‘ಎನ್‌ಇಪಿ’ ಜಾರಿಗೆ ರಾಜ್ಯದ ಮೇಲೆ ಒತ್ತಡ ಹೇರಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Date:

ಹೊಸ ಶಿಕ್ಷಣ ನೀತಿ (ಎನ್‌ಇಪಿ)ಯನ್ನು ಅಳವಡಿಸಿಕೊಳ್ಳಲು ಯಾವುದೇ ರಾಜ್ಯದ ಮೇಲೆ ನ್ಯಾಯಾಲಯವು ಒತ್ತಡ ಹೇರಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ರಾಜ್ಯಗಳಿಗೆ ಎನ್‌ಇಪಿ ಅಳವಡಿಸಿಕೊಳ್ಳಲು ಸೂಚನೆ ನೀಡುವಂತೆ ಕೋರಿದ್ದ ಅರ್ಜಿಯನ್ನು ತಿಸ್ಕರಿಸಿದೆ.

ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಕೇರಳ ಸರ್ಕಾರಗಳು ತಮ್ಮ ರಾಜ್ಯಗಳಲ್ಲಿ ಎನ್‌ಇಪಿಯನ್ನು ಅನುಷ್ಠಾನಗೊಳಿಸುವುದಿಲ್ಲ ಎಂದು ಘೋಷಿಸಿವೆ. ಹೀಗಾಗಿ, ತಮಿಳುನಾಡು ಮೂಲದ ವಕೀಲ, ಬಿಜೆಪಿ ನಾಯಕ ಮಣಿ ಅವರು ಆ ರಾಜ್ಯಗಳಲ್ಲಿ ಎನ್‌ಇಪಿಯನ್ನು ಅನುಷ್ಠಾನಗೊಳಿಸುವಂತೆ ಮತ್ತು ಎನ್‌ಇಪಿ ಅಡಿಯಲ್ಲಿ ತ್ರಿಭಾಷಾ ಪಠ್ಯಕ್ರಮವನ್ನು ಅಳವಡಿಸಿಕೊಳ್ಳುವಂತೆ ನಿರ್ದೇಶನ ನೀಡಬೇಕೆಂದು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಪಿಐಎಲ್‌ ಸಲ್ಲಿಸಿದ್ದರು.

ಕೇಂದ್ರ ಸರ್ಕಾರದ ಕಾನೂನುಗಳು, ಯೋಜನೆಗಳು ಮತ್ತು ನೀತಿಗಳು ಎಲ್ಲ ರಾಜ್ಯ ಸರ್ಕಾರಗಳಿಗೆ ಅನ್ವಯಿಸುತ್ತವೆ. ಅಂತಹ ನೀತಿಯನ್ನು ಜಾರಿಗೆ ತರುವುದು ರಾಜ್ಯ ಸರ್ಕಾರದ ಕರ್ತವ್ಯ. ಇದು ಸಂವಿಧಾನದಲ್ಲಿ ನೀಡಲಾದ ಮೂಲಭೂತ ಕರ್ತವ್ಯ ಮತ್ತು ಹಕ್ಕು ಎಂದು ಅರ್ಜಿಯಲ್ಲಿ ವಾದಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಜೆ ಬಿ ಪಾರ್ದಿವಾಲಾ ಮತ್ತು ಆರ್ ಮಹಾದೇವನ್ ಅವರಿದ್ದ ಪೀಠವು ಅರ್ಜಿಯನ್ನು ವಜಾಗೊಳಿಸಿದೆ.

“ಕ್ಷಮಿಸಿ, ನಾವು (ನ್ಯಾಯಾಲಯ) ಯಾವುದೇ ಆದೇಶವನ್ನು ನೀಡಲು ಸಾಧ್ಯವಿಲ್ಲ. ಎನ್‌ಇಪಿ ರೀತಿಯ ನೀತಿಯನ್ನು ಅಳವಡಿಸಿಕೊಳ್ಳಲು ನಾವು ನೇರವಾಗಿ ರಾಜ್ಯವನ್ನು ಒತ್ತಾಯಿಸಲು ಸಾಧ್ಯವಿಲ್ಲ” ಎಂದು ಹೇಳಿದೆ.

ಎನ್‌ಇಪಿಗೆ ಸಂಬಂಧಿಸಿದಂತೆ ರಾಜ್ಯದ ಕ್ರಮಗಳು ಅಥವಾ ನಿಷ್ಕ್ರಿಯತೆಯು ಯಾವುದಾದರೂ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಿದ್ದರೆ ಮಾತ್ರವೇ ನ್ಯಾಯಾಲಯವು ಮಧ್ಯಪ್ರವೇಶಿಸುತ್ತದೆ. ಇಲ್ಲದಿದ್ದರೆ, ನಾವು ರಾಜ್ಯಗಳ ಮೇಲೆ ಒತ್ತಡ ಹಾಕಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...