ಚೆನ್ನೈನಿಂದ ಮುಂಬೈಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಮಂಗಳವಾರ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಮಾಹಿತಿ ಮೇರೆಗೆ ಮುಂಬೈ ವಿಮಾನ ನಿಲ್ದಾಣದಲ್ಲಿ ರಾತ್ರಿ 10.30ರ ಸುಮಾರಿಗೆ ವಿಮಾನವನ್ನು ಸುರಕ್ಷಿತವಾಗಿ ಇಳಿಸಲಾಗಿದೆ.
ಹೇಳಿಕೆಯಲ್ಲಿ, ವಿಮಾನಯಾನ ಸಂಸ್ಥೆ ಬಾಂಬ್ ಬೆದರಿಕೆಯನ್ನು ದೃಢಪಡಿಸಿದೆ. ಹಾಗೆಯೇ ನಿಯಮವನ್ನು ಕೂಡಾ ಅನುಸರಿಸಲಾಗಿದೆ. ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಇಳಿಸಲಾಗಿದೆ ಎಂದು ಇಂಡಿಗೋ ಸಂಸ್ಥೆ ತಿಳಿಸಿದೆ.
“ಚೆನ್ನೈನಿಂದ ಮುಂಬೈಗೆ ಹಾರಾಟ ಮಾಡುವ ಇಂಡಿಗೋ ವಿಮಾನ 6E 5149ಕ್ಕೆ ಬಾಂಬ್ ಬೆದರಿಕೆ ಬಂದಿತ್ತು. ಮುಂಬೈನಲ್ಲಿ ಪ್ರಯಾಣಿಕರನ್ನು ಇಳಿಸಿದ ಬಳಿಕ ಸಿಬ್ಬಂದಿ ನಿಯಮವನ್ನು ಅನುಸರಿಸಿದರು. ವಿಮಾನವನ್ನು ಪ್ರತ್ಯೇಕ ಪ್ರದೇಶಕ್ಕೆ ಕೊಂಡೊಯ್ಯಲಾಯಿತು” ಎಂದು ಏರ್‌ಲೈನ್ಸ್ ಹೇಳಿದೆ.
ಇದನ್ನು ಓದಿದ್ದೀರಾ? ದೆಹಲಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಹಾಕಿದ 13ರ ಬಾಲಕ ಪೊಲೀಸ್ ವಶಕ್ಕೆ
“ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿ ವಿಮಾನದಿಂದ ಇಳಿದಿದ್ದಾರೆ. ನಾವು ಭದ್ರತಾ ಏಜೆನ್ಸಿಗಳೊಂದಿಗೆ ಕಾರ್ಯ ನಿರ್ವಹಣೆ ಮಾಡುತ್ತಿದ್ದೇವೆ. ಎಲ್ಲಾ ಭದ್ರತಾ ತಪಾಸಣೆಗಳನ್ನು ಪೂರ್ಣಗೊಳಿಸಿದ ನಂತರ ವಿಮಾನವನ್ನು ಟರ್ಮಿನಲ್ ಪ್ರದೇಶದಲ್ಲಿ ಇರಿಸಲಾಗುವುದು” ಎಂದು ತಿಳಿಸಿದೆ.
A Mumbai-bound IndiGo flight from Chennai received a bomb threat message. The flight landed safely in Mumbai around 10:30pm.
IndiGo says, “IndiGo flight 6E 5149, operating from Chennai to Mumbai, had received a bomb threat. Upon landing in Mumbai, the crew followed protocol and…
— ANI (@ANI) June 19, 2024
ಇನ್ನು ಮಂಗಳವಾರ ಮುಂಬೈನಲ್ಲಿರುವ ಬೃಹತ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಪ್ರಧಾನ ಕಚೇರಿಗೆ ಬಾಂಬ್ ಬೆದರಿಕೆ ಇಮೇಲ್ ಬಂದಿದೆ. ಬೆದರಿಕೆ ಇಮೇಲ್‌ನ ನಂತರ, ಪೊಲೀಸರು ಕಟ್ಟಡದಲ್ಲಿ ಶೋಧ ನಡೆಸಿದ್ದು, ಯಾವುದೇ ಅನುಮಾನಾಸ್ಪದ ವಸ್ತು, ವ್ಯಕ್ತಿ ಕಂಡುಬಂದಿಲ್ಲ. ಬೆದರಿಕೆ ಹಿನ್ನೆಲೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.





