ಬಿಹಾರ ಮತದಾರರ ಪಟ್ಟಿಯಲ್ಲಿ ಬಾಂಗ್ಲಾ, ಮ್ಯಾನ್ಮಾರ್, ನೇಪಾಳದವರ ಹೆಸರುಗಳು ಪತ್ತೆ; ಚುನಾವಣಾ ಆಯೋಗ

Date:

ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ತಿಂಗಳು ಬಾಕಿ ಇರುವಂತೆಯೇ ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಭಾರೀ ಸದ್ದು ಮಾಡುತ್ತಿದ್ದು ಚರ್ಚೆಗೂ ಗ್ರಾಸವಾಗಿದೆ.

ಬಿಹಾರದಲ್ಲಿ ವಿಧಾನಸಭಾ ಚುನಾವಣೆಗೂ ಮುನ್ನ ನಡೆಸಲಾಗುತ್ತಿರುವ ಮತದಾರರ ಪರಿಶೀಲನಾ ಅಭಿಯಾನದಲ್ಲಿ (ಎಸ್‌ಐಆರ್‌) ಆಘಾತಕಾರಿ ಅಂಶವೊಂದು ಬೆಳಕಿಗೆ ಬಂದಿದ್ದು. ಅದರಂತೆ ಮತದಾರರ ಪಟ್ಟಿಯಲ್ಲಿ ನೇಪಾಳ, ಮ್ಯಾನ್ಮಾರ್ ಮತ್ತು ಬಾಂಗ್ಲಾದೇಶದ ನಾಗರಿಕರು ಸೇರಿದಂತೆ ಹೆಚ್ಚಿನ ಸಂಖ್ಯೆಯ ವಿದೇಶಿ ಪ್ರಜೆಗಳ ಹೆಸರುಗಳು ಕಂಡುಬಂದಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಬೂತ್ ಮಟ್ಟದ ಅಧಿಕಾರಿಗಳು ಮತದಾರರ ಮಾಹಿತಿ ಸಂಗ್ರಹಿಸಲು ಮನೆ ಮನೆಗೆ ತೆರಳುತ್ತಿದ್ದು ಈ ವೇಳೆ ಮತದಾರರ ಪಟ್ಟಿಯಲ್ಲಿ ವಿದೇಶಿ ಪ್ರಜೆಗಳ ಹೆಸರುಗಳು ಇರುವುದು ಜೊತೆಗೆ ಪಡಿತರ ಚೀಟಿ, ಆಧಾರ್ ಕಾರ್ಡ್, ಮನೆ ದೃಢಿಕರಣ ಪತ್ರ ಇವೆಲ್ಲವನ್ನೂ ತಮ್ಮ ಹೆಸರಿನಲ್ಲಿ ಮಾಡಿಸಿಕೊಳ್ಳುವಲ್ಲಿ ಕೂಡ ಯಶಸ್ವಿಯಾಗಿದ್ದಾರೆ ಎಂಬ ಅಂಶಗಳೂ ಹೊರಬಿದ್ದಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕೈಗಾರಿಕೆಯಲ್ಲಿ ತಮಿಳುನಾಡು ಮಾದರಿ ಅಳವಡಿಸಿಕೊಳ್ಳಲಿ ಕರ್ನಾಟಕ

ಈ ಕುರಿತು ಪ್ರತಿಕ್ರಿಯೆ ನೀಡಿದ ಚುನಾವಣಾ ಆಯೋಗದ ಅಧಿಕಾರಿಗಳು ಆಗಸ್ಟ್ 1 ರ ಬಳಿಕ ಬೂತ್ ಮಟ್ಟದ ಅಧಿಕಾರಿಗಳು ಮತದಾರರ ಮನೆ ಮನೆಗೆ ತೆರಳಿ ಅಕ್ರಮ ವಲಸಿಗರ ಹೆಸರುಗಳನ್ನು ಪತ್ತೆಹಚ್ಚಿ ಸೆಪ್ಟೆಂಬರ್ 30 ರಂದು ಪ್ರಕಟವಾಗುವ ಅಂತಿಮ ಮತದಾರರ ಪಟ್ಟಿಯಲ್ಲಿ ಅಕ್ರಮ ವಲಸಿಗರ ಹೆಸರುಗಳನ್ನು ಕೈಬಿಡಲಾಗುವುದು ಎಂದು ಹೇಳಿದ್ದಾರೆ.

ಚುನಾವಣಾ ಆಯೋಗ ಕೇಂದ್ರದ ಕೈಗೊಂಬೆ

ಚುನಾವಣಾ ಆಯೋಗವು ಯಾವಾಗಲೂ ಮೋದಿ ಸರ್ಕಾರದ ಕೈಗೊಂಬೆಯಾಗಿದೆ ಎಂದು ರಾಜ್ಯಸಭಾ ಸಂಸದ ಮತ್ತು ಹಿರಿಯ ವಕೀಲ ಕಪಿಲ್ ಸಿಬಲ್ ಆರೋಪಿಸಿದ್ದಾರೆ. ಬಿಹಾರದಲ್ಲಿ ಮತದಾರರ ಪಟ್ಟಿಯಲ್ಲಿ ಮಾಡಲಾಗುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂವಿಧಾನಬಾಹಿರವಾಗಿದೆ. ಬಹುಮತ ಹೊಂದಿದ ಸರ್ಕಾರ ಅಧಿಕಾರದಲ್ಲಿ ಮುಂದುವರೆಯಲು ಈ ತಂತ್ರಗಾರಿಕೆಯನ್ನು ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...