ಹೊಂಡಕ್ಕೆ ಬಿದ್ದ ಕಾರು: ಮಸೀದಿಯ ಮೈಕ್‌ ಸದ್ದಿನಿಂದ ಉಳಿಯಿತು 7 ಮಂದಿ ಜೀವ

Date:

ತಡರಾತ್ರಿಯಲ್ಲಿ ತೆರಳುತ್ತಿದ್ದ ಕಾರೊಂದು ಸರಿಯಾಗಿ ರಸ್ತೆ ಕಾಣದೆ ಹೊಂಡಕ್ಕೆ ಬಿದ್ದಿದೆ. ಘಟನೆಯನ್ನು ಗಮನಿಸಿದ ಮಸೀದಿಯ ಇಮಾಮ್‌ವೊಬ್ಬರು ಅಪಘಾತದ ಬಗ್ಗೆ ಮೈಕ್‌ನಲ್ಲಿ ಕೂಗಿದ್ದು, ಎಚ್ಚೆತ್ತ ಜನರು ಸ್ಥಳಕ್ಕೆ ಧಾವಿಸಿ ಕಾರಿನಲ್ಲಿದ್ದವರನ್ನು ರಕ್ಷಿಸಿರುವ ಘಟನೆ ಅಸ್ಸಾಂನಲ್ಲಿ ನಡೆದಿದೆ.

ಅಸ್ಸಾಂನ ಕರೀಮ್‌ಗಂಜ್‌ ಜಿಲ್ಲೆಯ ಶ್ರೀಭೂಮಿ ನೀಲಮ್ ಬಜಾರ್‌ನಲ್ಲಿ ಘಟನೆ ನಡೆದಿದೆ. ಬಹದ್ದೂರ್‌ ಪುರ ಪ್ರದೇಶದಲ್ಲಿ ತೆರಳುತ್ತಿದ್ದ ಕಾರು, ರಸ್ತೆ ಕಾಣದೆ ರಸ್ತೆ ಬದಿಯಲ್ಲಿದ್ದ ಹೊಂಡಕ್ಕೆ ಉರುಳಿದೆ. ಇದನ್ನು ಗಮನಿಸಿದ ಮಸೀದಿಯ ಇಮಾಮ್‌ ಮೌಲಾನಾ ಅಬ್ದುಲ್ ಬಾಸಿತ್ ಅವರು ತಕ್ಷಣವೇ ಘಟನೆ ಬಗ್ಗೆ ಮೈಕ್‌ನಲ್ಲಿ ಕೂಗಿದ್ದಾರೆ. ಮೈಕ್‌ನಲ್ಲಿ ಅನೌನ್ಸ್‌ ಆಗುತ್ತಿದ್ದಂತೆಯೇ ಸ್ಥಳೀಯ ಮುಸ್ಲಿಮರು ಸ್ಥಳಕ್ಕೆ ಧಾವಿಸಿ, ಬಾವಿಗಿಳಿದು ಕಾರಿನಲ್ಲಿದ್ದ 7 ಮಂದಿಯನ್ನು ರಕ್ಷಿಸಿದ್ದಾರೆ.

“ನೀರಿನೊಳಗೆ ಕಾರಿನ ದೀಪಗಳು ಉರಿಯುತ್ತಿದ್ದುದನ್ನು ಗಮನಿಸಿ, ಮಸೀದಿಯ ಧ್ವನಿವರ್ಧಕದಲ್ಲಿ ಜನರನ್ನು ಎಚ್ಚರಿಸಿದೆ. ಜೀವ ಉಳಿಸುವುದು ನಮ್ಮ ಆದ್ಯತೆಯಾಗಿತ್ತು. ಜಾತಿ/ಧರ್ಮದ ಮಾತೇ ಇದರಲಿಲ್ಲ” ಎಂದು ಮದರಸಾ ಜಾಮಿಯಾ ಉಲ್ ಉಲೂಮ್‌ ಫುರ್ಕಾನಿಯಾ ಕರೀಮ್‌ ಗಂಜ್‌ನಲ್ಲಿ ಶಿಕ್ಷಕರಾಗಿರುವ ಬಾಸಿತ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತಕ್ಷಣವೇ ಸ್ಥಳಕ್ಕೆ ಸ್ಥಳೀಯರು ಧಾವಿಸಿದ್ದು, ಹೊಂಡಕ್ಕಿಳಿದು ಕಾರಿನ ಕಿಟಕಿಗಳನ್ನು ಒಡೆದು, ಏಳು ಮಂದಿ ಪ್ರಯಾಣಿಕರನ್ನು ರಕ್ಷಿಸಿದ್ದಾರೆ. ಅದಾದ ಕೆಲವೇ ನಿಮಿಷಗಳಲ್ಲಿ ವಾಹನ ಸಂಪೂರ್ಣವಾಗಿ ಮುಳುಗಿತು. ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ” ಎಂದು ಅವರು ಹೇಳಿದ್ದಾರೆ.

ಅಪಘಾತಕ್ಕೀಡಾಗಿದ್ದವರನ್ನು ತ್ರಿಪುರಾದ ನಿವಾಸಿಗಳು ಎಂದು ಹೆಸರಿಸಿದ್ದಾರೆ. ಘಟನೆಯ ನಂತರ ಸ್ಥಳೀಯ ಬಿಜೆಪಿ ನಾಯಕ ಇಕ್ಬಾಲ್ ಅವರು ಬಾಸಿತ್ ಅವರನ್ನು ಭೇಟಿ ಮಾಡಿ ಅವರನ್ನು ಶ್ಲಾಘಿಸಿದ್ದಾರೆ. ಪೊಲೀಸರು ಘಟನೆಯ ವಿವರಗಳನ್ನು ಸಂಗ್ರಹಿಸಿದ್ದು, ಬಾಸಿತ್‌ ಅವರಿಗೆ ಅಧಿಕೃತ ಗೌರವ ಅಥವಾ ಪ್ರಶಸ್ತಿ ನೀಡುವ ಸಾಧ್ಯತೆಯಿದೆ ಎಂದು ಸ್ಥಳೀಯ ಮೂಲಗಳು ತಿಳಿಸಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...