ರಾಮ ಮಂದಿರ ಟ್ರಸ್ಟ್‌ಗೆ ಅಕ್ರಮವಾಗಿ ದೇವಾಲಯದ ಭೂಮಿ ಮಾರಾಟ ಆರೋಪ; ಪ್ರಕರಣ ದಾಖಲು

Date:

ರಾಮ ಮಂದಿರ ಟ್ರಸ್ಟ್‌ಗೆ ಅಕ್ರಮವಾಗಿ ದೇವಾಲಯದ ಭೂಮಿ ಮಾರಾಟ ಮಾಡಿದ ಆರೋಪದಲ್ಲಿ ಅಯೋಧ್ಯೆಯ ಮಂದಿರವೊಂದರ ಮಾಜಿ ಅರ್ಚಕರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ಅಯೋಧ್ಯೆಯ ದೇವಾಲಯದ ಮಾಜಿ ಅರ್ಚಕ ಅಕ್ರಮವಾಗಿ ದೇವಾಲಯದ ಭೂಮಿಯನ್ನು ಮಾರಾಟ ಮಾಡಿದ್ದಾರೆ. ಈ ಹಿನ್ನೆಲೆ ಅವರ ವಿರುದ್ಧ ಶುಕ್ರವಾರ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ರಾಮ ಮಂದಿರ ಉದ್ಘಾಟನೆಗೆ ದಲಿತರು, ಹಿಂದುಳಿದವರನ್ನು ಆಹ್ವಾನಿಸದ ಮೋದಿ ಸರ್ಕಾರ: ರಾಹುಲ್ ವಾಗ್ದಾಳಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಪಿ ಅರ್ಚಕ ರಮಕಾಂತ ಪಾಠಕ್ ಅಕ್ರಮವಾಗಿ 21,198.8 ಚದರ ಮೀಟರ್ ಆನಂದ ಭವನ ಮಂದಿರದ ಭೂಮಿಯನ್ನು ಟ್ರಸ್ಟ್‌ಗೆ ಮಾರಿದ್ದಾರೆ. 2024ರ ಸೆಪ್ಟೆಂಬರ್ 21ರಂದು ಆರು ಕೋಟಿ ರೂಪಾಯಿಗೆ ಈ ಭೂಮಿಯನ್ನು ಅಕ್ರಮ ಮಾರಾಟ ಮಾಡಿದ್ದಾರೆ ಎಂದು ಫರಿದಾಬಾದ್‌ನ ಕೊಟ್ವಾಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾರಾಟ ಪತ್ರದಲ್ಲಿ ತಪ್ಪು ಮಾಹಿತಿಯಿತ್ತು ಎಂದು ಹೇಳಲಾಗಿದೆ.

ಆನಂದ ಭವನ ದೇವಾಲಯದ ಸಮಿತಿಯು ಈ ಭೂಮಿಯನ್ನು ರಿಜಿಸ್ಟಾರ್ ಮಾಡಿಕೊಂಡಿದ್ದು, ಯಾವುದೇ ವ್ಯಕ್ತಿಗೂ ಈ ಭೂಮಿಯನ್ನು ಮಾರಾಟ ಮಾಡುವ ಹಕ್ಕಿಲ್ಲ ಎಂದು ಉಲ್ಲೇಖಿಸಲಾಗಿದೆ ಎಂದು ದೂರುದಾರರು ಹೇಳಿದ್ದಾರೆ.

ರಮಕಾಂತ್ ಪಾಠಕ್ ಅವರನ್ನು 2016ರಲ್ಲೇ ಆನಂದ ಭವನ ದೇವಾಲಯದ ಅರ್ಚಕ ಸ್ಥಾನದಿಂದ ತೆಗೆದುಹಾಕಲಾಗಿತ್ತು. ರಮಕಾಂತ್‌ ಅವರ ಕೆಲವು ವರ್ತನೆಗಳು ಸಂಶಯಾಸ್ಪದವಾಗಿದ್ದ ಕಾರಣದಿಂದಾಗಿ ಅವರನ್ನು ಅರ್ಚಕ ಸ್ಥಾನದಿಂದ ಕೆಳಗಿಸಲಾಗಿತ್ತು ಎಂದು ಹೇಳಲಾಗಿದೆ.

ಇದನ್ನು ಓದಿದ್ದೀರಾ? ಮೈಕ್ರೋಸ್ಕೋಪು | ಅಯೋಧ್ಯೆ ರಾಮ ಮಂದಿರದಲ್ಲಿ ‘ವಿಜ್ಞಾನ’ ಬಳಕೆ; ನಿಜಕ್ಕೂ ದೇಶದಲ್ಲಿ ಇದೇ ಮೊದಲಾ?

ಇನ್ನು ದೇವಾಲಯದ ಸಮಿತಿಗೆ ಭೂಮಿಯನ್ನು ಅಕ್ರಮವಾಗಿ ಮಾರಾಟ ಮಾಡಿರುವ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲು ಮುಂದಾಗಿದ್ದಾರೆ. ಆದರೆ ಪೊಲೀಸರು ಯಾವ ಕ್ರಮವನ್ನು ಕೂಡಾ ಕೈಗೊಂಡಿಲ್ಲ ಎಂದು ಆರೋಪಿಸಲಾಗಿದೆ.

ಬಳಿಕ ದೇವಾಲಯದ ಸಮಿತಿ ಸದಸ್ಯ ಆನಂದ್ ಪ್ರಕಾಶ್ ಪಾಠಕ್ ಕೋರ್ಟ್ ಮೆಟ್ಟಿಲೇರಿದ್ದು, ಪ್ರಕರಣ ದಾಖಲಿಸುವಂತೆ ಅರ್ಜಿ ಸಲ್ಲಿಸಿದ್ದಾರೆ. “ಸದ್ಯ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಅಗತ್ಯ ಕ್ರಮ ಕೈಗೊಳ್ಳಲಾಗುವುದು” ಎಂದು ಎಸ್‌ಎಚ್‌ಒ ಅಶ್ವಿನಿ ಪಾಂಡೆ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...