ಚಿಂದಿ ಆಯುತ್ತಿದ್ದ ಮಕ್ಕಳಿಗೆ ಸಿಕ್ತು ಮೂಟೆಗಟ್ಟಲೆ 500 ರೂ. ನೋಟುಗಳು; ವಿಡಿಯೋ ವೈರಲ್

Date:

ಚಿಂದಿ ಆಯುತ್ತಿದ್ದ ಮಕ್ಕಳಿಗೆ 500 ರೂ. ಮುಖಬೆಲೆಯ ಕಂತೆ ಕಂತೆ ನೋಟುಗಳು ಸಿಕ್ಕಿದ್ದು, ಮಕ್ಕಳು ನೋಟುಗಳ ಕತೆಗಳನ್ನು ಹಿಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಆದರೆ, ಮಕ್ಕಳಿಗೆ ಸಿಕ್ಕಿರುವ ನೋಟುಗಳು ಪ್ರಸ್ತುತ ಚಲಾವಣೆಯಲ್ಲಿರುವ ನೋಟುಗಳಲ್ಲ. 2016ರ ನವೆಂಬರ್‌ನಲ್ಲಿ ಮೋದಿ ಸರ್ಕಾರ ಅಮಾನ್ಯಗೊಳಿಸಿದ ನೋಟುಗಳಾಗಿವೆ. ಬರೋಬ್ಬರಿ 8 ವರ್ಷಗಳ ಬಳಿಕ, ಮತ್ತೆ ಆ ನೋಟುಗಳ ಕಂತೆಗಳು ಕಸ ಸುರಿಯುವ ಜಾಗದಲ್ಲಿ ಪತ್ತೆಯಾಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಅಗುತ್ತಿದೆ.

ವಿಡಿಯೋದಲ್ಲಿ, ಇಬ್ಬರು ಮಕ್ಕಳು ನೋಟುಗಳ ಕಂತೆಗಳನ್ನಿಡಿದು ಮುತ್ತಿಕ್ಕುವ ದೃಶ್ಯ ಸೆರೆಯಾಗಿದೆ. ಈ ವಿಡಿಯೋವನ್ನು ಹಂಚಿಕೊಂಡಿರುವ ಕೆಲವರು, “ಚಿಂದಿ ಹೆಕ್ಕುವ ಮಕ್ಕಳಿಗೆ ಹಲವು ಬ್ಯಾಗ್‌ಗಳಲ್ಲಿ ಹಳೆಯ 500 ರೂ. ನೋಟುಗಳು ಸಿಕ್ಕಿವೆ. ಆ ನೋಟುಗಳನ್ನು ಹೊಸ ನೋಟುಗಳೊಂದಿಗೆ ಎಕ್ಸ್‌ಚೇಂಜ್ ಮಾಡಿಕೊಳ್ಳಲು ಮಕ್ಕಳಿಗೆ ಆರ್‌ಬಿಯ ಅವಕಾಶ ನೀಡಬೇಕು” ಎಂದು ಒತ್ತಾಯಿಸಿದ್ದಾರೆ. ಇನ್ನೂ ಕೆಲವರು, ಅದರಲ್ಲೂ ಹಿಂದುತ್ವ ಕೋಮುವಾದಿಗಳು ಈ ವಿಡಿಯೋ ಪಾಕಿಸ್ತಾನದ್ದು. ಭಾರತದ ನೋಟುಗಳು ಪಾಕಿಸ್ತಾನದಲ್ಲಿ ಪತ್ತೆಯಾಗಿವೆ ಎಂದೆಲ್ಲ ಸುಳ್ಳು ಹಬ್ಬಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ, ಈ ವಿಡಿಯೋ ಇತ್ತೀಚಿನದ್ದಲ್ಲ. 2017ರದ್ದು ಮತ್ತು ಭಾರತದಲ್ಲಿಯೇ ಪತ್ತೆಯಾಗಿದ್ದ ಘಟನೆಯದ್ದು ಎಂದು ‘ಕನ್ನಡ ಫ್ಯಾಕ್ಟ್‌ ಚೆಕ್‌’ ಪತ್ತೆ ಮಾಡಿದೆ. 2017ರ ಜನವರಿ ತಿಂಗಳಿನಲ್ಲಿ ಉತ್ತರಾಖಂಡದ ಋಷಿಕೇಷ ಪಟ್ಟಣದ ತಪೋವನ ಟ್ರೈ ಜಂಕ್ಷನ್ ಬಳಿ ನೋಟುಗಳು ಪತ್ತೆಯಾಗಿದ್ದ ಘಟನೆಯ ವಿಡಿಯೋ ಇದಾಗಿದೆ. 2017ರಲ್ಲಿಯೂ ಈ ವಿಡಿಯೋ ವೈರಲ್ ಆಗಿತ್ತು ಎಂಬುದನ್ನು ಕಂಡುಕೊಂಡಿದೆ.

ಈ ವರದಿ ಓದಿದ್ದೀರಾ?: ಮೋದಿ ಮಂಕುಬೂದಿಗೆ ಇನ್ನೆಷ್ಟು ದಿನ ಮರುಳಾಗುತ್ತಾರೆ ಯುವಜನರು?

ಈ ಹಿಂದೆ, ಚಲಾವಣೆಯಲ್ಲಿದ್ದ 500 ಮತ್ತು 1,000 ಮುಖ ಬೆಲೆಯ ನೋಟುಗಳನ್ನು 2016ರ ನವೆಂಬರ್‌ 8ರಂದು ಪ್ರಧಾನಿ ಮೋದಿ ಅವರು ಏಕಾಏಕಿ ಅಮಾನ್ಯಗೊಳಿಸಿ ಆದೇಶ ಹೊರಡಿಸಿದ್ದರು. ಪರಿಣಾಮ, ನೋಟುಗಳ ಬದಲಾವಣೆಗಾಗಿ ಹಲವಾರು ಮಂದಿ ಬ್ಯಾಂಕುಗಳ ಮುಂದೆ ದಿನಗಟ್ಟಲೆ ಸಾಕುಗಳಲ್ಲಿ ನಿಂತು ಬಸವಳಿದಿದ್ದರು. ನೂರಾರು ಮಂದಿ ಅನಾರೋಗ್ಯಕ್ಕೆ ತುತ್ತಾಗಿ, ಸಾವನ್ನಪ್ಪಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...