‘ಆಪರೇಷನ್ ಸಿಂಧೂರ’ ಟೈಟಲ್ ನೋಂದಣಿಗೆ ಮುಗಿಬಿದ್ದ ಬಾಲಿವುಡ್ ನಿರ್ಮಾಪಕರು

Date:

ಪಾಕಿಸ್ತಾನದ ವಿರುದ್ಧ ನಡೆಸಿದ ಕಾರ್ಯಾಚರಣೆಗೆ ಭಾರತವು ‘ಆಪರೇಷನ್ ಸಿಂಧೂರ್’ ಎಂದು ಹೆಸರಿಟ್ಟಿದೆ. ಈ ಟೈಟಲ್‌ಅನ್ನು ತಮ್ಮ ಸಿನಿಮಾಗೆ ಶೀರ್ಷಿಕೆಯನ್ನಾಗಿ ನೋಂದಾಯಿಸಿಕೊಳ್ಳಲು ಬಾಲಿವುಡ್ ಸಿನಿಮಾ ನಿರ್ಮಾಪಕರು ಮತ್ತು ಕಲಾವಿದರು ಮುಗಿಬಿದ್ದಿದ್ದಾರೆ. ಕೇವಲ ಎರಡು ದಿನಗಳಲ್ಲಿ 30ಕ್ಕೂ ಹೆಚ್ಚು ಅರ್ಜಿಗಳನ್ನು ಸಲ್ಲಿಸಿದ್ದಾರೆ.

ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ದಾಳಿ ನಡೆಸಿದ ಭಯೋತ್ಪಾದಕರು 28 ಮಂದಿಯನ್ನು ಹತ್ಯೆಗೈದಿದ್ದರು. ಆ ಹತ್ಯಾಕಾಂಡಕ್ಕೆ ಪ್ರತಿದಾಳಿಯಾಗಿ ಭಾರತವು ಬುಧವಾರ ಮುಂಜಾನೆ ಪಾಕಿಸ್ತಾನದ ಭಯೋತ್ಪಾದಕ ನೆಲೆಗಳ ಮೇಲೆ ದಾಳಿ ನಡೆಸಿತು. ಆ ಕಾರ್ಯಾಚರಣೆಯನ್ನು ‘ಆಪರೇಷನ್ ಸಿಂಧೂರ’ ಎಂದು ಕರೆದಿದೆ.

ಕಾರ್ಯಾಚರಣೆ ಬೆನ್ನಲ್ಲೇ, ಆಪರೇಷನ್ ಸಿಂಧೂರ್ ಶೀರ್ಷಿಕೆಯನ್ನು ಸಿನಿಮಾ ಶಿರ್ಷಿಕೆಗಾಗಿ ನೋಂದಾಯಿಸಲು ಹಲವಾರು ನಿರ್ಮಾಪಕರು ಅರ್ಜಿ ಸಲ್ಲಿಸುತ್ತಿದ್ದಾರೆ ಎಂದು ಭಾರತೀಯ ಚಲನಚಿತ್ರ ನಿರ್ಮಾಪಕರ ಸಂಘ (IMPPA), ಭಾರತೀಯ ಚಲನಚಿತ್ರ ಮತ್ತು ದೂರದರ್ಶನ ನಿರ್ಮಾಪಕರ ಮಂಡಳಿ (IFTPC) ಹಾಗೂ ಪಶ್ಚಿಮ ಭಾರತ ಚಲನಚಿತ್ರ ನಿರ್ಮಾಪಕರ ಸಂಘ (WIFPA) ಹೇಳಿವೆ. ಈವರೆಗೆ ಇಮೇಲ್ ಮೂಲಕ ಮೂರು ಸಂಸ್ಥೆಗಳಿಗೆ ಒಟ್ಟು 30ಕ್ಕೂ ಹೆಚ್ಚು ಅರ್ಜಿಗಳು ಬಂದಿವೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅರ್ಜಿಗಳ ಸಂಖ್ಯೆಗಳು 50–60ಕ್ಕೆ ಏರಬಹುದು. ಇದು ಹೊಸದೇನಲ್ಲ. ಹೆಚ್ಚಿನ ಜನರು ಆಪರೇಷನ್ ಸಿಂಧೂರ್, ಮಿಷನ್ ಸಿಂಧೂರ್, ಹಿಂದೂಸ್ತಾನ್ ಕಾ ಸಿಂದೂರ್, ಮಿಷನ್ ಆಪರೇಷನ್ ಸಿಂದೂರ್ ಮತ್ತು ಸಿಂದೂರ್ ಕಾ ಬದ್ಲಾ ರೀತಿಯ ಶೀರ್ಷಿಕೆಗಳಿಗೆ ಅರ್ಜಿ ಸಲ್ಲಿಸಿದ್ದಾರೆ ಎಂದು IMPPA ಕಾರ್ಯದರ್ಶಿ ಅನಿಲ್ ನಾಗರತ್ ತಿಳಿಸಿದ್ದಾರೆ.

