ಮಧ್ಯಪ್ರದೇಶ | ಚುನಾವಣಾಧಿಕಾರಿಗಳನ್ನು ಕರೆದೊಯ್ಯುತ್ತಿದ್ದ ಬಸ್‌ಗೆ ಬೆಂಕಿ, ಇವಿಎಂಗಳಿಗೆ ಹಾನಿ

Date:

ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ಚುನಾವಣಾಧಿಕಾರಿಗಳು ಮತ್ತು ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಸಾಗಿಸುತ್ತಿದ್ದ ಬಸ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಕೆಲವು ಇವಿಎಂಗಳಿಗೆ ಹಾನಿಯಾಗಿದೆ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ.

ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ಚುನಾವಣಾಧಿಕಾರಿಗಳಿಗೆ ಮತ್ತು ಬಸ್ ಚಾಲಕನಿಗೆ ಯಾವುದೇ ಗಾಯಗಳಾಗಿಲ್ಲ ಎಂದು ಬೆತುಲ್ ಜಿಲ್ಲಾಧಿಕಾರಿ ನರೇಂದ್ರ ಸೂರ್ಯವಂಶಿ ಪಿಟಿಐಗೆ ತಿಳಿಸಿರುವುದಾಗಿ ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲೆಯ ಗೋಲಾ ಗ್ರಾಮದ ಬಳಿ ಮಂಗಳವಾರ ರಾತ್ರಿ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು ಬಸ್‌ನಲ್ಲಿ ಕಿಡಿ ಕಾಣಿಸಿಕೊಂಡಿದ್ದು ಅದು ಹಬ್ಬಿದೆ. ಘಟನೆಯಲ್ಲಿ ಯಾರಿಗೂ ಯಾವುದೇ ಗಾಯಗಳಾಗಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಬೀದರ್‌ | ಮಹಾರಾಷ್ಟ್ರದಲ್ಲಿ ಮೀಸಲಾತಿ ಹೋರಾಟ; ರಾಜ್ಯದ ಬಸ್‌ಗೆ ಬೆಂಕಿ

ಬೂತ್ ಸಂಖ್ಯೆ 275, 276, 277, 278, 279 ಮತ್ತು 280 ಸೇರಿದಂತೆ ನಾಲ್ಕು ಮತಗಟ್ಟೆಗಳ ಇವಿಎಂಗಳಿಗೆ ಈ ಬೆಂಕಿ ಅವಘಡದಿಂದಾಗಿ ಹಾನಿಯಾಗಿದೆ. ಅಗ್ನಿಶಾಮಕ ದಳವು ಬೆಂಕಿಯನ್ನು ನಂದಿಸಿದ್ದು ಬಸ್ ಸಂಪೂರ್ಣರ್ವಾಗಿ ಸುಟ್ಟು ಹೋಗಿದೆ ಎಂದು ವರದಿಯಾಗಿದೆ.

ಘಟನೆಯ ಸಮಯದಲ್ಲಿ ಬಸ್‌ನಲ್ಲಿ ಆರು ಮತಗಟ್ಟೆಗಳ ಅಧಿಕಾರಿಗಳು ಮತ್ತು ಆ ಮತಗಟ್ಟೆಗಳ ಇವಿಎಂಗಳು ಇದ್ದವು. ಈ ಪೈಕಿ ನಾಲ್ಕು ಇವಿಎಂಗಳು ಹಾನಿಗೊಳಗಾಗಿವೆ ಮತ್ತು ಎರಡು ಸುರಕ್ಷಿತವಾಗಿವೆ ಎಂದು ಸೂರ್ಯವಂಶಿ ಹೇಳಿದರು.

ಇದನ್ನು ಓದಿದ್ದೀರಾ? ವಿಜಯಪುರ | ಟೈರ್ ಸ್ಪೋಟದಿಂದ ಹೊತ್ತಿದ ಬೆಂಕಿ; ಖಾಸಗಿ ಬಸ್‌ ಭಸ್ಮ

ಘಟನೆಯಿಂದ ಇವಿಎಂಗಳಲ್ಲಿ ದಾಖಲಾದ ಮತ ಎಣಿಕೆಯ ಮೇಲೆ ಪರಿಣಾಮ ಬೀರಬಹುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಜಿಲ್ಲಾಧಿಕಾರಿ, ಈ ಕುರಿತು ಚುನಾವಣಾ ಆಯೋಗಕ್ಕೆ ವರದಿ ಕಳುಹಿಸಲಾಗುವುದು ಮತ್ತು ಹಾನಿಗೊಳಗಾದ ಮತಗಟ್ಟೆಗಳಲ್ಲಿ ಮರು ಮತದಾನದ ಬಗ್ಗೆ ಚುನಾವಣಾ ಸಂಸ್ಥೆ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಬೇತುಲ್ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ.72.65ರಷ್ಟು ಮತದಾನವಾಗಿದೆ ಎಂದು ಚುನಾವಣಾಧಿಕಾರಿಯೊಬ್ಬರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...