ಬೋರ್‌ವೆಲ್‌ಗೆ ಬಿದ್ದ ಐದರ ಬಾಲಕ; 16 ಗಂಟೆಗಳ ರಕ್ಷಣಾ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

Date:

ರಾಜಸ್ಥಾನದ ಝಾಲವರ್ ಜಿಲ್ಲೆಯಲ್ಲಿ ಸುಮಾರು 32 ಅಡಿ ಆಳದ ಬೋರ್‌ವೆಲ್ ಗುಂಡಿಗೆ ಐದು ವರ್ಷದ ಬಾಲಕ ಬಿದ್ದಿದ್ದು ಸತತ 16 ಗಂಟೆಗಳ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ. ಆದರೆ ಸೋಮವಾರ ಮುಂಜಾನೆ ಎನ್‌ಡಿಆರ್‌ಎಫ್‌ ಮತ್ತು ಎಸ್‌ಡಿಆರ್‌ಎಫ್‌ಗೆ ಬಾಲಕನ ಮೃತದೇಹ ಪತ್ತೆಯಾಗಿದೆ.

ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿದ್ದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ರಾಜ್ಯ ವಿಪತ್ತು ಸ್ಪಂದನೆ ಪಡೆ (ಎಸ್‌ಡಿಆರ್‌ಎಫ್) ಸೋಮವಾರ ಮುಂಜಾನೆ ಸುಮಾರು 4 ಗಂಟೆಗೆ ಬಾಲಕನ ಮೃತದೇಹವನ್ನು ಹೊರತೆಗೆದಿದೆ ಎಂದು ಗಂಗ್ಧಾರ್‌ನ ಎಸ್‌ಡಿಎಂ ಛತರ್‌ಪಾಲ್ ಚೌಧರಿ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ರಾಜಸ್ಥಾನ | ಬೋರ್‌ವೆಲ್‌ಗೆ ಬಿದ್ದ ಬಾಲಕಿ; 10 ದಿನಗಳ ಬಳಿಕ ರಕ್ಷಣೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ಥಳದಲ್ಲೇ ಇದ್ದ ವೈದ್ಯಕೀಯ ತಂಡವು ಬಾಲಕನ ತಪಾಸಣೆ ನಡೆಸಿದ್ದು, ಬಾಲಕ ಸಾವನ್ನಪ್ಪಿರುವುದಾಗಿ ಘೋಷಿಸಿದ್ದಾರೆ.

ಮೃತ ಬಾಲಕನನ್ನು ದುಗ್ ಪೊಲೀಸ್ ಠಾಣೆ ವ್ಯಾಪ್ತಿಯ ಪರಲಿಯಾ ಗ್ರಾಮದ ಪ್ರಹ್ಲಾದ್‌ ಅವರ ಪುತ್ರ ಕುಲಲಾಲ್ ಭಾಗರಿಯಾ ಎಂದು ಗುರುತಿಸಲಾಗಿದೆ. ಗದ್ದೆಯಲ್ಲಿ ಪೋಷಕರು ಕೆಲಸ ಮಾಡುತ್ತಿದ್ದಾಗ, ಸಮೀಪದಲ್ಲೇ ಆಟವಾಡುತ್ತಿದ್ದ ಬಾಲಕ ಬೋರ್‌ವೆಲ್‌ ಗುಂಡಿಗೆ ಬಿದ್ದಿದ್ದಾನೆ ಎಂದು ಹೇಳಲಾಗಿದೆ.

ಭಾನುವಾರ ಬಾಲಕ ಅಚಾನಕ್‌ ಆಗಿ ಬೋರ್‌ವೆಲ್‌ ಗುಂಡಿಗೆ ಬಿದಿದ್ದು, ಘಟನೆ ನಡೆದ ಒಂದು ಗಂಟೆಯ ಬಳಿಕ ರಕ್ಷಣಾ ಕಾರ್ಯಾಚರಣೆ ಆರಂಭವಾಗಿದೆ. ಅದಾದ ಬಳಿಕ ರಕ್ಷಣಾ ಕಾರ್ಯಾಚರಣೆಗೆ ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಕೈ ಜೋಡಿಸಿದೆ ಎಂದು ಎಸ್‌ಡಿಎಂ ಚೌಧರಿ ಮಾಹಿತಿ ನೀಡಿದ್ದಾರೆ.

