ಬಸ್‌ ಮಾರ್ಷಲ್‌ಗಳ ಮರು ನಿಯೋಜನೆ: ಬಿಜೆಪಿ ಶಾಸಕನ ಕಾಲು ಹಿಡಿದ ಎಎಪಿ ಸಚಿವ

Date:

ಬಸ್‌ ಮಾರ್ಷಲ್‌ಗಳ ಮರು ನಿಯೋಜನೆ ಬಗ್ಗೆ ಸಚಿವ ಸಂಪುಟ ಕೈಗೊಂಡಿರುವ ನಿರ್ಣಯಕ್ಕೆ ಒಪ್ಪಿಗೆ ನೀಡುವಂತೆ ಲೆಫ್ಟಿನೆಂಟ್‌ ಗವರ್ನರ್‌ ವಿ ಕೆ ಸಕ್ಸೇನಾಗೆ ಮನವಿ ಮಾಡಲು ತಮ್ಮ ಜೊತೆ ಬರುವಂತೆ ದೆಹಲಿ ಸಚಿವ ಸೌರಭ್‌ ಭಾರಧ್ವಜ್‌ ಅವರು ಬಿಜೆಪಿ ಶಾಸಕ ವಿಜೇಂದರ್‌ ಗುಪ್ತಾ ಅವರ ಕಾಲು ಹಿಡಿದು ಮನವಿ ಮಾಡಿದರು.

ಇದಕ್ಕೆ ಅವರು ಸ್ಪಂದಿಸುತ್ತಿದಂತೆಯೇ, ಮುಖ್ಯಮಂತ್ರಿ ಆತಿಶಿ ಅವರು ತಮ್ಮ ಕಾರನ್ನು ಬಿಟ್ಟು ಬಿಜೆಪಿ ನಾಯಕರ ಕಾರಿನಲ್ಲಿ ಕುಳಿತು ಸಚಿವರು, ಶಾಸಕರೊಂದಿಗೆ ವಿ ಕೆ ಸಕ್ಸೇನಾ ಅವರ ಮನೆಗೆ ತೆರಳಿದರು. ಆದರೆ, ಅಲ್ಲಿಂದ ಹೊರ ಬರುತ್ತಿದಂತೆಯೇ ಎಎಪಿ ನಾಯಕರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

‘ಸಚಿವ ಸಂಪುಟದ ನಿರ್ಣಯಕ್ಕೆ ಸಹಿ ಮಾಡುವಂತೆ ಬಿಜೆಪಿಯು ಲೆಫ್ಟಿನೆಂಟ್‌ ಗವರ್ನರ್‌ ಅವರನ್ನು ಒತ್ತಾಯಿಸಿಲ್ಲ’ ಎಂದು ಆರೋಪಿಸಿದ ಎಎಪಿ ನಾಯಕರು, ಲೆ.ಗವರ್ನರ್‌ ಮನೆ ಮುಂದೆ ಪ್ರತಿಭಟನೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಲೆ.ಗವರ್ನರ್‌ ಅವರನ್ನು ಭೇಟಿ ಮಾಡಲು ಬಿಜೆಪಿ ಶಾಸಕರು ತಯಾರಿರಲಿಲ್ಲ. ಆದರೆ ನಾವು ಅವರನ್ನು ಜೊತೆಗೆ ಕರೆದುಕೊಂಡು ಹೋದೆವು. ನಿರ್ಣಯಕ್ಕೆ ಸಹಿ ಮಾಡುವಂತೆ ಬಿಜೆಪಿ ಶಾಸಕರು ಲೆ.ಗವರ್ನರ್‌ ಅವರಿಗೆ ಮನವಿ ಮಾಡಲಿಲ್ಲ. ಬಿಜೆಪಿಯು ದ್ರೋಹ ಮಾಡಿದೆ’ ಎಂದು ಮುಖ್ಯಮಂತ್ರಿ ಆತಿಶಿ ಕಿಡಿಕಾರಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಆರೋಪ-ಪ್ರತ್ಯಾರೋಪಗಳೆಷ್ಟು ಕಾಲ? ಆಡಳಿತ, ಅಭಿವೃದ್ಧಿ, ಕಲ್ಯಾಣಕ್ಕೆಷ್ಟು ಸಮಯ?

‘ಸಚಿವ ಸಂಪುಟದ ನಿರ್ಣಯಕ್ಕೆ ಲೆ.ಗವರ್ನರ್‌ ವಿ ಕೆ ಸಕ್ಸೇನಾ ಸಹಿ ಮಾಡಿಲ್ಲ. ಇದರಿಂದಾಗಿ 10 ಸಾವಿರ ಬಸ್‌ ಮಾರ್ಷಲ್‌ಗಳ ಆಕ್ರೋಶಕ್ಕೆ ಅವರು ತುತ್ತಾಗಲಿದ್ದಾರೆ’ ಎಂದು ಸಚಿವ ಭಾರಧ್ವಜ್‌ ಕಿಡಿಕಾರಿದರು.

ನಾಗರಿಕ ಸೇನೆಯ 10 ಸಾವಿರ ಸ್ವಯಂಸೇವಕರನ್ನು ಬಸ್‌ಗಳಲ್ಲಿ ಮಾರ್ಷಲ್‌ಗಳಾಗಿ ನಿಯೋಜಿಸಿರುವ ಬಗ್ಗೆ ನಾಗರಿಕ ರಕ್ಷಣಾ ನಿರ್ದೇಶನಾಲಯವು ಆಕ್ಷೇಪ ವ್ಯಕ್ತಪಡಿಸಿದ ಕಾರಣ ಕಳೆದ ವರ್ಷ ಅವರನ್ನು ವಜಾಗೊಳಿಸಲಾಗಿತ್ತು. ಬಸ್‌ ಮಾರ್ಷಲ್‌ಗಳ ಮರುನಿಯೋಜನೆಯ ಬಗ್ಗೆ ಬಿಜೆಪಿ ಶಾಸಕರು ಶುಕ್ರವಾರ ಮುಖ್ಯಮಂತ್ರಿ ಆತಿಶಿ ಜೊತೆ ಮಾತುಕತೆ ನಡೆಸಿದ್ದರು. ಇದರ ಬೆನ್ನಲ್ಲೇ ಸಚಿವ ಸಂಪುಟವು ನಿರ್ಣಯ ಕೈಗೊಂಡಿತ್ತು.

ಕಳೆದ ವರ್ಷ ಅಕ್ಟೋಬರ್‌ನಲ್ಲಿ ವಿ ಕೆ ಸಕ್ಸೇನಾ ಈ ಸೇವೆಯನ್ನು ಸ್ಥಗಿತಗೊಳಿಸಿದ ನಂತರ ಬಸ್ ಮಾರ್ಷಲ್‌ಗಳು ತಮ್ಮ ಸೇವೆಯನ್ನು ಮರುಸ್ಥಾಪಿಸುವಂತೆ ಪ್ರತಿಭಟನೆ ನಡೆಸುತ್ತಿದ್ದಾರೆ. ದೆಹಲಿಯ ಚಂದಗಿರಾಮ್ ಅಖಾರಾದಲ್ಲಿ ‍ಪ್ರತಿಭಟನೆ ನಡೆಸುತ್ತಿದ್ದ ಎಎಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...