ಕರ್ನಾಟಕದಿಂದ ಶಬರಿಮಲೆಗೆ ಹೋಗಿದ್ದ ಬಸ್‌ ಪಲ್ಟಿ; 27 ಭಕ್ತರಿಗೆ ಗಾಯ

Date:

ಕರ್ನಾಟಕದಿಂದ ಶಬರಿಮಲೆಯ ಅಯ್ಯಪ್ಪ ದೇವಸ್ಥಾನಕ್ಕೆ ತೆರಳಿದ್ದ ಬಸ್ಸೊಂದು ಅಪಘಾತಕ್ಕೀಡಾಗಿರುವ ಘಟನೆ ಕೇರಳದ ವಯನಾಡ್‌ನಲ್ಲಿ ನಡೆದಿದೆ. ಘಟನೆಯಲ್ಲಿ ಕನಿಷ್ಠ 27 ಮಂದಿ ಭಕ್ತರಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ

ಮೈಸೂರು ಜಿಲ್ಲೆಯ ಹೊಸೂರು ಗ್ರಾಮದ ಇಬ್ಬರು ಮಕ್ಕಳು ಸೇರಿದಂತೆ 45 ಮಂದಿ ಬಸ್‌ನಲ್ಲಿ ಶಬರಿಮಲೆಗೆ ತೆರಳಿದ್ದರು. ದೇವಸ್ಥಾನದಲ್ಲಿ ಪೂಜೆ ಮುಗಿಸಿ, ಮೈಸೂರಿಗೆ ಹಿಂದಿರುಗುವಾಗ ವಯನಾಡ್‌ನ ತಿರುನೆಲ್ಲಿಯಲ್ಲಿ ಪಲ್ಟಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಗೊಂಡವರನ್ನು ವಯನಾಡ್‌ನ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...