ತಮಿಳುನಾಡು ಬಿಎಸ್‌ಪಿ ಮುಖ್ಯಸ್ಥನ ಬರ್ಬರ ಹತ್ಯೆ: 8 ಜನರ ಬಂಧನ

Date:

ತಮಿಳುನಾಡು ಬಿಎಸ್‌ಪಿ ಮುಖ್ಯಸ್ಥನ ಹತ್ಯೆ ಮಾಡಿರುವ ಘಟನೆ ಶುಕ್ರವಾರ ನಡೆದಿದೆ. ಬಹುಜನ ಸಮಾಜ ಪಕ್ಷ ತಮಿಳುನಾಡು ರಾಜ್ಯಾಧ್ಯಕ್ಷರನ್ನು ಶುಕ್ರವಾರ ಚೆನ್ನೈನ ಅವರ ಮನೆಯ ಸಮೀಪವೇ ಬೈಕ್‌ನಲ್ಲಿ ಬಂದ ಆರು ಮಂದಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿದ್ದಾರೆ.

ಆರ್ಮ್‌ಸ್ಟ್ರಾಂಗ್ ಅವರು ನಗರದ ಸೇಂಬಿಯಂ ಪ್ರದೇಶದಲ್ಲಿರುವ ತನ್ನ ಮನೆಯ ಬಳಿ ಬಿಎಸ್‌ಪಿಯ ಕೆಲವು ಕಾರ್ಯಕರ್ತರೊಂದಿಗೆ ಚರ್ಚೆ ನಡೆಸುತ್ತಿದ್ದಾಗ ಆರು ಜನರು ಅವರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಕುಟುಂಬಸ್ಥರು ಆರ್ಮ್‌ಸ್ಟ್ರಾಂಗ್ ಅವರನ್ನು ಕರೆದೊಯ್ದಿದ್ದು, ಆದರೆ ಅವರು ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಇದನ್ನು ಓದಿದ್ದೀರಾ?  ರಾಮನಗರ | ನಾಮಪತ್ರ ವಾಪಸ್‌ ಪಡೆದ ಬಿಎಸ್‌ಪಿ ಅಭ್ಯರ್ಥಿ; ಪಕ್ಷದಿಂದ ಉಚ್ಛಾಟನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ವರ್ಷ ಗ್ಯಾಂಗ್‌ಸ್ಟಾರ್ ಆರ್ಕಾಟ್ ಸುರೇಶ್ ಹತ್ಯೆಗೆ ಇದು ಪ್ರತೀಕಾರದ ಕೊಲೆಯಾಗಿರಬಹುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಎನ್‌ಡಿಟಿವಿಗೆ ಪ್ರತಿಕ್ರಿಯೆ ನೀಡಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು “ನಾವು ತನಿಖೆ ನಡೆಸುತ್ತಿದ್ದೇವೆ. ಈ ಕೊಲೆಯು ಈ ಹಿಂದಿನ ಕೊಲೆಗೆ ಸಂಬಂಧ ಹೊಂದಿರುವಂತೆ ತೋರುತ್ತಿದೆ” ಎಂದು ಹೇಳಿದ್ದಾರೆ.

“ಕೊಲೆ ಪ್ರಕರಣದಲ್ಲಿ ನಾವು ಇದುವರೆಗೆ 8 ಶಂಕಿತರನ್ನು ಬಂಧಿಸಿದ್ದೇವೆ. ಇದು ಪ್ರಾಥಮಿಕ ತನಿಖೆಯಾಗಿದೆ. ಹತ್ತು ತಂಡಗಳನ್ನು ರಚಿಸಲಾಗಿದೆ. ನಾವು ಅಪರಾಧಿಗಳನ್ನು ಪತ್ತೆ ಹಚ್ಚಲಿದ್ದೇವೆ. ಈ ಶಂಕಿತರ ವಿಚಾರಣೆಯ ನಂತರ, ನಾವು ಕೊಲೆಯ ಹಿಂದಿನ ಉದ್ದೇಶವನ್ನು ಪತ್ತೆಹಚ್ಚಲಿದ್ದೇವೆ” ಎಂದು ಚೆನ್ನೈನ ಹಿರಿಯ ಪೊಲೀಸ್ ಅಧಿಕಾರಿ ಆಸ್ರಾ ಗಾರ್ಗ್ ಹೇಳಿದ್ದಾರೆ.

ವಕೀಲರಾಗಿದ್ದ ಆರ್ಮ್‌ಸ್ಟ್ರಾಂಗ್ ಅವರು 2006ರಲ್ಲಿ ಚೆನ್ನೈ ಕಾರ್ಪೊರೇಷನ್ ಕೌನ್ಸಿಲ್‌ಗೆ ಆಯ್ಕೆಯಾದರು. ಎರಡು ವರ್ಷಗಳ ಹಿಂದೆ ಚೆನ್ನೈನಲ್ಲಿ ಮೆಗಾ ರ್‍ಯಾಲಿಯನ್ನು ಆಯೋಜಿಸಿ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿಯನ್ನು ಆಹ್ವಾನಿಸಿದ ನಂತರ ಹೆಚ್ಚು ಮುನ್ನಲೆಗೆ ಬಂದರು.

 

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...