ಬ್ರಿಜ್ ಭೂಷಣ್‌ಗೆ ತಪ್ಪಿದ ಲೋಕಸಭಾ ಟಿಕೆಟ್: ಪುತ್ರನಿಗೆ ಮಣೆ ಹಾಕಿದ ಬಿಜೆಪಿ

Date:

ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಗಂಭೀರ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಒಕ್ಕೂಟದ ಮಾಜಿ ಅಧ್ಯಕ್ಷ ಬ್ರಿಜ್‌ ಭೂಷಣ್‌ ಸಿಂಗ್‌ ಗೆ ಉತ್ತರ ಪ್ರದೇಶದ ಕೈಸರ್‌ಜಂಗ್‌  ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನಿರಾಕರಿಸಿದೆ.

ಈತನ ಪುತ್ರ ಕರಣ್‌ ಭೂಷಣ್‌ ಸಿಂಗ್‌ಗೆ ಟಿಕೆಟ್ ನೀಡಲಾಗಿದೆ. 2019ರವರೆಗೆ ಕಳೆದ ಮೂರು ಬಾರಿ ಕೈಸರ್‌ಜಂಗ್‌ ಕ್ಷೇತ್ರದಿಂದ ಬ್ರಿಜ್‌ ಭೂಷಣ್‌ ಸಿಂಗ್‌ಗೆ ಟಿಕೆಟ್ ನೀಡಲಾಗಿತ್ತು. ಮೂರು ಬಾರಿಯೂ ಬ್ರಿಜ್‌ ಭೂಷಣ್ ಆಯ್ಕೆಯಾಗಿದ್ದ.

ಕರಣ್‌ ಭೂಷಣ್‌ ಸಿಂಗ್‌ ಪ್ರಸ್ತುತ ಉತ್ತರ ಪ್ರದೇಶದ ಕುಸ್ತಿ ಒಕ್ಕೂಟದ ಅಧ್ಯಕ್ಷನಾಗಿದ್ದು, ಉತ್ತರ ಪ್ರದೇಶದ ಗೋಂಡಾದ ಸಹಕಾರಿ ಗ್ರಾಮೀಣಾಭಿವೃದ್ಧಿ ಬ್ಯಾಂಕ್‌ನ ಅಧ್ಯಕ್ಷನಾಗಿ ಕೂಡ ಕಾರ್ಯನಿರ್ವಹಿಸುತ್ತಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಾಲಿ ಬಿಜೆಪಿ ಸಂಸದ ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಹಲವು ಆರೋಪವೆಸಗಿರುವ ಕಾರಣ ಟಿಕೆಟ್ ನಿರಾಕರಿಸಲಾಗಿದೆ. ಈತ ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷನಾಗಿದ್ದ ಸಂದರ್ಭದಲ್ಲಿ 6 ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಆರೋಪ ಈತನ ಮೇಲಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ನೋಟಾವನ್ನು ಅಭ್ಯರ್ಥಿಯನ್ನಾಗಿ ಪರಿಗಣಿಸಲು ಇದು ಸಕಾಲ

ಬ್ರಿಜ್‌ ಭೂಷಣ್‌ನನ್ನು ಭಾರತೀಯ ಕುಸ್ತಿ ಒಕ್ಕೂಟದಿಂದ ವಜಾಗೊಳಿಸಿ ಕಾನೂನು ಕ್ರಮ ಕೂಗೊಳ್ಳಬೇಕೆಂದು ಭಾರತದ ಅಗ್ರಮಾನ್ಯ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ಭಜರಂಗ್‌ ಪುನಿಯಾ ಸೇರಿದಂತೆ ಹಲವು ಕ್ರೀಡಾಪಟುಗಳು ದೆಹಲಿಯ ಜಂತರ್‌ ಮಂತರ್‌ನಲ್ಲಿ ಹಲವು ವಾರಗಳ ಕಾಲ ಪ್ರತಿಭಟನೆ ನಡೆಸಿದ್ದರು.

ಕ್ರೀಡಾಪಟುಗಳ ಹೋರಾಟಕ್ಕೆ ಕೇಂದ್ರ ಸರ್ಕಾರ ಮಣಿದಿರಲಿಲ್ಲ. ಆತನ ಪರವಾಗಿಯೆ ಬಿಜೆಪಿ ನಾಯಕರು ವಕಾಲತ್ತು ವಹಿಸುತ್ತಿದ್ದರು. ದೇಶಾದ್ಯಂತ ಆಕ್ರೋಶ ತೀವ್ರಗೊಂಡ ನಂತರ ಅಂತಿಮವಾಗಿ ದೆಹಲಿ ಪೊಲೀಸರು ಬ್ರಿಜ್‌ ವಿರುದ್ಧ ಪ್ರಕರಣ ದಾಖಲಿಸಿದ್ದರು. ಕೇಂದ್ರ ಸರ್ಕಾರ ಕುಸ್ತಿ ಒಕ್ಕೂಟವನ್ನು ಅಮಾನತುಗೊಳಿಸಿತ್ತು. ವಿಶ್ವ ಕುಸ್ತಿ ಫೆಡರೇಷನ್‌ ಕೂಡ ಭಾರತದ ಕುಸ್ತಿ ಒಕ್ಕೂಟದ ಮಾನ್ಯತೆಯನ್ನು ಹಿಂಪಡೆದಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...