ಕ್ಯಾಲಿಫೋರ್ನಿಯಾದ ಸ್ಟಾಕ್ಟನ್‌ನಲ್ಲಿರುವ ಬ್ಯಾಂಕ್ವೆಟ್ ಹಾಲ್‌ವೊಂದರಲ್ಲಿ ಶನಿವಾರ ನಡೆದ ಬರ್ತಡೇ ಪಾರ್ಟಿಯಲ್ಲಿ ಸಾಮೂಹಿಕ ಗುಂಡಿನ ದಾಳಿ ನಡೆದಿದ್ದು, ನಾಲ್ವರು ಸಾವನ್ನಪ್ಪಿದ ಘಟನೆ ನಡೆದಿದೆ.
“ಮಗುವಿನ ಹುಟ್ಟುಹಬ್ಬದ ಪಾರ್ಟಿಯಲ್ಲಿ ಸಾಮೂಹಿಕ ಗುಂಡಿನ ದಾಳಿ ನಡೆದಿದ್ದು ನಾಲ್ವರು ಸಾವನ್ನಪ್ಪಿದ್ದಾರೆ. 14 ಜನರು ಗಾಯಗೊಂಡಿದ್ದಾರೆ” ಎಂದು ಅಧಿಕಾರಿಗಳು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಮುಂದುವರೆದು, “ಶಂಕಿತರು ತಲೆಮರೆಸಿಕೊಂಡಿದ್ದು, ಗುರಿ ಮಾಡಿ ಈ ದಾಳಿಯನ್ನು ನಡೆಸಲಾಗಿದೆ. ಗಾಯಗೊಂಡವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸ್ಟಾಕ್ಟನ್‌ನ ಲುಸಿಲ್ ಅವೆನ್ಯೂದ 1900 ಬ್ಲಾಕ್‌ನಲ್ಲಿ ನಡೆದ ಗುಂಡಿನ ದಾಳಿಯ ಬಗ್ಗೆ ಸ್ಯಾನ್ ಜೋಕ್ವಿನ್ ಕೌಂಟಿ ಶೆರಿಫ್ ಕಚೇರಿ ಪ್ರಸ್ತುತ ತನಿಖೆ ನಡೆಸುತ್ತಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸಂಚಾರ ನಿಯಮ ಉಲ್ಲಂಘನೆ: ದಂಡ ಪಾವತಿಗೆ 50% ರಿಯಾಯತಿ; 7 ಕೋಟಿ ರೂ. ಸಂಗ್ರಹ
ಸ್ಟಾಕ್ಟನ್ ಉಪ ಮೇಯರ್ ಜೇಸನ್ ಲೀ ಅವರು, “ಮಗುವಿನ ಹುಟ್ಟುಹಬ್ಬದ ಪಾರ್ಟಿಯಲ್ಲಿ ಗುಂಡಿನ ದಾಳಿ ನಡೆದಿದೆ. ಈ ಘಟನೆಯೂ ತುಂಬಾ ದುಖಃಕರವಾಗಿದೆ” ಎಂದು ಹೇಳಿದ್ದಾರೆ.
ಈ ದಾಳಿಯ ಕುರಿತು ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಈ ಗುಂಡಿನ ದಾಳಿಯ ಹಿಂದೆ ಯಾರ ಕೈವಾಡವಿದೆ ಎಂಬುದು ತಿಳಿದು ಬರಬೇಕಿದೆ.





