ಸಿದ್ಧಾಂತಕ್ಕಾಗಿ ಜೈಲಿಗೆ ಹಾಕಲು ಸಾಧ್ಯವಿಲ್ಲ: ನಿಷೇಧಿತ ‘ಪಿಎಫ್ಐ’ನ ನಾಯಕನಿಗೆ ಸುಪ್ರೀಂನಲ್ಲಿ ಜಾಮೀನು

Date:

ಸಿದ್ಧಾಂತದ ಕಾರಣಕ್ಕಾಗಿ ಯಾರನ್ನೂ ಜೈಲಿಗೆ ಹಾಕಲು ಸಾಧ್ಯವಿಲ್ಲ ಎಂದು ಒತ್ತಿ ಹೇಳಿರುವ ಸುಪ್ರೀಂ ಕೋರ್ಟ್‌, ನಿಷೇಧಿತ ಪಿಎಫ್‌ಐ ಸಂಘಟನೆಯ ನಾಯಕ ಅಬ್ದುಲ್‌ ಸತ್ತಾರ್‌ ಅವರಿಗೆ ಜಾಮೀನು ನೀಡಿದೆ.

2022ರ ಏಪ್ರಿಲ್ 16ರಂದು ಕೇರಳದ ಪಾಲಕ್ಕಾಡ್‌ನಲ್ಲಿ ನಡೆದಿದ್ದ ಆರ್‌ಎಸ್‌ಎಸ್‌ ಕಾರ್ಯಕರ್ತ ಶ್ರೀನಿವಾಸನ್ ಕೊಲೆ ಪ್ರಕರಣದಲ್ಲಿ ಅಬ್ದುಲ್ ಸತ್ತಾರ್ ಅವರನ್ನು ಬಂಧಿಸಲಾಗಿತ್ತು. ಅವರ ವಿರುದ್ಧ ಕೊಲೆ ಪಿತೂರಿ ರೂಪಿಸಿದ ಆರೋಪ ಹೊರಿಸಲಾಗಿತ್ತು. ಆ ಕೊಲೆಗೂ ತಮಗೂ ಯಾವುದೇ ಸಂಬಂಧವಿಲ್ಲ. ಪ್ರಕರಣದ ಮುಖ್ಯ ಎಫ್‌ಐಆರ್‌ನಲ್ಲೂ ನನ್ನ ಹೆಸರಿಲ್ಲ ಎಂದು ವಾದಿಸಿದ್ದ ಸತ್ತಾರ್ ಅವರಿಗೆ ಜಾಮೀನು ನೀಡಲು ಈ ಹಿಂದೆ ಕೇರಳ ಹೈಕೋರ್ಟ್‌ ನಿರಾಕರಿಸಿತ್ತು.

ಹೈಕೋರ್ಟ್‌ ಜಾಮೀನು ನಿರಾಕರಿಸಿದ್ದನ್ನು ಪ್ರಶ್ನಿಸಿ ಸತ್ತಾರ್‌ ಅವರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಅಭಯ್ ಎಸ್ ಓಕಾ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರಿದ್ದ ಪೀಠವು ಸತ್ತಾರ್ ಅವರಿಗೆ ಜಾಮೀನು ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಾಮೀನು ನೀಡುವ ಆದೇಶದಲ್ಲಿ ನ್ಯಾಯಮೂರ್ತಿ ಓಕಾ ಅವರು, “ಸಿದ್ಧಾಂತದ ಕಾರಣಕ್ಕಾಗಿ ಯಾರನ್ನಾದರೂ ಜೈಲಿಗೆ ಹಾಕಲು ಸಾಧ್ಯವಿಲ್ಲ. ಇತ್ತೀಚೆಗೆ, ಸಿದ್ಧಾಂತದ ಕಾರಣಕ್ಕಾಗಿ ಜೈಲಿಗಟ್ಟುವ ಟ್ರೆಂಡ್‌ ಹೆಚ್ಚುತ್ತಿದೆ. ಅವರು ನಿರ್ದಿಷ್ಟ ಸಿದ್ಧಾಂತವನ್ನು ಅಳವಡಿಸಿಕೊಂಡಿದ್ದಾರೆ ಎಂಬ ಕಾರಣಕ್ಕೆ ಅವರನ್ನು ಜೈಲಿಗೆ ಹಾಕಲಾಗುತ್ತಿದೆ” ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.

ವಿಚಾರಣೆ ವೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಪರವಾಗಿ ಹಾಜರಾಗಿದ್ದ ವಕೀಲರು, “ಕೊಲೆಗೆ ಸಂಬಂಧಿಸಿದ ಮುಖ್ಯ ಎಫ್ಐಆರ್‌ನಲ್ಲಿ ಸತ್ತಾರ್ ಹೆಸರಿಲ್ಲದಿದ್ದರೂ, ಪಿಎಫ್ಐ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯಕರ್ತರ ನೇಮಕಾತಿ ಮತ್ತು ಶಸ್ತ್ರಾಸ್ತ್ರ ತರಬೇತಿಗೆ ಸಂಬಂಧಿಸಿದಂತೆ ಸತ್ತಾರ್ ಅವರು ಕ್ರಮಗಳನ್ನು ತೆಗೆದುಕೊಂಡಿದ್ದಾರೆ” ಎಂದು ವಾದಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...