ಪ್ರಶ್ನೆಗಾಗಿ ಲಂಚ ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಸಿಬಿಐ

Date:

ಭ್ರಷ್ಟಾಚಾರ ವಿರೋಧಿ ಓಂಬುಡ್ಸ್‌ಮನ್ ಲೋಕಪಾಲ್ ಅವರ ಉಲ್ಲೇಖದ ಮೇರೆಗೆ ತೃಣಮೂಲ ಕಾಂಗ್ರೆಸ್ ಲೋಕಸಭಾ ಸದಸ್ಯೆ ಮಹುವಾ ಮೊಯಿತ್ರಾ ವಿರುದ್ಧ ಸಿಬಿಐ ಪ್ರಾಥಮಿಕ ತನಿಖೆ ನಡೆಸಲು ಪ್ರಕರಣವನ್ನು ದಾಖಲಿಸಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಸಿಬಿಐ ಪ್ರಾಥಮಿಕ ತನಿಖೆಯನ್ನು ದಾಖಲಿಸಿಕೊಂಡಿರುವುದು, ಆರೋಪಗಳು ಪೂರ್ಣ ಪ್ರಮಾಣದ ತನಿಖೆಗೆ ಅರ್ಹವೇ ಎಂಬುದನ್ನು ಖಚಿತಪಡಿಸಿಕೊಳ್ಳುವ ಮೊದಲ ಹೆಜ್ಜೆಯಾಗಿದೆ. ಪ್ರಾಥಮಿಕ ತನಿಖೆ ಹಂತದಲ್ಲಿ ಸಾಕಷ್ಟು ಸಾಕ್ಷ್ಯ ಕಂಡುಬಂದರೆ, ಸಿಬಿಐ ಅದನ್ನು ಎಫ್‌ಐಆರ್ ಆಗಿ ಪರಿವರ್ತಿಸಬಹುದು.

ಸಂಸತ್ತಿನಲ್ಲಿ ಪ್ರಶ್ನೆಗಳನ್ನು ಎತ್ತಲು ಲಂಚ ಪಡೆದ ಆರೋಪದ ಮೇಲೆ ಮೊಯಿತ್ರಾ ವಿರುದ್ಧ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಲೋಕಪಾಲರಿಗೆ ದೂರು ನೀಡಿದ್ದರು. ಉದ್ಯಮಿ ದರ್ಶನ್ ಹಿರಾನಂದಾನಿ ಅವರ ಇಚ್ಛೆಯ ಮೇರೆಗೆ ಅದಾನಿ ಗ್ರೂಪ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಲು ಮೊಯಿತ್ರಾ ಲೋಕಸಭೆಯಲ್ಲಿ ಪ್ರಶ್ನೆಗಳನ್ನು ಕೇಳಿದ್ದಾರೆ ಎಂದು ದುಬೆ ಆರೋಪಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ, ಮಹುವಾ ಮೊಯಿತ್ರಾ ತಾವು ಯಾವುದೇ ತಪ್ಪು ಮಾಡಿಲ್ಲ ಎಂದು ದುಬೆ ಆರೋಪವನ್ನು ನಿರಾಕರಿಸಿದ್ದಾರೆ ಮತ್ತು ಅದಾನಿ ಸಮೂಹದ ವ್ಯವಹಾರಗಳ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದರಿಂದ ತನ್ನನ್ನು ಗುರಿಯಾಗಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ದುಬೆ ಅವರು ವಿತ್ತೀಯ ಲಾಭಕ್ಕಾಗಿ ರಾಷ್ಟ್ರೀಯ ಭದ್ರತೆಯೊಂದಿಗೆ ರಾಜಿ ಮಾಡಿಕೊಂಡಿದ್ದಾರೆ ಎಂದು ಮೊಯಿತ್ರಾ ಆರೋಪಿಸಿದ್ದರು. ಲೋಕಸಭೆಯ ನೈತಿಕ ಸಮಿತಿಯೂ ಮೊಯಿತ್ರಾ ವಿರುದ್ಧದ ಆರೋಪಗಳನ್ನು ಪರಿಶೀಲಿಸುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...