ಬೀದಿ ನಾಯಿಗಳ ದಾಳಿಗೆ ಉದ್ಯಮಿ ಪರಾಗ್ ದೇಸಾಯಿ ಬಲಿ

Date:

ಬೀದಿ ನಾಯಿಗಳ ದಾಳಿ ತುತ್ತಾಗಿದ್ದ ವಾಘ್ ಬಕ್ರಿ ಟೀ ಬ್ರಾಂಡ್ ಗ್ರೂಪ್‌ನ ಕಾರ್ಯನಿರ್ವಾಹಕ ನಿರ್ದೇಶಕ ಪರಾಗ್ ದೇಸಾಯಿ ಅವರು ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಾವನ್ನಪ್ಪಿದ್ದಾರೆ.

ಅಕ್ಟೋಬರ್ 15 ರಂದು ದೇಸಾಯಿ ಅವರು ವಾಕಿಂಗ್‌ಗೆ ತೆರಳಿದ್ದಾಗ, ಅವರ ಮೇಲೆ ಅವರ ನಿವಾಸದ ಹೊರಗೆ ಬೀದಿ ನಾಯಿಗಳು ದಾಳಿ ನಡೆಸಿದ್ದವು. ಈ ವೇಳೆ, ಅವರು ಕೆಳಗೆ ಬಿದ್ದು ಮೆದುಳಿನ ರಕ್ತಸ್ರಾವವಾಗಿತ್ತು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ.

ದೇಸಾಯಿ ಅವರನ್ನು ಏಳು ದಿನಗಳ ಕಾಲ ವೆಂಟಿಲೇಟರ್‌ನಲ್ಲಿ ಇರಿಸಲಾಗಿತ್ತು. ಆದರೂ ಚಿಕಿತ್ಸೆ ಫಲಕಾರಿಯಾಗಿಲ್ಲ. ಭಾನುವಾರ ಅವರು ನಿಧನರಾಗಿದ್ದು, ಸೋಮವಾರ ಬೆಳಗ್ಗೆ ಅವರು ಅಂತ್ಯಕ್ರಿಯೆ ನಡೆದಿದೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...