ಹಿಂದೂ ರುದ್ರಭೂಮಿಯಿಂದ ಮುಸ್ಲಿಂ ವ್ಯಕ್ತಿಯ ಮೃತದೇಹ ಹೊರತೆಗೆಯಲು ಬಾಂಬೆ ಹೈಕೋರ್ಟ್ ಆದೇಶ

Date:

ಸಾಂವಿಧಾನಿಕ ರಕ್ಷಣೆಗಳು ಸಾವಿನೊಂದಿಗೆ ಕೊನೆಗೊಳ್ಳುವುದಿಲ್ಲ ಎನ್ನುವುದನ್ನು ಪುಷ್ಟೀಕರಿಸುವ ಮಹತ್ವದ ತೀರ್ಪೊಂದನ್ನು ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠವು ನೀಡಿದೆ. ಸಂವಿಧಾನದ ವಿಧಿ 21ರಡಿ ವ್ಯಕ್ತಿಯ ಸಾವಿನ ನಂತರವೂ ಘನತೆಯ ಹಕ್ಕು ಅಬಾಧಿತವಾಗಿರುತ್ತದೆ ಎಂದು ಅದು ಎತ್ತಿ ಹಿಡಿದಿದೆ. ಆಡಳಿತಾತ್ಮಕ ನಿರಾಕರಣೆಗಳನ್ನು ತಳ್ಳಿ ಹಾಕಿದ ಪೀಠವು, ಮುಸ್ಲಿಂ ವ್ಯಕ್ತಿಯೋರ್ವರ ಅಂತಿಮ ವಿಧಿವಿಧಾನಗಳನ್ನು ಅವರ ಧರ್ಮಕ್ಕೆ ಅನುಗುಣವಾಗಿ ನಡೆಸುವಂತಾಗಲು ಹಿಂದು ರುದ್ರಭೂಮಿಯಿಂದ ಅವರ ಮೃತದೇಹವನ್ನು ಹೊರತೆಗೆಯಲು ಕೋರಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಪುರಸ್ಕರಿಸಿದೆ.

ಮೃತದೇಹವನ್ನು ಹೊರಕ್ಕೆ ತೆಗೆಯಲು ಅನುಮತಿಯನ್ನು ನಿರಾಕರಿಸಿದ್ದ ನಾಗ್ಪುರ ಗ್ರಾಮೀಣ ತಹಶೀಲ್ದಾರ್ ಮತ್ತು ಉಪ ವಿಭಾಗಾಧಿಕಾರಿಗಳ ಆದೇಶಗಳನ್ನು ರದ್ದುಗೊಳಿಸಿದ ವಿಭಾಗೀಯ ಪೀಠವು, ಸಕ್ಷಮ ನ್ಯಾಯಾಲಯವನ್ನು ಸಂಪರ್ಕಿಸುವಂತೆ ಅರ್ಜಿದಾರರಿಗೆ ಸೂಚಿಸಿತು.

ನಿರಾಕರಣೆಯು ಅಸ್ಪಷ್ಟವಾಗಿದೆ ಮತ್ತು ಕಾರಣರಹಿತವಾಗಿದೆ ಎಂದು ಬೆಟ್ಟು ಮಾಡಿದ ಪೀಠವು, ಈ ಸಂದರ್ಭದಲ್ಲಿ ಮೃತದೇಹವನ್ನು ವಾರಸುದಾರರ ವಶಕ್ಕೆ ನೀಡಲು ನಿರಾಕರಿಸುವುದು ಸಂವಿಧಾನದ 14,21 ಮತ್ತು 25ನೇ ವಿಧಿಗಳ ಉಲ್ಲಂಘನೆಯಾಗುತ್ತದೆ ಎಂದು ಎತ್ತಿ ಹಿಡಿಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಧಿ 226ರಡಿ ಸಲ್ಲಿಸಲಾದ ರಿಟ್ ಅರ್ಜಿಯು ಸಾಜಿದ್ ಖಾನ್ ಮುನವ್ವರ್ ಖಾನ್ ಅವರ ಮೃತದೇಹವನ್ನು ಹೊರಕ್ಕೆ ತೆಗೆಯಲು ಅನುಮತಿ ನಿರಾಕರಿಸಿದ್ದ ಕಂದಾಯ ಅಧಿಕಾರಿಗಳ 2026,ಫೆ.14 ಮತ್ತು ಫೆ.18ರ ಆದೇಶಗಳನ್ನು ಪ್ರಶ್ನಿಸಿತ್ತು.