“ಯಾರು ಬೇಕಾದರೂ ಶೀರ್ಷಿಕೆಗಳಿಗೆ ಅರ್ಜಿ ಸಲ್ಲಿಸಬಹುದು. ಆದರೆ ಮೊದಲು ಅರ್ಜಿ ಸಲ್ಲಿಸಿದ ವ್ಯಕ್ತಿಗೆ ಶೀರ್ಷಿಕೆಯನ್ನು ನೀಡಲಾಗುತ್ತದೆ. ಚಲನಚಿತ್ರ ನಿರ್ಮಿಸಲು ಬಯಸುವ ಯಾವುದೇ ನಿರ್ಮಾಪಕರು ಸಾಮಾನ್ಯವಾಗಿ ಸುದ್ದಿಯಲ್ಲಿರುವ ವಿಷಯಗಳನ್ನು ಹುಡುಕುತ್ತಾರೆ. ಇದು ಭಾರತ ಹೆಮ್ಮೆಪಡುವ ವಿಷಯ, ಆದ್ದರಿಂದ ಚಲನಚಿತ್ರ ನಿರ್ಮಾಪಕರು ಈ ಕಥೆಯನ್ನು ಪರದೆಯ ಮೇಲೆ ತರಲು ಉತ್ಸುಕರಾಗಿದ್ದಾರೆ” ಎಂದು ನಾಗರತ್ ಹೇಳಿದ್ದಾರೆ.

ಕಾರ್ಗಿಲ್, ಉರಿ, ಕುಂಭ ಮತ್ತು ಇತರ ಶೀರ್ಷಿಕೆಗಳಿಗಾಗಿಯೂ ಇದೇ ರೀತಿಯಲ್ಲಿ ಅರ್ಜಿಗಳು ಬಂದಿದ್ದವು ಎಂದು ಅವರು ತಿಳಿಸಿದ್ದಾರೆ,

ಮೂಲಗಳ ಪ್ರಕಾರ, ನಿರ್ದೇಶಕ ಆದಿತ್ಯ ಧರ್ (2019ರ ‘ಉರಿ: ದಿ ಸರ್ಜಿಕಲ್ ಸ್ಟ್ರೈಕ್’ ಚಿತ್ರವನ್ನು ನಿರ್ದೇಶಿಸಿದವರು), ನಟ ಸುನೀಲ್ ಶೆಟ್ಟಿ, ಚಲನಚಿತ್ರ ನಿರ್ಮಾಪಕ ಮಧುರ್ ಭಂಡಾರ್ಕರ್, ವಿವೇಕ್ ಅಗ್ನಿಹೋತ್ರಿ, ಅಶೋಕ್ ಪಂಡಿತ್ ಹಾಗೂ ನಿರ್ಮಾಣ ಸಂಸ್ಥೆ ಟಿ-ಸೀರೀಸ್ ಸೇರಿದಂತೆ ಹಲವರು ಶೀರ್ಷಿಕೆಗಾಗಿ ಅರ್ಜಿಗಳನ್ನು ಸಲ್ಲಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...