ಬಜೆಟ್ 2024| ಕೆಲವು ವರ್ಗಗಳಿಗೆ ಆದಾಯ ತೆರಿಗೆ ಕಡಿತಗೊಳಿಸಲು ಕೇಂದ್ರ ಚಿಂತನೆ: ವರದಿ

Date:

ಕೇಂದ್ರ ಸರ್ಕಾರವು ಮುಂದಿನ ಬಜೆಟ್‌ನಲ್ಲಿ ಕೆಲವು ವರ್ಗದ ಜನರಿಗೆ ಆದಾಯ ತೆರಿಗೆ ದರಗಳನ್ನು ಕಡಿಮೆ ಮಾಡಲು ಚಿಂತನೆ ನಡೆಸುತ್ತಿದೆ. ದೇಶದಲ್ಲಿ ಬಳಕೆ ಪ್ರಮಾಣ (consumption) ಹೆಚ್ಚಳ ಮಾಡುವ ನಿಟ್ಟಿನಲ್ಲಿ ಸರ್ಕಾರವು ಈ ಕ್ರಮಕ್ಕೆ ಮುಂದಾಗಿದೆ ಎಂದು ಎರಡು ಸರ್ಕಾರಿ ಮೂಲಗಳನ್ನು ಉಲ್ಲೇಖಿಸಿ ರಾಯಿಟರ್ಸ್‌ ವರದಿ ಮಾಡಿದೆ.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯು ಬಹುಮತವನ್ನು ಪಡೆಯುವಲ್ಲಿ ವಿಫಲವಾಗಿದೆ. ಪ್ರಸ್ತುತ ಮಿತ್ರ ಪಕ್ಷಗಳ ಸಹಾಯದಿಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರವನ್ನು ರಚಿಸಲಾಗಿದೆ. ನೂತನ ಸರ್ಕಾರವು ಜುಲೈನಲ್ಲಿ ಬಜೆಟ್ ಘೋಷಣೆ ಮಾಡುವ ನಿರೀಕ್ಷೆಯಿದೆ.

ಚುನಾವಣೋತ್ತರ ಸಮೀಕ್ಷೆಯಲ್ಲಿ ಮತದಾರರು ಹಣದುಬ್ಬರ, ನಿರುದ್ಯೋಗ ಮತ್ತು ಆದಾಯ ಕಡಿಮೆಯಾಗುತ್ತಿರುವ ಬಗ್ಗೆ ಚಿಂತಿತರಾಗಿದ್ದಾರೆ ಎಂದು ತಿಳಿದುಬಂದಿದೆ. 2023-24ರಲ್ಲಿ ಭಾರತದ ಆರ್ಥಿಕತೆಯು ಶೇಕಡ 8.2ರಷ್ಟು ಬೆಳವಣಿಗೆಯನ್ನು ಕಂಡಿದ್ದರೂ ಕೂಡಾ ಬಳಕೆ ಪ್ರಮಾಣವು ಹೆಚ್ಚು ಬೆಳವಣಿಗೆ ಕಂಡಿಲ್ಲ. ಚುನಾವಣೆಯಲ್ಲಿ ತಮ್ಮ ಸಂಖ್ಯಾಬಲ ಕಳೆದುಕೊಂಡಿರುವ ಬಿಜೆಪಿ ಮಧ್ಯಮ ವರ್ಗದೆಡೆ ಗಮನ ಹರಿಸಲು ಮುಂದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಲೆಕ್ಕಪತ್ರವಿಲ್ಲದ 524 ಕೋಟಿ ರೂ. ವಹಿವಾಟು ಆರೋಪ; ಕಾಂಗ್ರೆಸ್‌ಗೆ ಮತ್ತೆ ಆದಾಯ ತೆರಿಗೆ ನೋಟಿಸ್!

