ಟಿವಿ ನೇರ ಪ್ರಸಾರದಲ್ಲಿ ಬಿಜೆಪಿ ಮುಖಂಡನ ಮೇಲೆ ಹಲ್ಲೆ ಮಾಡಿದ ಬಿಆರ್‌ಎಸ್ ಶಾಸಕ!

Date:

ತೆಲಂಗಾಣದ ವಿಧಾನಸಭಾ ಚುನಾವಣಾ ರಣಾಂಗಣ ದಿನದಿನವೂ ರಂಗೇರುತ್ತಿದೆ. ರಾಜಕೀಯ ಪಕ್ಷಗಳು ಮತದಾರರನ್ನು ಓಲೈಸಲು ವಿರೋಧಿಗಳ ವಿರುದ್ಧ ದಾಳಿಯನ್ನು ಹೆಚ್ಚಿಸುತ್ತಿವೆ. ಈ ನಡುವೆ ಆಡಳಿತಾರೂಢ ಬಿಆರ್‌ಎಸ್ ಶಾಸಕರೊಬ್ಬರು ಬಿಜೆಪಿ ಅಭ್ಯರ್ಥಿಯೊಬ್ಬನ ಮೇಲೆ ಟಿವಿ ನೇರ ಪ್ರಸಾರ ಕಾರ್ಯಕ್ರಮವೊಂದರಲ್ಲಿ ಹಲ್ಲೆ ನಡೆಸಿದ ಘಟನೆ ಹೈದರಾಬಾದ್‌ ನಗರದಲ್ಲಿ ನಡೆದಿದೆ.

ಬುಧವಾರ(ಅ.25) ತೆಲುಗು ಸುದ್ದಿ ವಾಹಿನಿಯೊಂದು ಆಯೋಜಿಸಿದ್ದ ಬಹಿರಂಗ ಚರ್ಚೆಯ ಕಾರ್ಯಕ್ರಮದಲ್ಲಿ ಹೈದರಾಬಾದ್ ನ ಕುತುಬಲ್ಲಾಪುರ ಕ್ಷೇತ್ರದ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಶಾಸಕ ಕೆ ಪಿ ವಿವೇಕಾನಂದ ಅವರು ಪ್ರಸ್ತುತ ಚುನಾವಣೆಯಲ್ಲಿ ಇದೇ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಬಿಜೆಪಿ ಅಭ್ಯರ್ಥಿ ಶ್ರೀಶೈಲಂ ಗೌಡ್‌ ಅವರ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದಾರೆ.

ಪರಿಸ್ಥಿತಿ ವಿಕೋಪಕ್ಕೆ ಹೋಗುವ ಸಂದರ್ಭದಲ್ಲಿ ಪೊಲೀಸರು ಮತ್ತು ವಾಹಿನಿಯ ಸಿಬ್ಬಂದಿ ಮಧ್ಯಪ್ರವೇಶಿಸಿ ಜಗಳವನ್ನು ಬಿಡಿಸಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತೆಲಂಗಾಣ ವಿಧಾನಸಭಾ ಚುನಾವಣೆಯ ವಿಷಯಗಳ ಕುರಿತು ಚರ್ಚಿಸಲು ಕಾರ್ಯಕ್ರಮವನ್ನು ಹೈದರಾಬಾದ್‌ ನಗರದಲ್ಲಿ ಆಯೋಜಿಸಲಾಗಿತ್ತು. ತೆಲಂಗಾಣ ರಾಜ್ಯದಲ್ಲಿ ನವೆಂಬರ್ 30 ರಂದು ಮತದಾನ ನಡೆಯಲಿದೆ.

ಈ ಸುದ್ದಿ ಓದಿದ್ದೀರಾ? ಕೋರ್ಟ್‌ನಲ್ಲಿ ನ್ಯಾಯಾಧೀಶೆಯನ್ನು ನಿಂದಿಸಿದ ನ್ಯಾಯಾಧೀಶ; 2 ದಿನಗಳ ಬಳಿಕ ಕ್ಷಮೆಯಾಚಿಸಿದ ಜಡ್ಜ್‌

ಘಟನೆಯ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಮತ್ತು ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ ಆಡಳಿತಾರೂಢ ಬಿಆರ್‌ಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ವಿರೋಧ ಪಕ್ಷದ ಅಭ್ಯರ್ಥಿಯ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸಿರುವುದು ಮತ್ತು ಜಗಳವಾಡಿದ ಘಟನೆ ಆಘಾತಕಾರಿಯಾಗಿದೆ. ಬಿಆರ್‌ಎಸ್ ಮತ್ತೆ ಅಧಿಕಾರಕ್ಕೆ ಬಂದರೆ ಏನಾಗುತ್ತದೆ ಎಂದು ಊಹಿಸಿ. ಈ ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸದಿದ್ದರೆ, ಕಾನೂನಾತ್ಮಕ ಹೋರಾಟ ಆರಂಭಿಸುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ.

ಘಟನೆಯ ಬಗ್ಗೆ ಸಮರ್ಥಿಸಿಕೊಂಡಿರುವ ಬಿಆರ್‌ಎಸ್ ವಕ್ತಾರ ಶ್ರವಣ್ ದಸೋಜು, “ಚರ್ಚೆಯಲ್ಲಿ ಇಬ್ಬರೂ ಸಭ್ಯತೆಯನ್ನು ಪಾಲಿಸಬೇಕಾದದ್ದು ಅಗತ್ಯವಾದರೂ, ಬಿಜೆಪಿ ಮುಖಂಡ ಶಾಸಕರ ತಂದೆಯ ಹೆಸರನ್ನು ಎತ್ತಿಕೊಂಡರು. ಗೌಡ್ ಅವರು ವಿವೇಕಾನಂದ ಅವರ ಮೇಲೆ ವಾಗ್ದಾಳಿ ನಡೆಸುವ ವೇಳೆ ಅವರ ತಂದೆ-ತಾಯಿಯ ಹೆಸರು ಬಳಕೆ ಮಾಡಬಾರದಿತ್ತು. ಶಾಸಕರು ಕೂಡ ಎದುರಾಳಿಯ ಮೇಲೆ ದಾಳಿ ಮಾಡಬಾರದಿತ್ತು. ಇಬ್ಬರೂ ಸಂಯಮ ಹೊಂದಿರಬೇಕಿತ್ತು” ಎಂದು ಸ್ಪಷ್ಟಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...