಿಷಯಗಳನ್ನು ಚರ್ಚಿಸುವ ನೆಪದಲ್ಲಿ ಸೋಮವಾರ (ಫೆ. 9) ಸಂಜೆ‌ ಅಲಿಯನ್ನು ಮೊಂಡಲ್ ನಿರ್ಜನ ಪ್ರದೇಶಕ್ಕೆ ಕರೆಸಿಕೊಂಡಿದ್ದ ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೋಮವಾರ ರಾತ್ರಿಯಿಂದ ಅಲಿ ನಾಪತ್ತೆಯಾಗಿದ್ದರು. ಆತನಿಗಾಗಿ ಹುಡುಕಾಟ ನಡೆಸಿದ ಕುಟುಂಬಸ್ಥರು ಮಂಗಳವಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೊಲೀಸರು ಶೋಧ ನಡೆಸಿದಾಗ ಅಲಿಯ ಮೃತದೇಹವು ನಾಲೆಯಲ್ಲಿ ಪತ್ತಡಯಾಗಿದೆ. ಪೊಲೀಸರು ಮೊಂಡಲ್‌ನ ಫೋನ್ ಕರೆಗಳು ಮತ್ತು ಚಲನವಲನಗಳನ್ನು ಪತ್ತೆಹಚ್ಚಿದ್ದು, ಆತನೇ ಆರೋಪಿಯೆಂದು ಕಂಡುಕೊಂಡಿದ್ದಾರೆ. ಆತನನ್ನು ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...