ಆಘಾತಕಾರಿ ಘಟನೆ | ಉದ್ಯಮಿ ‘ಅಜ್ಜ’ನನ್ನು ಇರಿದು ಕೊಂದ ಮೊಮ್ಮಗ

Date:

ಆಸ್ತಿ ವಿವಾದದಿಂದಾಗಿ 86 ವರ್ಷದ ಕೈಗಾರಿಕೋದ್ಯಮಿಯೊಬ್ಬರನ್ನು ಅವರ ಮೊಮ್ಮಗನೇ ಇರಿದು ಕೊಂದಿರುವ ಆಘಾತಕಾರಿ ಘಟನೆ ತೆಲಂಗಾಣದ ಹೈದರಾಬಾದ್‌ನಲ್ಲಿ ನಡೆದಿದೆ.

ಆರೋಪಿ, 28 ವರ್ಷದ ಕೀರ್ತಿ ತೇಜ ಎಂಬಾತ ತನ್ನ ಅಜ್ಜ, ವೆಲ್ಜನ್ ಗ್ರೂಪ್‌ನ ಅಧ್ಯಕ್ಷ ವಿ.ಸಿ. ಜನಾರ್ದನ ರಾವ್ ಅವರನ್ನು ಚಾಕುವಿನಿಂದ ಇರಿದಿದ್ದಾನೆ. ಹಲವಾರು ಚುಚ್ಚಿದ್ದರಿಂದ ತೀವ್ರ ರಕ್ತಸ್ರಾವದಿಂದಾಗಿ ರಾವ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಜ್ಜನ ಮೇಲೆ ಹಲ್ಲೆ ನಡೆಸುತ್ತಿದ್ದುದ್ದನ್ನು ತಡೆಯಲು ಬಂದ ತನ್ನ ತಾಯಿಗೂ ಆರೋಪಿ ಚಾಕುವಿನಿಂದ ಇರಿದಿದ್ದಾನೆ. ಆಕೆಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಪಿ ತೇಜು ಪ್ರತ್ಯೇಕವಾಗಿ ವಾಸವಾಗಿದ್ದ. ಅಜ್ಜನ ಮನೆಗೆ ಬಂದಿದ್ದ ಆತ, ಆಸ್ತಿಯನ್ನು ಹಂಚಿಕೆ ಮಾಡುವಂತೆ ಅಜ್ಜನ ಬಳಿ ಬೇಡಿಕೆ ಇಟ್ಟಿದ್ದಾನೆ. ಆದರೆ, ಆಸ್ತಿ ಹಂಚಿಕೆಗೆ ರಾವ್ ನಿರಾಕಸಿದ್ದಾರೆ. ಹೀಗಾಗಿ, ಆತ ಜಗಳ ತೆಗೆದಿದ್ದಾನೆ. ಗಲಾಟೆ ವಿಕೋಪಕ್ಕೆ ತಿರುಗಿದ್ದು, ಚಾಕುವಿನಿಂದ ಇರಿದಿದ್ದಾನೆ ಎಂದು ವರದಿಯಾಗಿದೆ.

ರಾವ್ ಅವರನ್ನು ಆರೋಪಿ ತೇಜು ಸುಮಾರು 70 ಬಾರಿ ಇರಿದಿದ್ಧಾನೆ ಎಂದು ಮರಣೋತ್ತರ ಪರೀಕ್ಷೆಯಲ್ಲಿ ಗೊತ್ತಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ತನಿಖೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...