ಇದನ್ನು ಓದಿದ್ದೀರಾ? ರಾಜಸ್ಥಾನ | ಮೂರು ದಿನ ಬೋರ್‌ವೆಲ್‌ನಲ್ಲಿ ಸಿಲುಕಿದ್ದ ಮಗು; ರಕ್ಷಣಾ ಕಾರ್ಯಾಚರಣೆಯ ನಂತರ ಸಾವು

ಬಾಲಕನಿಗೆ ಪೈಪ್‌ ಮೂಲಕ ಆಮ್ಲಜನಕ (ಆಕ್ಸಿಜನ್) ಸರಬರಾಜು ಮಾಡಲಾಗಿದೆ. ಆದರೆ ಬಾಲಕ ಬದುಕುಳಿಯಲಿಲ್ಲ. ಸದ್ಯ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಡಿಎಸ್‌ಪಿ ಜೈಪ್ರಕಾಶ್ ಅಟಲ್ ತಿಳಿಸಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಬಾಲಕನ ಪೋಷಕರು ದೂರು ನೀಡಿದ್ದು ಪ್ರಕರಣ ದಾಖಲಿಸಿ ಮುಂದಿನ ಕಾರ್ಯಾಚರಣೆ ನಡೆಸಲಾಗುವುದು ಎಂದು ಕೂಡಾ ಡಿಎಸ್‌ಪಿ ಹೇಳಿದ್ದಾರೆ.

ದೇಶದಲ್ಲಿ ಅಧಿಕವಾಗಿರುವ ಬೋರ್‌ವೆಲ್ ದುರಂತ

ಬೋರ್‌ವೆಲ್ ಅಗೆಯುವವರು, ಅದಕ್ಕೆ ಮುಚ್ಚಳಿಕೆ ವ್ಯವಸ್ಥೆ ಮಾಡದೆ ಹಾಗೆಯೇ ಬಿಟ್ಟಿರುವುದು ಹಲವು ಮಕ್ಕಳ ಸಾವಿಗೆ ಕಾರಣವಾಗಿದೆ. ಅದರಲ್ಲೂ ಮುಖ್ಯವಾಗಿ ಇಂತಹ ಘಟನೆಗಳು ಹರಿಯಾಣ, ತಮಿಳುನಾಡು, ಗುಜರಾತ್‌, ರಾಜಸ್ಥಾನದಲ್ಲಿ ಅಧಿಕವಾಗಿ ವರದಿಯಾಗುತ್ತಿದೆ.

ಇದನ್ನು ಓದಿದ್ದೀರಾ? ಬೋರ್‌ವೆಲ್ ಕೊರೆಯುತ್ತಿರುವ ಜಲಮಂಡಳಿ; ಧೂಳಿನಲ್ಲಿ ಮುಳುಗಿದ ಬೆಂಗಳೂರು

ನೂರಾರು ಮಕ್ಕಳು ಪ್ರಾಣ ಕಳೆದುಕೊಂಡರೂ ಕೂಡಾ ಇಂದಿಗೂ ಕಟ್ಟಡ ನಿರ್ಮಾಣ, ಗದ್ದೆಗಳಲ್ಲಿ ಅಗೆಯಲಾಗುವ ತಾತ್ಕಾಲಿಕ ಬೋರ್‌ವೆಲ್‌ಗಳನ್ನು ಮುಚ್ಚುವೆಡೆ ಮಾಲೀಕರು ಗಮನ ಹರಿಸುತ್ತಿಲ್ಲ. ಅದರಲ್ಲೂ ಮುಖ್ಯವಾಗಿ ಗದ್ದೆಯಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರ ಮಕ್ಕಳು, ಕಟ್ಟಡ ಕಾರ್ಮಿಕರ ಮಕ್ಕಳು ಈ ಅನಾಹುತಗಳಿಗೆ ಬಲಿಯಾಗುತ್ತಿದ್ದಾರೆ.

ವರದಿ ಪ್ರಕಾರ ಬೋರ್‌ವೆಲ್‌ಗೆ ಬಿದ್ದ ಬಹುತೇಕ ಮಕ್ಕಳು ಜೀವಂತವಾಗಿ ಹೊರಬಂದಿಲ್ಲ. ರಕ್ಷಿಸಲಾಗಿದ್ದರೂ, ಒಂದೆರಡು ದಿನಗಳಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಇತ್ತೀಚೆಗೆ ರಾಜಸ್ಥಾನದಲ್ಲಿ ಚೇತನ ಚೌಧರಿ ಎಂಬ ಮೂರು ವರ್ಷದ ಬಾಲಕಿ ಸುಮಾರು 700 ಅಡಿ ಆಳದ ಬೋರ್‌ವೆಲ್‌ಗೆ ಬಿದ್ದಿದ್ದು ಸತತ ಹತ್ತು ದಿನಗಳ ಕಾಲ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ. ಆದರೆ ಬಾಲಕಿ ಬದುಕುಳಿಯಲಿಲ್ಲ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...