ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಮತ್ತೊಂದು ಕೊಲೆ ಬೆದರಿಕೆ, ಪೊಲೀಸ್‌ ತನಿಖೆ ಆರಂಭ

Date:

ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಮತ್ತೊಂದು ಜೀವ ಬೆದರಿಕೆ ಸಂದೇಶ ಬಂದಿದ್ದು, ₹5 ಕೋಟಿ ಹಣಕ್ಕೆ ಬೇಡಿಕೆ ಇಡಲಾಗಿದೆ.

ಗ್ಯಾಂಗ್​ಸ್ಟರ್ ಲಾರೆನ್ಸ್​ ಬಿಷ್ಣೋಯ್​ನಿಂದ ಕೊಲೆ ಬೆದರಿಕೆಗಳನ್ನು ಎದುರಿಸುತ್ತಿರುವ ಸಲ್ಮಾನ್‌ ಖಾನ್​ಗೆ ಇದೀಗ ಲಾರೆನ್ಸ್​ ಬಿಷ್ಣೋಯ್ ಸಹೋದರ ಹೊಸ ಬೆದರಿಕೆ ಹಾಕಿದ್ದಾನೆ. ಕಳೆದ 10 ದಿನಗಳಲ್ಲಿ ಮೂರು ಬೆದರಿಕೆ ಕರೆಗಳು ಬಂದಿವೆ.

ಮುಂಬೈ ಟ್ರಾಫಿಕ್ ಪೊಲೀಸ್ ಸಹಾಯವಾಣಿಗೆ ಮಂಗಳವಾರ ಬೆದರಿಕೆ ಸಂದೇಶ ಬಂದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಂದೇಶ ಕಳುಹಿಸಿದ ವ್ಯಕ್ತಿ ತಾನು ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಟೋಯಿ ಅವರ ಸೋದರ ಎಂದು ಹೇಳಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯಾರೋ ಮುಂಬೈ ಟ್ರಾಫಿಕ್ ಪೊಲೀಸರಿಗೆ ಕರೆ ಮಾಡಿ 5 ಕೋಟಿ ರೂ. ಕೊಡದಿದ್ದರೆ ಸಲ್ಮಾನ್​ ಖಾನ್​ರನ್ನು ಕೊಲೆ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದರು. ಬೆದರಿಕೆ ಸಂದೇಶ ಬಂದ ನಂತರ ಮುಂಬೈನ ವರ್ಲಿ ಜಿಲ್ಲೆಯ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ಲಾಸ್ಟಿಕ್ ತ್ಯಾಜ್ಯಕ್ಕೆ ಕಡಿವಾಣ ಯಾವಾಗ?

ಸಲ್ಮಾನ್ ಖಾನ್ ಜೀವಂತವಾಗಿ ಉಳಿಯಬೇಕು ಎಂದು ಬಯಸುವುದಾದರೆ ಬಿಷ್ಟೋಯಿ ಸಮುದಾಯದ ದೇಗುಲಕ್ಕೆ ಭೇಟಿ ಕೊಟ್ಟು ಕ್ಷಮೆಯಾಚಿಸಬೇಕು ಅಥವಾ ₹5 ಕೋಟಿ ನೀಡಬೇಕು. ಇಲ್ಲದಿದ್ದರೆ ಅವನನ್ನು ಕೊಲ್ಲುತ್ತೇವೆ. ನಮ್ಮ ಗ್ಯಾಂಗ್‌ ಇನ್ನೂ ಸಕ್ರಿಯವಾಗಿದೆ ಎಂದು ಸಂದೇಶದಲ್ಲಿ ತಿಳಿಸಲಾಗಿದೆ.

ಬೆದರಿಕೆ ಸಂದೇಶದ ಮೂಲ ಹುಡುಕಾಡಲು ಪೊಲೀಸಲು ತನಿಖೆ ಆರಂಭಿಸಿದ್ದಾರೆ. ಸಲ್ಮಾನ್ ಖಾನ್ ಅವರಿಗೆ ಭದ್ರತೆಯನ್ನು ಹೆಚ್ಚಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...