ಫೆಂಗಲ್ ಚಂಡಮಾರುತ | ಪ್ರವಾಹದಲ್ಲಿ ಕೊಚ್ಚಿ ಹೋದ ಬಸ್‌ಗಳು; ವಿಡಿಯೋ ವೈರಲ್

Date:

ತಮಿಳುನಾಡು ಮತ್ತು ಪುದುಚೇರಿಯಲ್ಲಿ ಫೆಂಗಲ್ ಚಂಡಮಾರುತವು ಭೂಕುಸಿತವನ್ನು ಉಂಟು ಮಾಡಿದೆ. ಭಾನುವಾರವೇ ಚಂಡಮಾರುತದ ತೀವ್ರತೆ ಕಡಿಮೆಯಾಗಿದೆ. ಆದರೆ ನಿರಂತರವಾಗಿ ಭಾರೀ ಮಳೆಯಾಗುತ್ತಿದ್ದು ಪ್ರವಾಹ ಉಂಟಾಗಿದೆ.

ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಲ್ಲಿ ಅತೀ ಹೆಚ್ಚು ಹಾನಿ ಉಂಟಾಗಿದೆ. ಹಲವು ವಾಹನಗಳು ರಸ್ತೆಯಿಂದ ತಗ್ಗು ಪ್ರದೇಶಕ್ಕೆ ಉರುಳಿದೆ. ಕೃಷ್ಣಗಿರಿಯ ಉತ್ತಂಗಿರಿ ಬಸ್ ನಿಲ್ದಾಣದಲ್ಲಿ ಹಲವು ಬಸ್‌ಗಳು ಮತ್ತು ಇತರ ವಾಹನಗಳು ನೀರಿನಲ್ಲಿ ಕೊಚ್ಚಿ ಹೋಗಿದೆ.

ಕೆಲವು ಬಸ್ಸುಗಳು ಮತ್ತು ಕಾರುಗಳು ವೇಗವಾಗಿ ಹರಿಯುವ ಪ್ರವಾಹದಲ್ಲಿ ಕೊಚ್ಚಿ ಹೋಗುತ್ತಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಫೆಂಗಲ್ ಚಂಡಮಾರುತ‌ | ಧಾರಾಕಾರ ಮಳೆಗೆ ಮಲಗಿದ ರಾಗಿ-ಭತ್ತದ ಫಸಲು; ರೈತ ಕಂಗಾಲು

ಅಧಿಕಾರಿಗಳ ಪ್ರಕಾರ, ಕೃಷ್ಣಗಿರಿ ಜಿಲ್ಲೆಯಲ್ಲಿ ಸತತ 14 ಗಂಟೆಗಳಿಂದ ಕಾಲ ಭಾರೀ ಮಳೆಯಾಗುತ್ತಿದೆ. ಉತ್ತಂಗರೈ ಪ್ರದೇಶದಲ್ಲಿ ಕಳೆದ ರಾತ್ರಿ ಅತಿ ಹೆಚ್ಚು ಮಳೆಯಾಗಿದೆ. ಇನ್ನು ಈಗಾಗಲೇ ಫೆಂಗಲ್ ಚಂಡಮಾರುತಕ್ಕೆ 8 ಮಂದಿ ಬಲಿಯಾಗಿದ್ದಾರೆ ಎಂದು ವರದಿಯಾಗಿದೆ.

ತಮಿಳುನಾಡು ಮತ್ತು ಪುದುಚೇರಿ ಪ್ರದೇಶಗಳಲ್ಲಿ ಸಿಲುಕಿರುವ ನಾಗರಿಕರನ್ನು ಸ್ಥಳಾಂತರಿಸಲು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ಪುದುಚೇರಿಯಲ್ಲಿ ಪ್ರವಾಹದಲ್ಲಿ ಮುಳುಗಿದ್ದ ಮನೆಯೊಂದರಲ್ಲಿ ಸಿಲುಕಿದ್ದ ಶಿಶುವನ್ನು ಭಾರತೀಯ ಸೇನೆಯು ಮುಂಜಾನೆ ರಕ್ಷಿಸಿದೆ. ಹಲವೆಡೆ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

ಈ ನಡುವೆ ಫೆಂಗಲ್ ಚಂಡಮಾರುತದಿಂದಾಗಿ ಕರ್ನಾಟಕದಲ್ಲಿ ಡಿಸೆಂಬರ್ 5ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಕರ್ನಾಟಕ ಹವಾಮಾನ ಇಲಾಖೆ ಈಗಾಗಲೇ ನೀಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಅಲ್ಲಲ್ಲಿ ಸಂಚಾರ ವ್ಯತ್ಯಯವಾಗಿದೆ.

ಇನ್ನು ಪುದುಚೇರಿಯಲ್ಲಿ ಎಲ್ಲಾ ಪಡಿತರ ಚೀಟಿದಾರರಿಗೆ 5000 ರೂಪಾಯಿ ಪರಿಹಾರ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಎನ್‌ ರಂಗಸಾಮಿ ಘೋಷಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...