ಉಪಚುನಾವಣೆ | 13 ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ಮತದಾನ; ಉತ್ತರಾಖಂಡದಲ್ಲಿ ಘರ್ಷಣೆ

Date:

ಏಳು ರಾಜ್ಯಗಳಾದ್ಯಂತ 13 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಬುಧವಾರ ಪ್ರಾರಂಭವಾಗಿದೆ. ಏಪ್ರಿಲ್-ಜೂನ್‌ನಲ್ಲಿ ನಡೆದ ಲೋಕಸಭೆ ಚುನಾವಣೆಯ ಬಳಿಕ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದೆ. ಬೆಳಗ್ಗೆ 7 ಗಂಟೆಗೆ ಆರಂಭವಾದ ಮತದಾನ ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ.

ಬಿಹಾರದ ರುಪೌಲಿ, ಪಶ್ಚಿಮ ಬಂಗಾಳದ ರಾಯ್‌ಗಂಜ್, ರಣಘಾಟ್ ದಕ್ಷಿಣ, ಬಾಗ್ದಾ ಮತ್ತು ಮಾಣಿಕ್ತಾಲಾ, ತಮಿಳುನಾಡಿನ ವಿಕ್ರವಂಡಿ, ಮಧ್ಯಪ್ರದೇಶದ ಅಮರವಾರ, ಉತ್ತರಾಖಂಡದ ಬದರಿನಾಥ್ ಮತ್ತು ಮಂಗಳೌರ್, ಪಂಜಾಬ್‌ನ ಜಲಂಧರ್ ಪಶ್ಚಿಮ, ಹಿಮಾಚಲ ಪ್ರದೇಶದ ಡೆಹ್ರಾ, ಹಮೀರ್‌ಪುರ ಮತ್ತು ನಲಗಢದಲ್ಲಿ ಚುನಾವಣೆ ನಡೆಯುತ್ತಿದೆ.

ಬೆಳಗ್ಗೆ 9 ಗಂಟೆಯವರೆಗೆ ರುಪೌಲಿಯಲ್ಲಿ ಶೇ.9.23, ರಾಯಗಂಜ್‌ನಲ್ಲಿ ಶೇ.10.01, ರಣಘಾಟ್ ದಕ್ಷಿಣದಲ್ಲಿ ಶೇ.11.58, ಬಾಗ್ದಾದಲ್ಲಿ ಶೇ.10.61, ಮಾಣಿಕ್ತಾಲಾದಲ್ಲಿ ಶೇ.9.01, ವಿಕ್ರವಾಂಡಿಯಲ್ಲಿ ಶೇ.12.94, ಅಮರವಾರದಲ್ಲಿ ಶೇ.16.90, ಬದರಿನಾಥದಲ್ಲಿ ಶೇ.6.50, ಮಂಗಳೌರ್‌ನಲ್ಲಿ ಶೇ.8.58, ಜಲಂಧರ್ ಪಶ್ಚಿಮದಲ್ಲಿ ಶೇ.10.30, ಡೆಹ್ರಾದಲ್ಲಿ ಶೇ.15.70, ಹಮೀರ್‌ಪುರದಲ್ಲಿ ಶೇ.15.71 ಮತ್ತು ನಲಗಢದಲ್ಲಿ ಶೇ.16.48 ಮತದಾನವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?   ಉಪಚುನಾವಣೆ | ಕುಟುಂಬದ ಯಾರೂ ಚುನಾವಣಾ ರಾಜಕೀಯಕ್ಕೆ ಬರುವುದಿಲ್ಲ: ಡಿಕೆ ಶಿವಕುಮಾರ್

ಉತ್ತರಾಖಂಡದಲ್ಲಿ ಮತದಾನದ ವೇಳೆ ಘರ್ಷಣೆ

ಉತ್ತರಾಖಂಡದ ಮಂಗಳೌರ್‌ನಲ್ಲಿ ಮತದಾನದ ನಡುವೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಮಂಗಳೌರ್‌ನ ಕಾಂಗ್ರೆಸ್ ಅಭ್ಯರ್ಥಿ ಖಾಜಿ ನಿಜಾಮುದ್ದೀನ್, “ದುಷ್ಕರ್ಮಿಗಳು ಬಹಿರಂಗವಾಗಿ ಗುಂಡು ಹಾರಿಸಿದ್ದಾರೆ. ಇದು ಪ್ರಜಾಪ್ರಭುತ್ವದ ಮೇಲಿನ ದಾಳಿಯಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಯಾವುದೇ ಆಂಬ್ಯುಲೆನ್ಸ್ ಅಥವಾ ಯಾವುದೇ ವ್ಯವಸ್ಥೆ ಇರಲಿಲ್ಲ” ಎಂದು ಹೇಳಿದರು.

ಇನ್ನು ಈ ಬಗ್ಗೆ ಮಾಹಿತಿ ನೀಡಿರುವ ಎಸ್‌ಪಿ ಸ್ವಪನ್ ಕಿಶೋರ್ ಸಿಂಗ್, “ಇಲ್ಲಿ ಪರಿಸ್ಥಿತಿ ಸಾಮಾನ್ಯವಾಗಿದೆ. ಮತದಾನ ಶಾಂತಿಯುತವಾಗಿ ನಡೆಯುತ್ತಿದೆ. ಸಾಕಷ್ಟು ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ವಿವಾದವೊಂದರ ಬಗ್ಗೆ ನಮಗೆ ಮಾಹಿತಿ ಬಂದಿದೆ. ಅದಕ್ಕಾಗಿಯೇ ನಾವು ಇಲ್ಲಿದ್ದೇವೆ. ಗುಂಡು ಹಾರಿಸಿರುವ ವಿಚಾರ ಇನ್ನೂ ದೃಢಪಟ್ಟಿಲ್ಲ” ಎಂದು ಹೇಳಿದರು.

ಹಾಲಿ ಶಾಸಕರ ನಿಧನ ಮತ್ತು ವಿವಿಧ ಪಕ್ಷಗಳಿಗೆ ರಾಜೀನಾಮೆ ನೀಡಿದ ಕಾರಣ ತೆರವಾದ ಸ್ಥಾನಗಳಲ್ಲಿ ಉಪಚುನಾವಣೆ ನಡೆಸಲಾಗುತ್ತಿದೆ. ಜುಲೈ 13ರಂದು ಮತ ಎಣಿಕೆ ನಡೆಯಲಿದೆ. ಲೋಕಸಭೆ ಚುನಾವಣೆಯಲ್ಲಿ ಉತ್ತಮ ಸ್ಪರ್ಧೆ ನೀಡಿದ ಇಂಡಿಯಾ ಒಕ್ಕೂಟ ಉಪಚುನಾವಣೆಯಲ್ಲಿಯೂ ಅಧಿಕ ಸ್ಥಾನ ಗೆಲ್ಲಲು ಕಾರ್ಯತಂತ್ರ ರೂಪಿಸಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...