ಓಯೋ ಮೇಲೆ ಹಿಂದುತ್ವವಾದಿಗಳ ಕೆಂಗಣ್ಣು; ‘BoycottOYO’ ಟ್ರೆಂಡಿಂಗ್!

Date:

ಆನ್‌ಲೈನ್‌ ಮೂಲಕ ಹೋಟೆಲ್‌ ರೂಮ್‌ಗಳ ‘ಬುಕಿಂಗ್‌’ಗಾಗಿ ಹೆಚ್ಚಾಗಿ ಬಳಕೆಯಾಗುವ ರಿತೇಶ್ ಅಗರ್ವಾಲ್ ನೇತೃತ್ವದ ‘OYO ರೂಮ್ಸ್’ ಹಿಂದುತ್ವವಾದಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಓಯೋದ ಇತ್ತೀಚಿನ ಜಾಹೀರಾತುಗಳ ವಿರುದ್ಧ ಹಿಂದುತ್ವವಾದಿ ಧಾರ್ಮಿಕ ಗುಂಪುಗಳು ಆಕ್ರೋಶ ವ್ಯಕ್ತಪಡಿಸಿತ್ತಿವೆ. ತಮ್ಮ ಧಾರ್ಮಿಕ ನಂಬಿಕೆಗೆ ಓಯೋ ಜಾಹೀರಾತು ಧಕ್ಕೆ ತಂದಿದೆ ಎಂದು ಆರೋಪಿಸಿವೆ.

ಓಯೋದ ಒಂದು ಜಾಹೀರಾತು ‘ಭಗವಾನ್ ಹರ್ ಜಗ ಹೈ’ (ದೇವರು ಎಲ್ಲೆಡೆ ಇದ್ದಾನೆ) ಎಂಬ ಟ್ಯಾಗ್‌ಲೈನ್ ಅನ್ನು ಹೊಂದಿತ್ತು. ಅದರ ಕೆಳಗೆ, ‘ಔರ್ ಓಯೋ ಭಿ’ (ಮತ್ತು ಓಯೋ ಕೂಡ) ಎಂದು ಬರೆಯಲಾಗಿದೆ. ಎಲ್ಲೆಡೆ ಓಯೋ ರೂಮ್‌ಗಳು ದೊರೆಯುವುದನ್ನು ದೇವರ ಸರ್ವವ್ಯಾಪಿತ್ವಕ್ಕೆ ಹೋಲಿಕೆ ಮಾಡಿರುವುದನ್ನು ಹಿಂದುತ್ವವಾದಿಗಳು ವಿರೋಧಿಸಿದ್ದಾರೆ. ಓಯೋದ ನಡೆಯು ತಮ್ಮ ನಂಬಿಕೆಗೆ ಅವಮಾನಕರ ಎಂದು ಆಕ್ರೋಶ ವ್ಯಕ್ತಪಡಿಸಿವೆ. ಸಾಮಾಜಿಕ ಜಾಲತಾಣದಲ್ಲಿ #BoycottOYO ಹ್ಯಾಶ್‌ಟ್ಯಾಗ್‌ ಟ್ರೆಂಡ್‌ ಆಗುತ್ತಿದೆ.

“ಹಿಂದು ನಂಬಿಕೆಯ ಮೇಲೆ ಓಯೋ ದಾಳಿ ಮಾಡಿದೆ! ತಮ್ಮನ್ನು ದೇವರಿಗೆ ಹೋಲಿಸಿಕೊಳ್ಳುವ ಧೈರ್ಯ ಅವರಿಗೆ ಎಲ್ಲಿಂದ ಬಂತು? ಓಯೋ ಸಂಸ್ಥೆ ತಕ್ಷಣ ಕ್ಷಮೆಯಾಚಿಸಬೇಕು. ಈ ಹಾಸ್ಯಾಸ್ಪದ ಜಾಹೀರಾತನ್ನು ತೆಗೆದುಹಾಕಬೇಕು. ಇಲ್ಲದಿದ್ದರೆ, ಪ್ರತಿ ನಗರದಲ್ಲಿಯೂ OYO ಪ್ರತಿಭಟನೆಗಳನ್ನು ಎದುರಿಸಬೇಕಾಗುತ್ತದೆ” ಎಂದು ಹಿಂದುತ್ವವಾದಿಗಳು ಬೆದರಿಕೆ ಹಾಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು, ಓಯೋ ಲೋಗೋ ಬಗ್ಗೆ ರಿತೇಶ್ ಅಗರ್ವಾಲ್ ನೀಡಿರುವ ಹೇಳಿಕೆಯು ಮತ್ತಷ್ಟು ಆಕ್ರೋಶಕ್ಕೆ ಕಾರಣವಾಗಿದೆ. ಇತ್ತೀಚಿನ ಸಂದರ್ಶನವೊಂದರಲ್ಲಿ ಓಯೋ ಲೋಗೋ ವಿನ್ಯಾಸದ ಬಗ್ಗೆ ಅವರು ವಿವರಿಸಿದ್ದರು. “OYO ಲೋಗೋವನ್ನು ಜಗನ್ನಾಥ ದೇವರ ಪ್ರತಿಮಾರೂಪದ ಆಧಾರದ ಮೇಲೆ ವಿನ್ಯಾಸಗೊಳಿಸಲಾಗಿದೆ. ಲೋಗೋದಲ್ಲಿರುವ ಎರಡು ‘O’ಗಳು ಜಗನ್ನಾಥನ ಕಣ್ಣುಗಳನ್ನು ಪ್ರತಿನಿಧಿಸುತ್ತವೆ ಮತ್ತು ‘Y’ ಮೂಗಿನ ಸಂಕೇತವಾಗಿದೆ” ಎಂದು ಹೇಳಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...