ಮಹಿಳಾ ಆಯೋಗದ ಮುಖ್ಯಸ್ಥೆಯ ಬಗ್ಗೆ ಪೋಸ್ಟ್; ಮಹುವಾ ಮೊಯಿತ್ರಾ ವಿರುದ್ಧ ಪ್ರಕರಣ

Date:

ರಾಷ್ಟ್ರೀಯ ಮಹಿಳಾ ಆಯೋಗದ (ಎನ್‌ಸಿಡಬ್ಲ್ಯು) ಮುಖ್ಯಸ್ಥೆ ರೇಖಾ ಶರ್ಮಾ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಪ್ರಕರಣ ದಾಖಲಾಗಿದೆ.

ಮಹಿಳಾ ಆಯೋಗ ಶುಕ್ರವಾರ ದೆಹಲಿ ಪೊಲೀಸರಿಗೆ ದೂರು ನೀಡಿದ ನಂತರ ಈ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

“ಎನ್‌ಸಿಡಬ್ಲ್ಯೂ ನಿಂದ ದೂರು ಸ್ವೀಕರಿಸಲಾಗಿದ್ದು, ಟ್ವೀಟ್‌ನ ಮರುಪೋಸ್ಟ್ (ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ) ಮಾಡುವ ಮೂಲಕ ಸಂಸದೆ ಮೊಯಿತ್ರಾ ಅವರು ಸೆಕ್ಷನ್ 79, ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) 2023 ರ ಅಡಿಯಲ್ಲಿ ಅಪರಾಧ ಮಾಡಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೂರನ್ನು ಸ್ವೀಕರಿಸಿದ ದೆಹಲಿ ಪೊಲೀಸ್ ವಿಶೇಷ ಸೆಲ್ ಪ್ರಾಥಮಿಕ ಪರೀಕ್ಷೆಯ ನಂತರ ಪ್ರಕರಣವನ್ನು ದಾಖಲಿಸಿ ತನಿಖೆಯನ್ನು ಪ್ರಾರಂಭಿಸಿದೆ ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ?  ಓರ್ವ ಸಂಸದೆಯ ಧ್ವನಿ ಹತ್ತಿಕ್ಕಿ ಬಿಜೆಪಿ ಭಾರೀ ಬೆಲೆ ತೆತ್ತಿದೆ, 63 ಸ್ಥಾನ ಕಳೆದುಕೊಂಡಿದೆ: ಮಹುವಾ ಮೊಯಿತ್ರಾ  

ಗುರುವಾರ, ಹಾಥರಸ್ ಕಾಲ್ತುಳಿತದ ಸ್ಥಳಕ್ಕೆ ರೇಖಾ ಶರ್ಮಾ ಆಗಮನವನ್ನು ತೋರಿಸುವ ವೀಡಿಯೊದಲ್ಲಿ ಮೊಯಿತ್ರಾ ಕಾಮೆಂಟ್ ಮಾಡಿದ್ದರು. ಈ ವಿಡಿಯೋದಲ್ಲಿ ಒಬ್ಬ ವ್ಯಕ್ತಿ ರೇಖಾ ಅವರಿಗೆ ಛತ್ರಿ ಹಿಡಿದುಕೊಂಡು ಹಿಂದೆ ಹೋಗುತ್ತಿರುವುದನ್ನು ಕಾಣಬಹುದು. ಈ ವಿಡಿಯೋವನ್ನು ಎಕ್ಸ್‌ನಲ್ಲಿ ಹಂಚಿಕೊಳ್ಳಲಾಗಿದೆ.

ರೇಖಾ ಶರ್ಮಾ ತನ್ನ ಸ್ವಂತ ಛತ್ರಿಯನ್ನು ತಾನೇ ಬಳಸಲು ಏಕೆ ಸಾಧ್ಯವಿಲ್ಲ ಎಂದು ಪ್ರಶ್ನಿಸಿದ್ದಾರೆ. ಈ ಎಕ್ಸ್ ಪೋಸ್ಟ್‌ಗೆ ಪ್ರತಿಕ್ರಿಯೆ ನೀಡಿರುವ ಮಹುವಾ ಮೊಯಿತ್ರಾ “ಅವರು (ರೇಖಾ ಶರ್ಮಾ) ತನ್ನ ಬಾಸ್‌ನ ಪೈಜಾಮಾವನ್ನು ಹಿಡಿದಿಟ್ಟುಕೊಳ್ಳುವಲ್ಲಿ ನಿರತರಾಗಿದ್ದಾರೆ” ಎಂದು ಹೇಳಿದ್ದಾರೆ.

ತನ್ನ ವಿರುದ್ಧ ಎಫ್‌ಐಆರ್ ದಾಖಲಾಗುತ್ತಿದ್ದಂತೆ ಮಹಿಳಾ ಆಯೋಗ್ಯ ಮುಖ್ಯಸ್ಥೆ ರೇಖಾ ಶರ್ಮಾ ಅವರು ಇತರೆ ವ್ಯಕ್ತಿಗಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಎಕ್ಸ್‌ ಪೋಸ್ಟ್‌ಗಳ ಸ್ಕ್ರೀನ್‌ಶಾಟ್ ಅನ್ನು ಮಹುವಾ ಮೊಯಿತ್ರಾ ಹಂಚಿಕೊಂಡಿದ್ದಾರೆ.  ಸೋನಿಯಾ ಗಾಂಧಿ, ಮಹಾತ್ಮ ಗಾಂಧಿ ಸೇರಿದಂತೆ ಹಲವಾರು ಮಂದಿಯ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ರೇಖಾ ಶರ್ಮಾ ವಿರುದ್ಧವೂ ಪ್ರಕರಣ ದಾಖಲಾಗಬೇಕು ಎಂದು ನೆಟ್ಟಿಗರು ಆಗ್ರಹಿಸಿದ್ದಾರೆ.

ಮಹುವಾ ಮೊಯಿತ್ರಾ

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...