ಮಹಿಳಾ ಹಾಸ್ಟೆಲ್‌ ಬಾತ್‌ರೂಮ್‌ನಲ್ಲಿ ಕ್ಯಾಮೆರಾ ಇಟ್ಟು, ನೂರಾರು ವಿಡಿಯೋ ಮಾಡಿದ ಆರೋಪ; ವಿದ್ಯಾರ್ಥಿನಿಯರ ಪ್ರತಿಭಟನೆ

Date:

ಕಾಲೇಜು ವಿದ್ಯಾರ್ಥಿನಿಯರ ಹಾಸ್ಟೆಲ್‌ನ ಬಾತ್‌ರೂಮ್ ಮತ್ತು ಟಾಯ್ಲೆಟ್‌ನಲ್ಲಿ ಹಾಸ್ಟೆಲ್‌ ಸಿಬ್ಬಂದಿಗಳೇ ಹಿಡನ್ ಕ್ಯಾಮೆರಾ ಇಟ್ಟು, ವಿದ್ಯಾರ್ಥಿನಿಯರ ಖಾಸಗಿ ದೃಶ್ಯಗಳನ್ನು ವಿಡಿಯೋ ಮಾಡಿದ್ದಾರೆಂಬ ಆರೋಪ ಕೇಳಿಬಂದಿದೆ. ಹಾಸ್ಟೆಲ್‌ನ ನೂರಾರು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದಾರೆ.

ತೆಲಂಗಾಣದ ಮೇಡ್ಚಲ್‌ನಲ್ಲಿರುವ ಸಿಎಂಆರ್‌ ಎಂಜಿನಿಯರಿಂಗ್‌ ಕಾಲೇಜಿನ ಹಾಸ್ಟೆಲ್‌ನಲ್ಲಿ ಘಟನೆ ನಡೆಸಿದೆ. ಹಾಸ್ಟೆಲ್‌ ಬಾತ್‌ರೂಮ್‌ನಲ್ಲಿ ಹಿಡನ್‌ ಕ್ಯಾಮೆರಾ ಇಡಲಾಗಿದೆ. ಸಿಬ್ಬಂದಿಗಳು ವಿದ್ಯಾರ್ಥಿನಿಯರ ಖಾಸಗಿ ದೃಶ್ಯಗಳಿರುವ 300ಕ್ಕೂ ಹೆಚ್ಚು ವಿಡಿಯೋಗಳನ್ನು ಇಟ್ಟುಕೊಂಡಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದಾರೆ. ಕ್ರಮಕ್ಕೆ ಆಗ್ರಹಿಸಿದ್ದಾರೆ.

ಡಿಸೆಂಬರ್ 31ರ ನಡುರಾತ್ರಿ ಹಾಸ್ಟೆಲ್‌ನಲ್ಲಿ ಹೊಸವರ್ಷದ ಸಂಭ್ರಮಾಚರಣೆ ಆಯೋಜಿಸಲಾಗಿತ್ತು. ಕಾರ್ಯಕ್ರಮ ಮುಗಿಸಿ ಹಾಸ್ಟೆಲ್‌ಗೆ ತೆರಳಿದ ವಿದ್ಯಾರ್ಥಿನಿಯರಿಗೆ ಬಾತ್‌ರೂಮ್‌ನಲ್ಲಿ ಹಿಡನ್ ಕ್ಯಾಮೆರಾ ಇರುವುದು ಕಂಡುಬಂದಿದೆ. ಬಾತ್ ರೂಂನ ವೆಂಟಿಲೇಟರ್‌ ಮತ್ತು ಕನ್ನಡಿಯ ಮೇಲೆ ಕೈಗಳ ಅಚ್ಚೆಯ ಗುರುತುಗಳು ಕಂಡುಬಂದಿದ್ದು, ಕನ್ನಡಿಯ ಬಳಿ ಕ್ಯಾಮೆರಾ ಅಳವಡಿಸಿರುವುದು ಪತ್ತೆಯಾಗಿದೆ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಲ್ಲದೆ, ಕಳೆದ ಮೂರು ತಿಂಗಳಿನಿಂದ ಸುಮಾರು 300 ವಿಡಿಯೋಗಳನ್ನು ಸೆರೆಹಿಡಿಯಲಾಗಿದೆ. ಹಾಸ್ಟೆಲ್‌ನ ಅಡುಗೆ ಸಿಬ್ಬಂದಿಗಳೇ ಈ ಕೃತ್ಯ ಎಸಗಿದ್ದಾರೆ ಎಂದು ಪ್ರತಿಭಟನೆ ನಡೆಸಿರುವ ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ.

ವಿದ್ಯಾರ್ಥಿನಿಯರ ಪ್ರತಿಭಟನೆ ಬಗ್ಗೆ ಮಾಹಿತಿ ಪಡೆದ ಪೊಲೀಸರು ಹಾಸ್ಟೆಲ್‌ಗೆ ಭೇಟಿ ನೀಡಿದ್ದು, ವಿದ್ಯಾರ್ಥಿನಿಯರಿಂದ ದೂರು ಪಡೆದಿದ್ದಾರೆ. ಏಳು ಮಂದಿ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಗಳಿಂದ 12 ಮೊಬೈಲ್‌ಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...