ಮಿತ್ರ ಪಕ್ಷಗಳ ಬೆಂಬಲ ಪಡೆದು ಎನ್‌ಡಿಎ ಸರ್ಕಾರವನ್ನು ರಚಿಸುವ ಸಂದರ್ಭದಲ್ಲಿ ಪ್ರಧಾನಿ ಮೋದಿ ಮಧ್ಯಮ ವರ್ಗದ ಉಳಿತಾಯವನ್ನು ಹೆಚ್ಚಿಸಲು ಮತ್ತು ಅವರ ಜೀವನ ಗುಣಮಟ್ಟ ಸುಧಾರಿಸಲು ನಮ್ಮ ಆಡಳಿತ ಗಮನಹರಿಸಲಿದೆ ಎಂದು ಹೇಳಿದ್ದರು.

ಇನ್ನು ಮುಂದಿನ ಬಜೆಟ್‌ನಲ್ಲಿ ಕೇಂದ್ರ ಸರ್ಕಾರವು ವೈಯಕ್ತಿಕ ತೆರಿಗೆಯಲ್ಲಿನ ಕಡಿತ ಮಾಡಬಹುದು. ಇದರಿಂದಾಗಿ ಬಳಕೆ ಪ್ರಮಾಣ ಹೆಚ್ಚಿಸುವ ಮತ್ತು ಮಧ್ಯಮ ವರ್ಗದ ಉಳಿತಾಯ ಹೆಚ್ಚಿಸುವ ಗುರಿಯನ್ನು ಹೊಂದಿದೆ ಎಂದು ವರದಿಯಾಗಿದೆ. ಆದರೆ ಮನಿಕಟ್ರೋಲ್‌ ಈ ಬಗ್ಗೆ ಹಣಕಾಸು ಸಚಿವಾಲಯಕ್ಕೆ ಇಮೇಲ್ ಮಾಡಿದ್ದು ಯಾವುದೇ ಪ್ರತಿಕ್ರಿಯೆ ಲಭ್ಯವಾಗಿಲ್ಲ.

ವಾರ್ಷಿಕವಾಗಿ 15 ಲಕ್ಷ ರೂಪಾಯಿ ($17,960.42) ಗಳಿಸುವ ಆದಾಯ ತೆರಿಗೆ ಪಾವತಿದಾರರಿಗೆ ಕೆಲವು ತೆರಿಗೆ ವಿನಾಯಿತಿಗಳನ್ನು ನೀಡುವ ಸಾಧ್ಯತೆಯಿದೆ. 2020ರಲ್ಲಿ ಪರಿಚಯಿಸಲಾದ ತೆರಿಗೆ ಯೋಜನೆಯಲ್ಲಿ ಬದಲಾವಣೆ ಮಾಡುವ ನಿರೀಕ್ಷೆಯಿದೆ ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ?  ಆದಾಯ ತೆರಿಗೆ ಮರು ಮೌಲ್ಯಮಾಪನ ಪ್ರಕ್ರಿಯೆ ಪ್ರಶ್ನಿಸಿ ಕಾಂಗ್ರೆಸ್ ಸಲ್ಲಿಸಿದ ಅರ್ಜಿ ವಜಾ

ಸದ್ಯ 15 ಲಕ್ಷ ವಾರ್ಷಿಕ ಆದಾಯ ಹೊಂದಿರುವವರಿಗೆ ಶೇಕಡ 5-20ರಷ್ಟು ತೆರಿಗೆಯನ್ನು ವಿಧಿಸಲಾಗುತ್ತದೆ. ಆದರೆ 15 ಲಕ್ಷ ರೂಪಾಯಿಗಿಂತ ಅಧಿಕ ಆದಾಯದ ಮೇಲೆ ಶೇಕಡ 30ರಷ್ಟು ತೆರಿಗೆ ವಿಧಿಸಲಾಗುತ್ತದೆ. ಆದರೆ ವೈಯಕ್ತಿಕ ಆದಾಯವು 3 ಲಕ್ಷ ರೂಪಾಯಿಯಿಂದ 15 ಲಕ್ಷ ರೂಪಾಯಿಗೆ ಐದು ಪಟ್ಟು ಹೆಚ್ಚಾದಾಗ ತೆರಿಗೆ ದರವು ಆರು ಪಟ್ಟು ಹೆಚ್ಚಾಗುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...