ಕ್ಯಾನ್ಸರ್‌ ಪೀಡಿತ ಅಜ್ಜಿಯನ್ನು ಕಸದ ರಾಶಿಗೆ ಎಸೆದ ಮೊಮ್ಮಗ

Date:

ಕ್ಯಾನ್ಸರ್‌ ಪೀಡಿತ ಅಜ್ಜಿಯೊಬ್ಬರನ್ನು ಆಕೆಯ ಸ್ವಂತ ಮೊಮ್ಮಗನೇ ಕಸದ ರಾಶಿಗೆ ಎಸೆದು ಹೋಗಿರುವ ಹೃದಯ ವಿದ್ರಾವಕ ಘಟನೆ ಮುಂಬೈನಲ್ಲಿ ನಡೆದಿದೆ.

60 ವರ್ಷದ ಯಶೋಧಾ ಗಾಯಕ್ವಾಡ್ ಅವರು ಚರ್ಮದ ಕ್ಯಾನ್ಸರ್​ನಿಂದ ಬಳಲುತ್ತಿದ್ದರು ಎಂದು ಹೇಳಲಾಗುತ್ತಿದೆ. ಎರಡು ದಿನಗಳ ಹಿಂದೆ ಮುಂಬೈನ ಆರ್​ ಕಾಲೋನಿಯ ರಸ್ತೆಬದಿಯ ಕಸದ ರಾಶಿಯ ಮೇಲೆ ವೃದ್ಧರೊಬ್ಬರು ದುರ್ಬಲ ಸ್ಥಿತಿಯಲ್ಲಿ ಮಲಗಿರುವುದನ್ನು ಸ್ಥಳೀಯರೊಬ್ಬರು ನೋಡಿದ್ದಾರೆ. ಕೂಡಲೇ ಪೊಲೀಸರಿಗೆ ತಿಳಿಸಿದ್ದಾರೆ. ವೃದ್ಧೆಯ ಕುಟುಂಬದವರನ್ನು ಹುಡುಕಲು ಪೊಲೀಸರು ಮುಂದಾಗಿದ್ದಾರೆ.

ಬೆಳಗ್ಗೆ ಮಹಿಳೆ ಪತ್ತೆಯಾಗಿದ್ದರೂ ಸಂಜೆ 5.30ರ ಹೊತ್ತಿಗೆ ಮಾತ್ರ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲು ಸಾಧ್ಯವಾಯಿತು. ಮಹಿಳೆ ತನ್ನ ಕುಟುಂಬ ಸದಸ್ಯರ ಎರಡು ನಿವಾಸಗಳ ವಿಳಾಸವನ್ನು ಹಂಚಿಕೊಂಡಿದ್ದು, ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | 1180 ದಿನಗಳ ಚನ್ನರಾಯಪಟ್ಟಣ ಚಳವಳಿಗೆ ಸರ್ಕಾರ ಸ್ಪಂದಿಸಲಿ

ಸಂಬಂಧಿಕರನ್ನು ಪತ್ತೆಹಚ್ಚಲು ಆಕೆಯ ಚಿತ್ರವನ್ನು ಎಲ್ಲ ಪೊಲೀಸ್ ಠಾಣೆಗಳಲ್ಲಿ ಹಂಚಿಕೊಳ್ಳಲಾಗಿದೆ. ಮೊಮ್ಮಗ ಈ ರೀತಿಯ ಅಮಾನವೀಯ ಕೆಲಸವನ್ನು ಏಕೆ ಮಾಡಿದನೆಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ಮಂಡ್ಯದಲ್ಲೂ ನಡೆದ ಘಟನೆ

ಮಂಡ್ಯದಲ್ಲೂ ಕೂಡ ಇದೇ ರೀತಿಯಾದ ಘಟನೆ ನಡೆದಿದೆ. ಮಾನಸಿಕ ಅಸ್ವಸ್ಥ ತಾಯಿಯನ್ನು ಬೀದಿಯಲ್ಲಿ ಬಿಟ್ಟು ಹೋಗಿರುವ ಘಟನೆ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದಲ್ಲಿ ನಡೆದಿದೆ. ವೃದ್ಧೆಯ ವಿಡಿಯೋ‌ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ‘ಬರುತ್ತೇನೆ, ಇಲ್ಲೇ ಇರು’ ಎಂದು ರಸ್ತೆಯಲ್ಲಿ ತಾಯಿಯನ್ನು ಬಿಟ್ಟು ಮಗ ಹೋಗಿದ್ದ ಎನ್ನಲಾಗಿದೆ.

ಮಗನ ಬರುವಿಕೆಗಾಗಿ ಕಾಯುತ್ತಿದ್ದ ತಾಯಿ, ‘ನನ್ನ ಮಗ ಬಂದು ಕರೆದುಕೊಂಡು‌ ಹೋಗುತ್ತಾನೆ’ ಎನ್ನುತ್ತಿದ್ದರು. ಸುಮಾರು 70 ರಿಂದ 80 ವರ್ಷದ ವೃದ್ಧೆಗೆ ಸ್ಥಳೀಯರು ಆಹಾರ ನೀಡಿ ರಕ್ಷಿಸಿದ್ದಾರೆ. ನಂತರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಿಬ್ಬಂದಿ ವೃದ್ಧೆಯನ್ನು ರಕ್ಷಿಸಿ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...