ಜಾಹೀರಾತುಗಳಲ್ಲಿ ಮಹಿಳೆಯ ಚಿತ್ರ ಬಳಕೆ: ಕೇಂದ್ರ, ಕರ್ನಾಟಕ ಸರ್ಕಾರಕ್ಕೆ ಬಾಂಬೆ ಹೈಕೋರ್ಟ್ ನೋಟಿಸ್

Date:

ಮಹಿಳೆಯ ಒಪ್ಪಿಗೆ ಇಲ್ಲದೆಯೇ ಜಾಹೀರಾತುಗಳಲ್ಲಿ ಮಹಿಳೆಯ ಚಿತ್ರ ಬಳಸುವುದು ‘ವಾಣಿಜ್ಯ ದೌರ್ಜನ್ಯ’ ಎಂದು ಬಾಂಬೆ ಹೈಕೋರ್ಟ್ ಹೇಳಿದೆ. ಸಾಮಾಜಿಕ ಮಾಧ್ಯಮ ಯುಗದಲ್ಲಿ ಇದೊಂದು ಗಂಭೀರ ವಿಷಯವಾಗಿದೆ ಎಂದು ಕೂಡಾ ಹೈಕೋರ್ಟ್ ಹೇಳಿದೆ.

ನಮೃತಾ ಅಂಕುಶ್ ಕವಾಲೆ ಎಂಬವರು ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಜಿ ಎಸ್ ಕುಲಕರ್ಣಿ ಮತ್ತು ಅದ್ವೈತ್ ಸೇಥ್‌ನ ಅವರ ವಿಭಾಗೀಯ ಪೀಠವು ಇಂದು ನಡೆಸಿದೆ. ಹಾಗೆಯೇ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ, ಕರ್ನಾಟಕ ಸೇರಿದಂತೆ ಒಟ್ಟು ನಾಲ್ಕು ರಾಜ್ಯಗಳಿಗೆ ನೋಟಿಸ್ ನೀಡಿದೆ. ಕಾಂಗ್ರೆಸ್ ಮತ್ತು ಯುಎಸ್‌ ಮೂಲಕ ಸಂಸ್ಥೆಗೂ ಬಾಂಬೆ ಹೈಕೋರ್ಟ್ ನೋಟಿಸ್ ನೀಡಿದೆ.

ಇದನ್ನು ಓದಿದ್ದೀರಾ? ಗುಟ್ಕಾ ಜಾಹೀರಾತು | ಶಾರುಖ್ ಖಾನ್, ಅಜಯ್ ದೇವಗನ್, ಟೈಗರ್ ಶ್ರಾಫ್‌ಗೆ ಸಮನ್ಸ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪರಿಚಯಸ್ಥ ಛಾಯಾಗ್ರಹಕರಾದ ತುಕಾರಾಂ ಕರ್ವೆ ತನ್ನ ಚಿತ್ರವನ್ನು ಕ್ಲಿಕ್ಕಿಸಿದ್ದು, ತನ್ನ ಅನುಮತಿಯಿಲ್ಲದೆಯೇ ಶಟರ್‌ಸ್ಟಾಕ್ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿದ್ದಾರೆ ಎಂದು ಅರ್ಜಿದಾರರಾದ ನಮೃತಾ ಆರೋಪಿಸಿದ್ದಾರೆ.

ಈ ಚಿತ್ರವನ್ನು ಕಾನೂನುಬಾಹಿರವಾಗಿ ನಾಲ್ಕು ರಾಜ್ಯ ಸರ್ಕಾರಗಳು ಮತ್ತು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯ ಜಾಹೀರಾತಿನಲ್ಲಿ ಬಳಸಿದೆ. ಕೆಲವು ಖಾಸಗಿ ಸಂಸ್ಥೆಗಳು ಕೂಡಾ ಜಾಹೀರಾತು ಮತ್ತು ಡಿಸ್‌ಪ್ಲೇ ಬೋರ್ಡ್‌ಗಳಲ್ಲಿ ಬಳಸಿದೆ ಎಂದು ಆರೋಪಿಸಲಾಗಿದೆ.

“ಅರ್ಜಿಯಲ್ಲಿ ಎತ್ತಲಾಗಿರುವ ವಿಚಾರವು ಅತೀ ಗಂಭೀರವಾದ್ದದ್ದು. ಇಂದಿನ ಎಲೆಕ್ಟ್ರಾನಿಕ್ ಮತ್ತು ಸಾಮಾಜಿಕ ಮಾಧ್ಯಮ ಯುಗದಲ್ಲಿ ಇದು ಗಂಭೀರವಾದುದ್ದು. ಇದು ಛಾಯಾಗ್ರಾಹಕ ಮಾಡಿರುವ ವಾಣಿಜ್ಯ ದೌರ್ಜನ್ಯವಾಗಿದೆ” ಎಂದು ಬಾಂಬೆ ಹೈಕೋರ್ಟ್ ಹೇಳಿದೆ.

ಇದನ್ನು ಓದಿದ್ದೀರಾ? 25 ನಿಮಿಷ ಜಾಹೀರಾತು: ಬೆಂಗಳೂರಿನ ವ್ಯಕ್ತಿಯ ಸಮಯ ಪೋಲು ಮಾಡಿದ ಪಿವಿಆರ್‌ಗೆ 1.65 ಲಕ್ಷ ರೂ. ದಂಡ

ಇನ್ನು ಮಹಿಳೆಗೆ ಯಾವುದೇ ಮಾಹಿತಿ ನೀಡದೆಯೇ ಚಿತ್ರವನ್ನು ಶಟರ್‌ಸ್ಟಾಕ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ ಎಂದು ಹೇಳಲಾಗಿದೆ. ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ, ಒಡಿಶಾ ರಾಜ್ಯ ಸರ್ಕಾರಗಳು, ತೆಲಂಗಾಣ ಕಾಂಗ್ರೆಸ್ ಮತ್ತು ಶಟರ್‌ಸ್ಟಾಕ್ ವೆಬ್‌ಸೈಟ್ ನಿರ್ವಹಣೆ ಮಾಡುವ ಸಂಸ್ಥೆಗೆ ಹೈಕೋರ್ಟ್ ನೋಟಿಸ್ ನೀಡಿದೆ.

ನೋಟಿಸ್‌ ಪಡೆದ ಎಲ್ಲ ಸಂಸ್ಥೆಗಳು ಅಥವಾ ಸರ್ಕಾರಗಳು ಅಫಿಡವಿಟ್ ಸಲ್ಲಿಸುವಂತೆ ಹೈಕೋರ್ಟ್ ಆದೇಶಿಸಿದೆ. ಹಾಗೆಯೇ ವಿಚಾರಣೆಯನ್ನು ಮಾರ್ಚ್ 24ಕ್ಕೆ ಮುಂದೂಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...