Breaking News | ಮುಂಬೈ ನಗರಕ್ಕೆ ಬಾಂಬ್‌ ಬೆದರಿಕೆ, ಆರೋಪಿ ಅಶ್ವಿನಿ ಕುಮಾರ್ ಬಂಧನ

Date:

ಮುಂಬೈ ನಗರವನ್ನು ಸರಣಿ ಬಾಂಬ್‌ಗಳಿಂದ ಸ್ಫೋಟಿಸುವುದಾಗಿ ಬೆದರಿಕೆ ಹಾಕುವ ವಾಟ್ಸಾಪ್ ಸಂದೇಶವನ್ನು ಕಳುಹಿಸಿದ ಆರೋಪದ ಮೇಲೆ ಉತ್ತರ ಪ್ರದೇಶದ ನೋಯ್ಡಾದ 51 ವರ್ಷದ ವ್ಯಕ್ತಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಬಿಹಾರದ ಪಾಟ್ನಾದ ಪಾಟ್ಲಿಪುತ್ರದ ಜ್ಯೋತಿಷಿ ಮತ್ತು ವಾಸ್ತು ಸಲಹೆಗಾರ ಅಶ್ವಿನಿ ಕುಮಾರ್ ಎಂದು ಗುರುತಿಸಲಾಗಿದೆ. ಅವರು ಕಳೆದ ಐದು ವರ್ಷಗಳಿಂದ ನೋಯ್ಡಾದ ಸೆಕ್ಟರ್ 79 ರಲ್ಲಿ ತಮ್ಮ ಪೋಷಕರೊಂದಿಗೆ ವಾಸಿಸುತ್ತಿದ್ದಾರೆ. ಅವರ ತಂದೆ ಸುರೇಶ್ ಕುಮಾರ್ ನಿವೃತ್ತ ಶಿಕ್ಷಣ ಇಲಾಖೆಯ ಅಧಿಕಾರಿ ಮತ್ತು ತಾಯಿ ಪ್ರಭಾವತಿ ಗೃಹಿಣಿ.

ಸ್ನಾತಕೋತ್ತರ ಪದವೀಧರರಾಗಿರುವ ಅಶ್ವಿನಿ ಕುಮಾರ್, ಪತ್ನಿ ಅರ್ಚನಾ ಅವರಿಂದ ದೂರವಾಗಿದ್ದಾರೆ. ಆರ್ಥಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 2023 ರಲ್ಲಿ ಬಿಹಾರ ನಿವಾಸಿಯಾಗಿರುವ ಅವರ ಸ್ನೇಹಿತ ಫಿರೋಜ್ ಅವರು ಪಾಟ್ನಾದ ಫುಲ್ವಾರಿ ಷರೀಫ್ ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಿದ ನಂತರ ಅವರು ಮೂರು ತಿಂಗಳ ಕಾಲ ಜೈಲಿನಲ್ಲಿ ಇದ್ದು ಹೊರಗೆ ಬಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಫಿರೋಜ್ ಅವರನ್ನು ಭಯೋತ್ಪಾದನಾ ಪ್ರಕರಣದಲ್ಲಿ ಸಿಲುಕಿಸಲು ಕುಮಾರ್ ಫಿರೋಜ್ ಹೆಸರಿನಲ್ಲಿ ಇತ್ತೀಚಿನ ಬೆದರಿಕೆ ಸಂದೇಶವನ್ನು ಕಳುಹಿಸಿದ್ದಾನೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

ಮುಂಬೈನಲ್ಲಿ ಗಣೇಶ ವಿಸರ್ಜನೆ ಆಚರಣೆಗೆ ಒಂದು ದಿನ ಮೊದಲು ಭಯೋತ್ಪಾದಕ ಬೆದರಿಕೆ ಬಂದಿದ್ದರಿಂದ, ವಿಷಯ ಆತಂಕಕಾರಿಯಾಗಿತ್ತು. ಬೆದರಿಕೆ ಸಂದೇಶದ ನಂತರ ಶುಕ್ರವಾರ ನಗರದಲ್ಲಿ ಹೆಚ್ಚಿನ ಕಟ್ಟೆಚ್ಚರ ವಹಿಸಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...