ಸಾಮಾಜಿಕ ಜಾಲತಾಣದ ಮೂಲಕ ನಾಲ್ಕು ವಿಮಾನಗಳಿಗೆ ಬಾಂಬ್ ಬೆದರಿಕೆ

Date:

ಅಮೆರಿಕಗೆ ತೆರಳುವ ಒಂದು ವಿಮಾನ ಸೇರಿದಂತೆ ನಾಲ್ಕು ವಿಮಾನಗಳಿಗೆ ಮಂಗಳವಾರ ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಬಾಂಬ್ ಬೆದರಿಕೆ ಹಾಕಲಾಗಿದೆ. ‘ಮೈಕ್ರೋಬ್ಲಾಗಿಂಗ್ ಪ್ಲಾಟ್‌ಫಾರ್ಮ್’ ಎಂಬ ಎಕ್ಸ್ ಖಾತೆಯ ಮುಖಾಂತರ ಬಾಂಬ್ ಬೆದರಿಕೆ ಸಂದೇಶಗಳು ಬಂದಿವೆ. ಆ ಸಂದೇಶಗಳಲ್ಲಿ, ಎಕ್ಸ್ ಹ್ಯಾಂಡಲ್ ಏರ್ ಲೈನ್ ಮತ್ತು ಪೊಲೀಸ್ ಇಲಾಖೆಯ ಖಾತೆಗಳನ್ನು ಟ್ಯಾಗ್ ಮಾಡಲಾಗಿದೆ.

ಜೈಪುರದಿಂದ ಅಯೋಧ್ಯೆ ಮೂಲಕ ಬೆಂಗಳೂರಿಗೆ ತೆರಳುವ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ (IX765), ದರ್ಭಾಂಗದಿಂದ ಮುಂಬೈಗೆ ತೆರಳುವ ಸ್ಪೈಸ್ ಜೆಟ್ ವಿಮಾನ (SG116), ಸಿಲಿಗುರಿಯಿಂದ ಬೆಂಗಳೂರಿಗೆ ಆಕಾಶ ಏರ್ ವಿಮಾನ (QP 1373) ಹಾಗೂ ದೆಹಲಿಯಿಂದ ಚಿಕಾಗೋಗೆ ತೆರಳುವ ಏರ್ ಇಂಡಿಯಾ ವಿಮಾನ (AI 127)ಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಈ ಬೆದರಿಕೆಯಿಂದ ನೂರಾರು ಪ್ರಯಾಣಿಕರು ಮತ್ತು ಏರ್ಲೈನ್ ಸಿಬ್ಬಂದಿಗಳು ಅತಂಕಗೊಂಡಿದ್ದಾರೆ.

ಬೆದರಿಕೆ ಬಂದ ಕೂಡಲೇ ಭದ್ರತಾ ಸಿಬ್ಬಂದಿ ತಪಾಸಣೆ ನಡೆಸಿದ್ದು, ವಿಮಾನಗಳೊಳಗೆ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೇ, ಸಾಮಾಜಿಕ ಜಾಲತಾಣದ ಮೂಲಕ ಪೋಸ್ಟ್ ಮಾಡಿದ ಸಂದೇಶಗಳು ಸುಳ್ಳು ಎಂದು ಘೋಷಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನವನ್ನು ಅಯೋಧ್ಯೆ ವಿಮಾನ ನಿಲ್ದಾಣದಲ್ಲಿ ಭದ್ರತಾ ತಪಾಸಣೆಗೆ ಒಳಪಡಿಸಲಾಗಿತ್ತು.

ಇನ್ನು, ನಿನ್ನೆ ಕೂಡ ಅಂತಾರಾಷ್ಟ್ರೀಯ ವಿಮಾನಗಳಿಗೂ ಬಾಂಬ್ ಬೆದರಿಕೆ ಬಂದಿತ್ತು. ಪರಿಣಾಮವಾಗಿ, ದೆಹಲಿಯಿಂದ ಚಿಕಾಗೋಗೆ ತೆರಳುತ್ತಿದ್ದ ಎಐ ವಿಮಾನವನ್ನು ಭದ್ರತಾ ತಪಾಸಣೆಗಾಗಿ ಕೆನಡಾಕ್ಕೆ ತಿರುಗಿಸಲಾಗಿದೆ ಎಂದು ಫ್ಲೈಟ್-ಟ್ರ್ಯಾಕಿಂಗ್ ವೆಬ್‌ಸೈಟ್‌ ಹೇಳಿದೆ.

ಸೌದಿ ಅರೇಬಿಯಾದಿಂದ ಇಂಡಿಗೋ ವಿಮಾನವು ಬಾಂಬ್ ಬೆದರಿಕೆಯ ನಂತರ ಜೈಪುರದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಬೆದರಿಕೆಗಳ ಹಿಂದಿರುವ ವ್ಯಕ್ತಿ ಅಥವಾ ಜನರನ್ನು ಪತ್ತೆಹಚ್ಚಲು ಭಾರತೀಯ ಸೈಬರ್-ಸೆಕ್ಯುರಿಟಿ ಏಜೆನ್ಸಿಗಳು ಮತ್ತು ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ಸೆಕ್ಯುರಿಟಿ (ಬಿಸಿಎಎಸ್) ಸಹಾಯ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...