ವಾಟ್ಸಾಪ್ ಸ್ಟೇಟಸ್ ಹಾಕುವಾಗ ಎಚ್ಚರವಿರಲಿ: ಬಾಂಬೆ ಹೈಕೋರ್ಟ್ ಸಲಹೆ

Date:

ವಾಟ್ಸಾಪ್ ಬಳಕೆದಾರರಿಗೆ ಬಾಂಬೆ ಹೈಕೋರ್ಟ್ ಮಹತ್ವದ ಸಂದೇಶವನ್ನು ನೀಡಿದೆ. ಸಾಮಾಜಿಕ ಮಾಧ್ಯಮದ ವೇದಿಕೆಯಲ್ಲಿ ಸಂವಹನ ಮಾಡುವಾಗ ಜವಾಬ್ದಾರಿಯುತವಾಗಿ ವರ್ತಿಸುವಂತೆ ನ್ಯಾಯಾಲಯದ ನಾಗ್ಪುರ ಪೀಠ ವಾಟ್ಸಾಪ್ ಬಳಕೆದಾರರಿಗೆ ಸಲಹೆ ನೀಡಿದೆ.

ಧಾರ್ಮಿಕ ಗುಂಪಿನ ವಿರುದ್ಧ ದ್ವೇಷವನ್ನು ಹರಡಿದ ಪ್ರಕರಣದ ವಿಚಾರಣೆ ವೇಳೆ ಕೋರ್ಟ್ ಈ ಹೇಳಿಕೆ ನೀಡಿದೆ. ಅಲ್ಲದೇ ಪೋಸ್ಟ್ ಮಾಡಿದ ವ್ಯಕ್ತಿಯ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸಲು ಕೋರ್ಟ್ ನಿರಾಕರಿಸಿದೆ.

ಜುಲೈ 12ರಂದು ನೀಡಿದ ಆದೇಶದಲ್ಲಿ, ನ್ಯಾಯಮೂರ್ತಿಗಳಾದ ವಿನಯ್ ಜೋಶಿ ಮತ್ತು ವಾಲ್ಮೀಕಿ ಎಸ್ ಎ ಮೆನೇಜಸ್ ಅವರನ್ನು ಒಳಗೊಂಡ ವಿಭಾಗೀಯ ಪೀಠವು, ನೀವು ಏನು ಮಾಡುತ್ತಿದ್ದೀರಿ, ಆಲೋಚಿಸುತ್ತೀರಿ ಅಥವಾ ನೀವು ನೋಡಿದ ಯಾವುದೋ ಚಿತ್ರ, ವಿಡಿಯೋ ಆಗಿರಬಹುದು. ಅದು 24 ಗಂಟೆಗಳ ನಂತರ ಕಣ್ಮರೆಯಾಗುತ್ತದೆ. ವಾಟ್ಸಾಪ್ ಸ್ಟೇಟಸ್ ವ್ಯಕ್ತಿಯ ಸಂಪರ್ಕದಲ್ಲಿರುವವರಿಗೆ ಏನನ್ನಾದರೂ ತಿಳಿಸುವ ಉದ್ದೇಶವಾಗಿದೆ. ಇದು ತಿಳಿದಿರುವ ವ್ಯಕ್ತಿಗಳೊಂದಿಗೆ ಸಂವಹನದ ವಿಧಾನವಲ್ಲದೆ ಬೇರೇನೂ ಅಲ್ಲ. ಇತರರೊಂದಿಗೆ ಸಂವಹನ ಮಾಡುವಾಗ ಜವಾಬ್ದಾರಿಯುತವಾಗಿ ವರ್ತಿಸಬೇಕು ಎಂದು ಪೀಠ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಂದ್ರಯಾನ 3 ಉಡಾವಣೆ| ಎಲ್ಲ ಮಾಜಿ ಪ್ರಧಾನಿಗಳ ದೂರದೃಷ್ಟಿಗೆ ಸಾಕ್ಷಿ: ಖರ್ಗೆ ಶ್ಲಾಘನೆ

ಧಾರ್ಮಿಕ ಭಾವನೆ ಹಾಗೂ ನಂಬಿಕೆಯನ್ನು ಉದ್ದೇಶಪೂರ್ವಕವಾಗಿ ಘಾಸಿಗೊಳಿಸಿದ ಬಗ್ಗೆ ದಾಖಲಾಗಿರುವ ಎಫ್‍ಐಆರ್‌ ಅನ್ನು ರದ್ದುಗೊಳಿಸುವಂತೆ 27 ವರ್ಷದ ಕಿಶೋರ್ ಲ್ಯಾಂಡ್ಕರ್ ಎಂಬ ಆರೋಪಿ ಸಲ್ಲಿಸಿದ್ದ ಅರ್ಜಿಯನ್ನು ಪೀಠವು ವಜಾಗೊಳಿಸಿದೆ.

ಕಿಶೋರ್ ಲ್ಯಾಂಡ್ಕರ್ ವಿರುದ್ಧ ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ ಮತ್ತು ಮಾಹಿತಿ ತಂತ್ರಜ್ಞಾ ನ ಕಾಯಿದೆಯ ನಿಬಂಧನೆಗಳ ಉಲ್ಲಂಘನೆಯ ಆರೋಪದ ಪ್ರಕರಣಕ್ಕಾಗಿ ಪೀಠವು ವಿಚಾರಣೆ ನಡೆಸಿತು.

ಮಾರ್ಚ್ 2023 ರಲ್ಲಿ ಧಾರ್ಮಿಕ ಭಾವನೆ ಕೆರಳಿಸುವ ವಿಚಾರವನ್ನು ಆರೋಪಿ ಸ್ಟೇಟಸ್‍ಗೆ ಹಾಕಿದ್ದು, ಈ ಬಗ್ಗೆ ಇಂಟರ್‌ನೆಟ್ ಹುಡುಕುವಂತೆ ಸೂಚಿಸಿದ್ದಾನೆ. ಇದನ್ನು ಹುಡುಕಾಟ ಮಾಡಿದವರ ಧಾರ್ಮಿಕ ಭಾವನೆ ಕೆರಳಿಸುವ ಆಕ್ಷೇಪಾರ್ಹ ವಿಷಯಗಳ ಫಲಿತಾಂಶಗಳು ತೋರಿಸಲಾಗುತ್ತದೆ ಎಂದು ಪೀಠವು ಗಮನಿಸಿತು. ಆದರೆ ಆರೋಪಿ ತನ್ನ ಉದ್ದೇಶ ಬೇರೆಯವರಿಗೆ ನೋವು ಕೊಡುವುದಾಗಿರಲಿಲ್ಲ ಎಂದು ವಾದಿಸಿದ್ದಾನೆ.

ಈ ಸುದ್ದಿ ಓದಿದ್ದೀರಾ? ಬ್ರೇಕಿಂಗ್ ನ್ಯೂಸ್‌ | ಟ್ವಿಟರ್‌ಗೆ 50 ಲಕ್ಷ ರೂ. ದಂಡ ವಿಧಿಸಿದ ಕರ್ನಾಟಕ ಹೈಕೋರ್ಟ್‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...