ಇದನ್ನು ಓದಿದ್ದೀರಾ? ಫಿಫಾ ವಿಶ್ವಕಪ್ 2026 | ಯುದ್ಧಗಳ ಕಾರ್ಮೋಡದ ನಡುವೆ ಫುಟ್‌ಬಾಲ್ ಹಬ್ಬಕ್ಕೆ 100 ದಿನಗಳ ಕ್ಷಣಗಣನೆ

ಅರ್ಜಿಯ ಪ್ರಕಾರ ಖಾನ್ ಅವರು ಜ.25ರಂದು ತನ್ನಿಬ್ಬರು ಸ್ನೇಹಿತರೊಂದಿಗೆ ತಾಜುದ್ದೀನ್ ಬಾಬಾ ಅವರ ಉರೂಸ್‌ನಲ್ಲಿ ಪಾಲ್ಗೊಳ್ಳಲು ನಾಗ್ಪುರಕ್ಕೆ ಪ್ರಯಾಣಿಸಿದ್ದರು. ಜ.26ರಂದು ಅವರು ನಾಪತ್ತೆಯಾಗಿದ್ದರು. ಆರಂಭಿಕ ವಿಚಾರಣೆಗಳು ಫಲ ನೀಡದ್ದರಿಂದ ಜ.31ರಂದು ನಾಪತ್ತೆ ದೂರನ್ನು ದಾಖಲಿಸಲಾಗಿತ್ತು.

ಜ.28ರಂದು ನಾಗ್ಪುರ ಗ್ರಾಮೀಣದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾದ ಬಗ್ಗೆ ಅರ್ಜಿದಾರರಿಗೆ ಮಾಹಿತಿ ನೀಡಲಾಗಿತ್ತು. ಮೃತದೇಹದ ಫೋಟೊಗಳನ್ನು ನೋಡಿದ ಬಳಿಕ ಅರ್ಜಿದಾರರು ಅದು ತನ್ನ ಸಹೋದರ ಖಾನ್ ಅವರದ್ದು ಎಂದು ಗುರುತಿಸಿದ್ದರು. ಮೃತದೇಹವನ್ನು ಅಪರಿಚಿತ ಎಂದು ಪೋಲಿಸರು ಪರಿಗಣಿಸಿದ್ದರಿಂದ ಅದನ್ನು ನಾಗ್ಪುರದ ಇಮಾಮ್‌ವಾಡಾದಲ್ಲಿಯ ಮೋಕ್ಷಧಾಮ ಘಾಟ್‌ನಲ್ಲಿ ಹೂಳಲಾಗಿತ್ತು.

ಮುಸ್ಲಿಂ ಧಾರ್ಮಿಕ ಪದ್ಧತಿಗಳಿಗೆ ಅನುಗುಣವಾಗಿ ಬಡಾ ತಾಜ್‌ಬಾಗ್‌ನಲ್ಲಿಯ ಖಬರಿಸ್ತಾನದಲ್ಲಿ ಅಂತಿಮ ವಿಧಿವಿಧಾನಗಳನ್ನು ನಡೆಸುವಂತಾಗಲು ಮೃತದೇಹವನ್ನು ಹೊರತೆಗೆಯುವಂತೆ ಅರ್ಜಿದಾರರು ಕೋರಿದ್ದರು. ಅವರ ಮನವಿಯನ್ನು ನಿರಾಕರಿಸಿದ್ದ ಅಧಿಕಾರಿಗಳು ಸಕ್ಷಮ ನ್ಯಾಯಾಲಯದಿಂದ ಆದೇಶವನ್ನು ಪಡೆದುಕೊಳ್ಳುವಂತೆ ನಿರ್ದೇಶನ ನೀಡಿದ್ದರು. ಹೀಗಾಗಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಮಧ್ಯಪ್ರಾಚ್ಯ ಸಂಘರ್ಷ | ಕದನ ವಿರಾಮ ಎಂದ ಟ್ರಂಪ್; ಮಾತುಕತೆ ನಡೆದಿಲ್ಲವೆಂದ ಇರಾನ್

ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷವನ್ನು ಕೊನೆಗಾಣಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ನಾನಾ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...