ಬುಲ್ಡೋಜರ್ ನ್ಯಾಯಕ್ಕೆ ನಿರಪರಾಧಿ ಮನೆ ಧ್ವಂಸ; ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯನ್ನು ಖುಲಾಸೆಗೊಳಿಸಿದ ಕೋರ್ಟ್‌

Date:

4 ವರ್ಷಗಳ ಹಿಂದೆ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯ ಮನೆಯನ್ನು ಮಧ್ಯಪ್ರದೇಶದ ಬಿಜೆಪಿ ಸರ್ಕಾರ ಉರುಳಿಸಿತ್ತು. ಇದೀಗ, ಅದೊಂದು ಸುಳ್ಳು ಪ್ರಕರಣವೆಂದು ಹೇಳಿರುವ ನ್ಯಾಯಾಲಯ ಪ್ರಕರಣದಲ್ಲಿ ಆರೋಪಿಯನ್ನು ಖುಲಾಸೆಗೊಳಿಸಿದೆ. ಬಿಜೆಪಿ ಸರ್ಕಾರದ ಕಾನೂನುಬಾಹಿರ ‘ಬುಲ್ಡೋಜರ್ ನ್ಯಾಯ’ಕ್ಕೆ ನಿರಪರಾಧಿಯೊಬ್ಬ ತನ್ನ ಮನೆ ಕಳೆದುಕೊಂಡಿದ್ದಾರೆ. ನಾಲ್ಕು ವರ್ಷಗಳಿಂದ ಆತನ ಕುಟುಂಬ ಬೀದಿಪಾಲಾಗಿದೆ.

2021ರ ಮಾರ್ಚ್‌ನಲ್ಲಿ, ಮಧ್ಯಪ್ರದೇಶದ ರಾಜ್‌ಗಢದಲ್ಲಿ ಮಾಜಿ ಕೌನ್ಸಿಲರ್ ಶಫೀಕ್ ಅನ್ಸಾರಿ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ದೂರು ದಾಖಲಿಸಿದ್ದರು. ಅವರ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಪ್ರಕರಣ ದಾಖಲಾದ 10 ದಿನಗಳ ಬಳಿಕ, ಶಫೀಕ್ ಅನ್ಸಾರಿ ಅವರ ಮನೆಯನ್ನು ಸ್ಥಳೀಯ ಅಧಿಕಾರಿಗಳು ಬುಲ್ಡೋಜರ್ ಮೂಲಕ ಧ್ವಂಸಗೊಳಿಸಿದ್ದರು.

ಮನೆ ಕಳೆದುಕೊಂಡ ಶಫೀಕ್ ಕುಟುಂಬಕ್ಕೆ ಅವರ ಸಹೋದರ ಆಶ್ರಯ ನೀಡಿದ್ದರು. ಆಶ್ರಯ ನೀಡಿದ್ದಕ್ಕಾಗಿ ಸಹೋದರ ವಿರುದ್ಧವೂ ಪ್ರಕರಣ ದಾಖಲಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೀಗ, ಪ್ರಕರಣದ ವಿಚಾರಣೆ ನಡೆಸಿ, ಅಂತಿಮ ತೀರ್ಪು ನೀಡಿರುವ ರಾಜ್‌ಗಢ ಸೆಷನ್ಸ್‌ ನ್ಯಾಯಾಲಯದ ನ್ಯಾಯಾಧೀಶ ಚಿತ್ರೇಂದ್ರ ಸಿಂಗ್ ಸೋಲಂಕಿ, “ದೂರುದಾರರ ಸಾಕ್ಷ್ಯಗಳಲ್ಲಿ ಗಮನಾರ್ಹ ವ್ಯತ್ಯಾಸಗಳಿವೆ. ಆರೋಪಿ ಶಫೀಕ್ ಅನ್ಸಾರಿ ಮನೆಯಲ್ಲಿ ಸಂತ್ರಸ್ತೆ ಇದ್ದರು ಎಂಬುದು ಅನುಮಾನಾಸ್ಪದವಾಗಿದೆ. ಆರೋಪಿಯು ಸಂತ್ರಸ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬುದು ವೈದ್ಯಕೀಯ ಅಥವಾ ವೈಜ್ಞಾನಿಕ ಪುರಾವೆಗಳಿಂದ ದೃಢಪಟ್ಟಿಲ್ಲ. ಘಟನೆ ಕುರಿತು ತನ್ನ ಪತಿಗೆ ತಿಳಿಸಲು ಮತ್ತು ಪ್ರಕರಣ ದಾಖಲಿಸುವಲ್ಲಿನ ವಿಳಂಬಕ್ಕೆ ಯಾವುದೇ ತೃಪ್ತಿದಾಯಕ ಕಾರಣವನ್ನೂ ನೀಡಿಲ್ಲ. ಮಹಿಳೆ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದುದ್ದರ ಬಗ್ಗೆ ಶಫೀಕ್ ದೂರು ನೀಡಿದ್ದ ಕಾರಣಕ್ಕಾಗಿ, ಸೇಡು ತೀರಿಸಿಕೊಳ್ಳಲು ಮಹಿಳೆ ಅತ್ಯಾಚಾರದ ಸುಳ್ಳು ಆರೋಪ ಮಾಡಿದ್ದಾರೆ” ಎಂದು ಹೇಳಿದ್ದಾರೆ. ಪ್ರಕರಣದಿಂದ ಶಫೀಕ್ ಅವರನ್ನು ಖುಲಾಸೆಗೊಳಿಸಿದ್ದಾರೆ.

