ಕೇರಳದ ಕೋಝಿಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 45 ವರ್ಷದ ವ್ಯಕ್ತಿಯೊಬ್ಬರು ಅಮೀಬಿಕ್ ಮೆನಿಂಗೊಎನ್ಸೆಫಾಲಿಟಿಸ್ ಎಂಬ ಅಪರೂಪದ, ಮಾರಕ ಮೆದುಳಿನ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಮೃತ ವ್ಯಕ್ತಿಯನ್ನು ಸುಲ್ತಾನ್ ಬಥೇರಿಯ ಮೂಲದ ರತೀಶ್ ಎಂದು ಗುರುತಿಸಲಾಗಿದೆ. ಅವರು ಹೃದಯ ಸಂಬಂಧಿ ಸಮಸ್ಯೆಗಳಿಂದಲೂ ಬಳಲುತ್ತಿದ್ದರು ಎಂದು ಹೇಳಲಾಗಿದೆ.
ಇದನ್ನು ಓದಿದ್ದೀರಾ? ಕೇರಳ ರಾಜ್ಯವನ್ನು ಕಾಡುತ್ತಿರುವ ಮೆದುಳು ತಿನ್ನುವ ಅಮೀಬಾ ಎಂದರೇನು? ಇಲ್ಲಿದೆ ವಿವರ
ರೋಗದ ಲಕ್ಷಣ ಹೊಂದಿರುವ 11 ಮಂದಿ ಸದ್ಯ ಕೋಝಿಕೋಡ್ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಕೇರಳದಲ್ಲಿ ಆಗಸ್ಟ್‌ನಲ್ಲಿ ಮೂವರು ಅಮೀಬಿಕ್ ಮೆದುಳು ಜ್ವರಕ್ಕೆ ಬಲಿಯಾಗಿದ್ದರು. ಮೃತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಕೇರಳ ಆರೋಗ್ಯ ಇಲಾಖೆ ಇತ್ತೀಚೆಗೆ ಮೆದುಳಿನ ಸೋಂಕಿನ ಚಿಕಿತ್ಸೆಗಾಗಿ ವಿಶೇಷ ಮಾರ್ಗಸೂಚಿಗಳನ್ನು ಹೊರಡಿಸಿದೆ.
ಆರೋಗ್ಯ ಅಧಿಕಾರಿಗಳ ಪ್ರಕಾರ, ಅಮೀಬಿಕ್ ಮೆನಿಂಗೊಎನ್ಸೆಫಾಲಿಟಿಸ್ ಪ್ರಾಥಮಿಕವಾಗಿ ಕಲುಷಿತ ನೀರಿನಲ್ಲಿ ಈಜುವ ಅಥವಾ ಸ್ನಾನ ಮಾಡುವ ಮೂಲಕ ತಗಲುತ್ತದೆ. ಈ ವರ್ಷ ಕೇರಳದಾದ್ಯಂತ ಒಟ್ಟು 42 ಪ್ರಕರಣಗಳು ವರದಿಯಾಗಿವೆ ಎಂದು ಅಧಿಕಾರಿಗಳು ಹೇಳಿದರು.





