ಭೀಕರ ಘಟನೆ | ಫ್ಲೈಓವರ್‌ಗೆ ಬಸ್ ಡಿಕ್ಕಿ; 12 ಮಂದಿ ದುರ್ಮರಣ

Date:

ಫ್ಲೈಓವರ್ ಗೋಡೆಗೆ ಬಸ್ ಡಿಕ್ಕಿ ಹೊಡೆದಿದ್ದು, ಕನಿಷ್ಠ 12 ಮಂದಿ ಪ್ರಯಾಣಿಕರು ಮೃತಪಟ್ಟಿರುವ ದುರ್ಘಟನೆ ರಾಜಸ್ತಾನದ ಕಾರ್ನಲ್ಲಿಯಲ್ಲಿ ನಡೆದಿದೆ. ದುರ್ಘಟನೆಯಲ್ಲಿ 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜಸ್ತಾನದ ಸಲಾಸರ್‌ನಿಂದ ಹೊರಟಿದ್ದ ಬಸ್‌, ಸಿಕರ್ ಜಿಲ್ಲೆಯ ಕಾರ್ನಲ್ಲಿಯ ಲಕ್ಷ್ಮಣಗಢ ಬಳಿ ಹೆದ್ದಾರಿಯ ಫ್ಲೈಓವರ್ ಗೋಡೆಗೆ ಡಿಕ್ಕಿಯಾಗಿದೆ. ದುರ್ಘಟನೆಯಲ್ಲಿ 12 ಮಂದಿ ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಲಕ್ಷ್ಮಣಗಢದ ಸರ್ಕಾರಿ ಕಲ್ಯಾಣ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಘಟನೆ ಬಗ್ಗೆ ಕಳವಳ ವ್ಯಕ್ತಪಡಿಸಿರುವ ರಾಜಸ್ತಾನ ಮುಖ್ಯಮಂತ್ರಿ ಭಜನಲಾಲ್ ಶರ್ಮಾ, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಕೊಡಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...