ನಾಳೆಯಿಂದ ಬಜೆಟ್ ಅಧಿವೇಶನ ಪುನರಾರಂಭ: ಸ್ಪೀಕರ್ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ

Date:

ಸಂಸತ್ತಿನ ಬಜೆಟ್ ಅಧಿವೇಶನದ ದ್ವಿತೀಯಾರ್ಧ ಸೋಮವಾರ (ಮಾರ್ಚ್ 9) ಆರಂಭವಾಗಲಿದ್ದು, ಸ್ಪೀಕರ್ ಓಂ ಬಿರ್ಲಾ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷಗಳು ನಾಳೆ ಅವಿಶ್ವಾಸ ನಿರ್ಣಯವನ್ನು ಲೋಕಸಭೆಯಲ್ಲಿ ಮಂಡಿಸಲಿದೆ.

ಇರಾನ್ ಬಗ್ಗೆ ಸರ್ಕಾರದ ನಿಲುವು, ಭಾರತದ ರಷ್ಯಾದ ತೈಲ ಖರೀದಿಯ ಬಗ್ಗೆ ಅಮೆರಿಕದ ಮಧ್ಯಪ್ರವೇಶ ಸೇರಿದಂತೆ ಇತರ ವಿಷಯಗಳ ಬಗ್ಗೆ ವಿರೋಧ ಪಕ್ಷಗಳು ಈಗಾಗಲೇ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸುತ್ತಿದೆ. ಈ ವಿಚಾರಗಳೆಲ್ಲವನ್ನು ವಿಪಕ್ಷಗಳು ಚರ್ಚೆಗೆ ಎಳೆಯುವ ಸಾಧ್ಯತೆಯಿದೆ.

ಇದನ್ನು ಓದಿದ್ದೀರಾ? ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಬಳಿಕ 60 ಲಕ್ಷ ಮತದಾರರ ಹೆಸರನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ. ಈ ವಿಚಾರದಲ್ಲೂ ವಿಪಕ್ಷಗಳು ಗದ್ದಲ ಸೃಷ್ಟಿಸುವ ಸಾಧ್ಯತೆಯಿದೆ.

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಇತರ ಸದಸ್ಯರಿಗೆ ಮಾತನಾಡಲು ಅವಕಾಶ ನೀಡದಿರುವುದು ಮತ್ತು ಎಂಟು ವಿರೋಧ ಪಕ್ಷದ ಸಂಸದರನ್ನು ಅಮಾನತುಗೊಳಿಸಿರುವುದನ್ನು ಪ್ರತಿಪಕ್ಷಗಳು ಪ್ರಶ್ನಿಸಿವೆ. ಅಲ್ಲದೆ, ಸ್ಪೀಕರ್ ಅವರು ಏಕಪಕ್ಷೀಯವಾಗಿ ವರ್ತಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಆರಂಭದಲ್ಲಿ ಸಹಿ ಹಾಕದಿದ್ದ ಬಿರ್ಲಾ ವಿರುದ್ಧದ ನಿರ್ಣಯವನ್ನು ಬೆಂಬಲಿಸುವುದಾಗಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕೂಡ ಹೇಳಿದೆ. ಇನ್ನು ಕಾಂಗ್ರೆಸ್ ತನ್ನ ಸಂಸದರಿಗೆ ಮಾರ್ಚ್ 9 ರಿಂದ 11 ರವರೆಗೆ ಕಡ್ಡಾಯವಾಗಿ ಹಾಜರಿರುವಂತೆ ವಿಪ್ ಜಾರಿ ಮಾಡಿದೆ.

ಇನ್ನು ಈ ವಿಷಯದ ಬಗ್ಗೆ ಚರ್ಚೆ ನಡೆಯುವವರೆಗೂ ನೈತಿಕ ಕಾರಣಗಳಿಗಾಗಿ ತಾವು ಕಲಾಪದ ಅಧ್ಯಕ್ಷತೆ ವಹಿಸುವುದಿಲ್ಲ ಎಂದು ಓಂ ಬಿರ್ಲಾ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಮಧ್ಯಪ್ರಾಚ್ಯ ಸಂಘರ್ಷ | ಕದನ ವಿರಾಮ ಎಂದ ಟ್ರಂಪ್; ಮಾತುಕತೆ ನಡೆದಿಲ್ಲವೆಂದ ಇರಾನ್

ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷವನ್ನು ಕೊನೆಗಾಣಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ನಾನಾ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...