ಈ ವರದಿ ಓದಿದ್ದೀರಾ?: ಹಿಂದಿವಾಲಾಗಳ ಬುಲ್ಡೋಜರ್ ಬಾಬಾ ಯೋಜನೆಯನ್ನು ಕನ್ನಡ ನಾಡಿನಲ್ಲಿ ಹೇರಿದ ಸುಪ್ರೀಂ ಕೋರ್ಟ್

ಪ್ರಕರಣದಿಂದ ಖುಲಾಸೆಗೊಂಡಿರುವ ಶಫೀಕ್‌ ತನ್ನ ಮನೆಯನ್ನು ಅಧಿಕಾರಿಗಳು ಧ್ವಂಸಗೊಳಿಸಿದ ಬಗ್ಗೆ ಮಾತನಾಡಿದ್ದಾರೆ. “ಅಂದು ಮುಂಜಾನೆ ನಮ್ಮ ಮನೆಯ ಬಳಿ ಅಧಿಕಾರಿಗಳು ಬುಲ್ಡೋಜರ್‌ಗಳೊಂದಿಗೆ ಧಾವಿಸಿದರು. ನಮ್ಮ ಕುಟುಂಬ ಸದಸ್ಯರ ಮನವಿಯನ್ನು ಆಲಿಸದೆ, ಅರ್ಥಮಾಡಿಕೊಳ್ಳದೆ ಮನೆಯನ್ನು ಕೆಡವಿದರು” ಎಂದು ಅಳಲು ತೋಡಿಕೊಂಡಿದ್ದಾರೆ.

“ಮನೆಗೆ ಸಂಬಂಧಿಸಿದ ಎಲ್ಲ ದಾಖಲೆಗಳು ನಮ್ಮ ಬಳಿ ಇವೆ. ಆದರೂ, ಅನುಮತಿ ಪಡೆಯದೆ ಮನೆ ಕಟ್ಟಿದ್ದೇವೆಂದು ಅಧಿಕಾರಿಗಳು ಆರೋಪಿಸಿದ್ದರು. ದಾಖಲೆಗಳನ್ನು ತೋರಿಸಲು ಕೂಡ ಅವಕಾಶ ಕೊಡದೆ, ಮನೆಯನ್ನು ಉರುಳಿಸಿದರು. ನಾನು ಮೂರು ತಿಂಗಳು ಜೈಲು ವಾಸವನ್ನೂ ಅನುಭವಿಸಬೇಕಾಯಿತು. ನಮ್ಮ ಕುಟುಂಬದಲ್ಲಿ 7 ಮಂದಿ ಇದ್ದಾರೆ. ಎಲ್ಲರೂ ನಿರಾಶ್ರಿತರಾಗಿದ್ದೇವೆ” ಎಂದು ಶಫೀಕ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...