ಕೇಂದ್ರ ಬಜೆಟ್ ಅಧಿವೇಶನ | ವಕ್ಫ್‌ ಸೇರಿ ಒಟ್ಟು 16 ಮಸೂದೆ ಮಂಡನೆ ಸಾಧ್ಯತೆ

Date:

ವಕ್ಫ್ ತಿದ್ದುಪಡಿ ಮಸೂದೆ, ಹಣಕಾಸು ಮಸೂದೆ, ಭಾರತೀಯ ರೈಲ್ವೆ ಮತ್ತು ಭಾರತೀಯ ರೈಲ್ವೆ ಬೋರ್ಡ್ ಆಕ್ಟ್ ವಿಲೀನಗೊಳಿಸುವ ಮಸೂದೆ ಸೇರಿದಂತೆ ಒಟ್ಟು 16 ಮಸೂದೆಗಳನ್ನು 2025-26ನೇ ಸಾಲಿನ ಕೇಂದ್ರ ಬಜೆಟ್ ಅಧಿವೇಶನದಲ್ಲಿ ಮಂಡಿಸುವ ಸಾಧ್ಯತೆಯಿದೆ. ಬಜೆಟ್ ಅಧಿವೇಶನವು ಶುಕ್ರವಾರ (ಜನವರಿ 31) ಆರ್ಥಿಕ ಸಮೀಕ್ಷೆ ಮಂಡನೆ ಮಾಡುವ ಮೂಲಕ ಆರಂಭವಾಗಲಿದೆ. ಫೆಬ್ರವರಿ ಒಂದರಂದು ವಿತ್ತ ಸಚಿವೆ ಬಜೆಟ್ ಮಂಡಿಸಲಿದ್ದಾರೆ.

ವಿಪತ್ತು ನಿರ್ವಹಣಾ ಕಾನೂನಿನಲ್ಲೂ ತಿದ್ದುಪಡಿ ತರುವ ನಿರೀಕ್ಷೆಯಿದೆ. ವಾಯುಯಾನ ವಲಯಕ್ಕೆ ಸಂಬಂಧಿಸಿದಂತೆ ಆರ್ಥಿಕ ಹಿತಾಸಕ್ತಿಗಳನ್ನು ಕಾಪಾಡುವ, ವಲಸೆ ಮತ್ತು ವಿದೇಶಿಯರ ಪ್ರವೇಶಕ್ಕೆ ಸಂಬಂಧಿಸಿದ ನಿಯಮಗಳನ್ನು ಬದಲಾಯಿಸುವ ಮಸೂದೆಯನ್ನು ಈ ಅಧಿವೇಶನದಲ್ಲಿ ಮಂಡಿಸುವ ನಿರೀಕ್ಷೆಯಿದೆ.

ಗೋವಾ ವಿಧಾನಸಭೆ ಕ್ಷೇತ್ರಗಳಲ್ಲಿ ಪರಿಶಿಷ್ಠ ಪಂಗಡಗಳ ಪ್ರಾತಿನಿಧ್ಯಕ್ಕೆ ಮರು ಹೊಂದಾಣಿಕೆ ಮಾಡುವ ಮತ್ತೊಂದು ಮಸೂದೆ ಮಂಡಿಸುವ ಸಾಧ್ಯತೆಯಿದೆ. ಹೆಸರೇ ಸೂಚಿಸುವಂತೆ ಪರಿಶಿಷ್ಠ ಪಂಗಡಕ್ಕೆ ವಿಧಾನಸಭೆ ಸ್ಥಾನಗಳನ್ನು ಮರುಹಂಚಿಕೆ ಮಾಡುವ ಮಸೂದೆ ಇದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಕೇಂದ್ರ ಬಜೆಟ್ ಅಧಿವೇಶನ | ಸಂಸತ್ತನ್ನೇ ಚುನಾವಣಾ ಭಾಷಣದ ವೇದಿಕೆ ಮಾಡಿಕೊಂಡ ಪ್ರಧಾನಿ ಮೋದಿ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸತತ ಎಂಟನೇ ಬಾರಿಗೆ ಮಂಡಿಸುತ್ತಿರುವ ಬಜೆಟ್ ಇದಾಗಿದೆ. ಮೊರಾರ್ಜಿ ದೇಸಾಯಿಯವರು ಒಟ್ಟು ಹತ್ತು ಬಾರಿ ಬಜೆಟ್ ಮಂಡಿಸಿದ್ದು, ಅದಕ್ಕಿಂತ ಎರಡು ಹೆಜ್ಜೆ ಹಿಂದೆ ನಿರ್ಮಲಾ ಇದ್ದಾರೆ.

ವಕ್ಫ್‌ನಲ್ಲಿ ಸುಮಾರು 44 ಬದಲಾವಣೆಗಳನ್ನು ಪ್ರಸ್ತಾಯಿಸುವ ವಿವಾದಾತ್ಮಕ ವಕ್ಫ್ ಮಸೂದೆಯನ್ನು ಕೇಂದ್ರ ವಿತ್ತ ಸಚಿವೆ ಮಂಡಿಸಲಿದ್ದಾರೆ. ಈ ವಿವಾದಾತ್ಮಕ ಮಸೂದೆ ವಿರುದ್ಧ ಈಗಾಗಲೇ ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದೆ. ಆದರೂ ಬಿಜೆಪಿ ಸಂಸದೆ ಜಗದಾಂಬಿಕಾ ಪಾಲ್ ನೇತೃತ್ವದ ಜಂಟಿ ಸಮಿತಿ ಶಿಫಾರಸಿನಂತೆ ಕಾನೂನಿನಲ್ಲಿ ತಿದ್ದುಪಡಿ ಮಾಡಲು ಕೇಂದ್ರ ಮುಂದಾಗಿದೆ.

ಇನ್ನು ಹೊಸ ನೇರ ತೆರಿಗೆ ಸಂಹಿತೆ ಸೇರಿದಂತೆ ಪ್ರಸ್ತುತ ಜಾರಿಯಲ್ಲಿರುವ ಆದಾಯ ತೆರಿಗೆ ನಿಯಮ 1961ರಲ್ಲಿ ಬದಲಾವಣೆ ತರುವಂತಹ ಹಣಕಾಸು ಮಸೂದೆಯನ್ನೂ ಕೂಡಾ ಕೇಂದ್ರ ವಿತ್ತ ಸಚಿವೆ ಈ ಬಜೆಟ್‌ನಲ್ಲಿ ಮಂಡಿಸುವ ಸಾಧ್ಯತೆಯಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...